ಬಿಸಿ ಬಿಸಿ ಸುದ್ದಿ

ಮಹಿಳೆಯರ ಸಾಧನೆ ಮೆಚ್ಚುವಂತದ್ದು:ಗಂಗಮ್ಮ ಮಣ್ಣೂರ

ಶಹಾಪುರ : ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲ ಅಡೆತಡೆಗಳನ್ನು ಮೀರಿ ಕಲೆ,ಸಾಹಿತ್ಯ,ಸಂಗೀತ,ಸಂಸ್ಕೃತಿ,ರಾಜಕೀಯ,ವಿಜ್ಞಾನ,ತಂತ್ರಜ್ಞಾನ,ಆರ್ಥಿಕ,ಸಾಮಾಜಿಕ,ಹೀಗೆ ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆಯನ್ನು ಮಾಡಿ ಮೆರೆದಿದ್ದಾರೆ ಅವರೆಲ್ಲರ ಆದರ್ಶ ತತ್ವಗಳು ನಮಗೆ ಸ್ಫೂರ್ತಿಯಾಗಿವೆ ಎಂದು ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ಶ್ರೀಮತಿ ಗಂಗಮ್ಮ ಮಣ್ಣೂರ ಹೇಳುದರು.

ಶಹಾಪುರ ತಾಲ್ಲೂಕಿನ ಗೋಗಿ ಗ್ರಾಮದ ಸವಿತಾ ಸಮಾಜ ಕಲ್ಯಾಣ ಮಂಟಪದಲ್ಲಿ ಭಾರತೀಯ ಮಹಿಳಾ ಮೋರ್ಚಾ ಘಟಕದ ವತಿಯಿಂದ ಹಮ್ಮಿಕೊಂಡಿರುವ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಶಹಾಪೂರ ಮಂಡಲ ಬಿಜೆಪಿ ಅಧ್ಯಕ್ಷ ರಾಜುಗೌಡ ಉಕ್ಕಿನಾಳ ಮಾತನಾಡಿ ಪ್ರತಿಯೊಬ್ಬ ಮಹಿಳೆಯರಿಗೆ ಗೌರವ ಕೊಡುವ ಅತ್ಯವಶ್ಯಕವಾಗಿದೆ,ಮಹಿಳೆ ಪ್ರತಿಯೊಂದು ಕ್ಷೇತ್ರದಲ್ಲಿ ದಾಪುಗಾಲು ಹಾಕುತ್ತಿರುವುದು ನಿಜಕ್ಕೂ ಸಂತಸದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.

ಸಮಾರಂಭದ ವೇದಿಕೆ ಮೇಲೆ ಮುಖಂಡರಾದ ಯಲ್ಲಯ್ಯ ನಾಯಕ,ವನದುರ್ಗ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಚನ್ನಮ್ಮ ಜೇರಬಂಡಿ,ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುರೇಖಾ,ಪ್ರಧಾನ ಕಾರ್ಯದರ್ಶಿ ಸಂಗೀತಾ ಹೂಗಾರ,ಮಲ್ಲಿಕಾರ್ಜುನ ಹಿರೇಮಠ,ನಿರ್ಮಲ,ಮೀನಾಕ್ಷಿ,ಭಾಗ್ಯಶ್ರೀ ಕರಣಿಗಿ ತಿಪ್ಪಣ್ಣ ಬಾವಿ,ರಾಘವೇಂದ್ರ ಹಡಪದ್, ವಿಮಲಾಕ್ಷಿ,ಮಾದೇವಪ್ಪ ಅವಂಟಿ,ಸಂಗಣ್ಣ ಬಡಗ ಮಲ್ಲಿಕಾರ್ಜುನ್ ದೋತ್ರೆ,ಹಾಗೂ ಇತರರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬಸವಲಿಂಗಮ್ಮ ಹಾಗೂ ಯಮುನಮ್ಮ ಕೆಂಬಾವಿ ಅವರನ್ನು ಸನ್ಮಾನಿಸಿ ಸತ್ಕರಿಸಲಾಯಿತು ಜೊತೆಗೆ ಆರೋಗ್ಯ ತಪಾಸಣೆ ಕೂಡ ಹಮ್ಮಿಕೊಳ್ಳಲಾಗಿತ್ತು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

13 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

15 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

22 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

22 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago