ಬಿಸಿ ಬಿಸಿ ಸುದ್ದಿ

ಬಜೆಟ್ ನಲ್ಲಿ ರಾಯಚೂರು ವಿವಿಗೆ ಕಡೆಗಣನರ: SFI  ಆಕ್ರೋಶ

ರಾಯಚೂರು:  ರಾಜ್ಯ ಬಿಜೆಪಿ ಸರ್ಕಾರ ಈ ಬಜೆಟ್ ನಲ್ಲಿ  ರಾಯಚೂರು  ವಿವಿ ಅಭಿವೃದ್ಧಿಗೆ ಅನುದಾನ ನೀಡಿಲ್ಲ. ಇದು ಕಲ್ಯಾಣ ಕರ್ನಾಟಕ  ಭಾಗದ ಶೈಕ್ಷಣಿಕ ಸಾಮಾಜಿಕ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಎಸ್ಎಫ್ಐ ಜಿಲ್ಲಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಜಿಲ್ಲಾ ಸಮಿತಿ ಪತ್ರಿಕಾ ಪ್ರಕಟಣೆ ನೀಡಿ, ಹೈದರಾಬಾದ್ ಕರ್ನಾಟಕನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದರೆ ಸಾಲದು ಈ ಭಾಗದ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಅನುದಾನವನ್ನು ನೀಡಬೇಕು. ರಾಯಚೂರು ವಿವಿಗೆ ಅನುದಾನ ನೀಡದೇ  ರಾಜ್ಯ ಸರ್ಕಾರ ಈ ಭಾಗದ ಜನರಿಗೆ ದ್ರೋಹ ಮಾಡಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಎಸ್ಎಫ್ಐ ತೀವ್ರ ಹೋರಾಟ ರೂಪಿಸಲಿದೆ ಎಂದು ಸಂಘಟನೆ ಜಿಲ್ಲಾಧ್ಯಕ್ಷರಾದ ರಮೇಶ ವೀರಾಪೂರು ತಿಳಿಸಿದ್ದಾರೆ.

ರಾಜ್ಯ ಬಜೆಟ್ ಕಲ್ಯಾಣ ಕರ್ನಾಟಕಕ್ಕೆ ತೃಪ್ತಿದಾಯಕ

ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕೇವಲ  29,688 ಕೋಟಿ ರೂಪಾಯಿ 11% ಹಣ ಮಾತ್ರ ನೀಡುವುದರ ಮೂಲಕ ತನ್ನ ಶಿಕ್ಷಣ ವಿರೋಧಿ, ವಿದ್ಯಾರ್ಥಿ ದ್ರೋಹಿ ನೀತಿಯನ್ನು ಮುಂದುವರೆಸಿದೆ. ಕಳೆದ ವರ್ಷದ ಬಜೆಟ್ ಗಾತ್ರಕ್ಕೆ ಹೋಲಿಸಿದರೆ ಗಿಂತಲೂ ಈ ವರ್ಷದ ಬಜೆಟ್ ನಲ್ಲಿ 70 ಕೋಟಿ ಹಣ ಅಂದ್ರೆ 0.3% ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಕಡಿತ ಮಾಡಲಾಗಿದೆ.  ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಮತ್ತೆ ಮಠ ಮಾನ್ಯಗಳಿಗೆ , ಜಾತಿವಾರು ಪ್ರತಿಮೆಗಳ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ಮೀಸಲಿಡುವುದರ ಮೂಲಕ ಬಿಜೆಪಿ ಸರ್ಕಾರಕ್ಕೆ ಶಿಕ್ಷಣ ವ್ಯವಸ್ಥೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿ ಕಣ್ಣೋಟ ಇಲ್ಲ ಎಂಬುದು ಈ ಬಜೆಟ್ ನಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಟೀಕಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ನ್ಯಾಯ ಮತ್ತು ಒಗ್ಗೂಡುವಿಕೆ ಕಾರ್ಯಕ್ರಮ

ಕೊರೋನಾ ದಿಂದ ಶೈಕ್ಷಣಿಕ ಸಮಸ್ಯೆಗಳು ತೀವ್ರವಾಗಿವೆ. ಈ ಸಂದರ್ಭದಲ್ಲಿ  ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಖಾಲಿ ಇರುವ ಶಿಕ್ಷಕ, ಉಪನ್ಯಾಸಕರ ಹುದ್ದೆಗಳ ಭರ್ತಿಯಾಗಬೇಕು, ವಿಶ್ವವಿದ್ಯಾಲಯಗಳಿಗೆ ಅನುದಾನ ಬಿಡುಗಡೆ ಮಾಡಬೇಕು ವಿಶೇಷವಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಳಿಸಬೇಕು, ವಿದ್ಯಾರ್ಥಿ ವೇತನ, ಅಗತ್ಯ  ತರಗತಿ ಕೊಠಡಿ, ಉಚಿತ ಲ್ಯಾಪ್ಟಾಪ್, ಉಚಿತ ಬಸ್ ಪಾಸ್ , ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಕನಿಷ್ಠ 3500/-ರೂ ಹೆಚ್ಚಿಸಬೇಕೆಂದು ರಾಜ್ಯದ ವಿದ್ಯಾರ್ಥಿ ಸಮುದಾಯವನ್ನು ಸಂಘಟಿಸಿ ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನಲ್ಲಿ 30% ಮೀಸಲಿಡಬೇಕು ಎಂದು ಇಡೀ ರಾಜ್ಯಾದ್ಯಂತ  ಹೋರಾಟಗಳನ್ನು ನಡೆಸಿದರು ಈ ರಾಜ್ಯ ಸರ್ಕಾರ ಪರಿಗಣಿಸದೆ ಶಿಕ್ಷಣ ಕ್ಷೇತ್ರಕ್ಕೆ ನಿರ್ಲಕ್ಷ್ಯತೆ ತೋರಿದೆ ಸಂಘಟನೆಯ ಕಾರ್ಯದರ್ಶಿ ಲಿಂಗರಾಜ ಕಂದಗಲ್ ಅಸಮಧಾನ ವ್ಯಕ್ತಪಡಿಸಿದ್ದಾರೆ. .

ಬಿಜೆಪಿ ಸರ್ಕಾರದ ಪ್ರತಿ ಬಾರಿಯೂ ಶಿಕ್ಷಣ ಕ್ಷೇತ್ರಕ್ಕೆ ಹಣ ಕಡಿತ ಮಾಡುವ ಪರಿಪಾಠವನ್ನು ಮುಂದುವರಿಸಿರೋದರಿಂದ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ದ್ರೋಹ ಬಗೆದಿದೆ. ಈ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಇನ್ನಷ್ಟು ಹೋರಾಟಗಳನ್ನು ತೀವ್ರಗೊಳಿಸಲು ವಿದ್ಯಾರ್ಥಿ ಸಮಿತಿ ಕರೆ ನೀಡುತ್ತದೆ ಎಂದು ತಿಳಿಸಿದ್ದಾರೆ

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago