ಬಿಸಿ ಬಿಸಿ ಸುದ್ದಿ

ಕಲಬುರಗಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಕಲಬುರಗಿ: ವಿಶ್ವ ಯೋಗ ದಿನಾಚರಣೆ ನಿಮಿತ್ತ ಜಿಲ್ಲೆ ಹಾಗೂ ನಗರದಾದ್ಯಂತ ಎಲ್ಲೆಡೆ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಪತಂಜಲಿ ಯೋಗ ಸಮಿತಿ, ಭ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ, ಭೂಮಿ ಯೋಗ ಫೌಂಡೇಶನ್, ಬಸವೇಶ್ವರ ಸಮಾಜ ಸೇವಾ ಬಳಗ ಸೇರಿದಂತೆ ನಗರದ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಯೋಗ, ಧ್ಯಾನ, ವ್ಯಾಯಾಮ ಮಾಡುವ ಮೂಲಕ ಇಂದು ಯೋಗ ದಿನವನ್ನು ಆಚರಿಸಲಾಯಿತು.

ನಗರದ ಪ್ರಮುಖ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಶರಣಬಸವೇಶ್ವರ ಪಬ್ಲಿಕ್ ಶಾಲೆಯಲ್ಲಿ ವಿಜಯಕರ್ನಾಟಕ ಸಹಯೋಗದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ೧೮೦೦ ಮಕ್ಕಳು, ಶಿಕ್ಷಕರು, ಸಾರ್ವಜನಿಕರು ಭಾಗವಹಿಸಿದ್ದರು. ಅದರಂತೆ ಪ್ಪ ಪಬ್ಲಿಕ್ ಶಾಲೆಯಲ್ಲೂ ಕೂಡ ಯೋಗ ದಿನ ಆಚರಿಸಲಾಯಿತು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಗುಲ್ಬರ್ಗ ವಿಶ್ವವಿದ್ಯಾಲಯ ಮುಂತಾದ ಕಡೆ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಗೂ ಸಾರ್ವಜನಿಕರು ಅತ್ಯಂತ ಉತ್ಸಾಹದಲ್ಲಿ ಭಾಗವಹಿಸಿದ್ದರು.
ಯೋಗ ದಿನಾಚರಣೆ ನಿಮಿತ್ತ ಎನ್.ವಿ. ಕಾಲೇಜು ಮೈದಾನ, ಪಬ್ಲಿಕ್ ಗಾರ್ಡ್‌ನ್, ಬಡಾವಣೆಗಳಲ್ಲಿರುವ ದ್ಯಾನಗಳಲ್ಲಿ ಸಾರ್ವಜನಿಕರು, ವಾಯುವಿಹಾರಕ್ಕೆ ತೆರಳಿದವರು ಸಹ ವಿವಿಧ ಆಸನ, ಧ್ಯಾನ, ಪ್ರಾಣಾಯಾಮಗಳನ್ನು ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಯೋಗ ಸಾಧನೆಯಿಂದ ನಿರೋಗಿಯಾಗಿರಬಹುದು, ಸಮಾಧಾನಿಯಾಗಿರಬಹುದು, ಏಕಾಗ್ರತೆ ಗಳಿಸಬಹುದು. ಆರೋಗ್ಯವೆಂದರೆ ರೋಗಮುಕ್ತವಾಗಿರುವುದು ಎಂದರ್ಥವಲ್ಲ. ದೇಹದ ಪ್ರತಿಯೊಂದು ಕೋಶವೂ ಜೀವನಕ್ಕೆ ತುಡಿಯುವಂತೆ ಮಾಡುವುದೇ ಆರೋಗ್ಯ. ಅಂತಹ ಸದೃಢ ಆರೋಗ್ಯಕ್ಕಾಗಿ ಯೋಗ, ಧ್ಯಾನ, ವ್ಯಾಯಾಮ ಅಗತ್ಯ ಎಂದು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ಅಭಿಪ್ರಾಯಪಟ್ಟರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago