ಜಿಲ್ಲಾಧಿಕಾರಿ ಕಚೇರಿ‌ ಮುಂದೆ ವೈದ್ಯನಿಗೆ ಚಾಕಿವಿನಿಂದ ಕೊಲೆಗೆ ಯತ್ನ

0
101

ಕಲಬುರಗಿ: ದಂತ ವೈದ್ಯರೊಬ್ಬರನ್ನು ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಮಧ್ಯಾಹ್ನ ನಡೆದಿದೆ.

ಸಿದ್ಧಗಂಗಾ ಡೆಂಟಲ್ ಆಸ್ಪತ್ರೆಯ ಡಾ.ವಿಶ್ವನಾಥ್ ಪಾಟೀಲ್  ರಸ್ತೆ ಬದಿ ಕಾರು ನಿಲ್ಲಿಸಿ ವೈದ್ಯರು ಆಸ್ಪತ್ರೆಗೆ ಹೋಗುತ್ತಿದ್ದಾಗ ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾನೆ.

Contact Your\'s Advertisement; 9902492681

ಗಾಯಗೊಂಡ ವಿಶ್ವನಾಥ್ ಹೊಟ್ಟೆಯಿಂದ ರಕ್ತಸ್ರಾವವಾಗಿದ್ದು,ದುಷ್ಕರ್ಮಿಯನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ.

ಈತನ ಬಳಿ ನೋಟ್ ಬುಕ್ ಪತ್ತೆಯಾಗಿದ್ದು, ಇದರಲ್ಲಿ ಡಾ.ವಿಶ್ವನಾಥ್ ಅವರ ಬಗ್ಗೆ ಬರೆದುಕೊಂಡಿದ್ದಾನೆ. ಮೇಲ್ನೋಟಕ್ಕೆ ಹಳೆ ವೈಷಮ್ಯವೇ ಕಾರಣ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕೊಲೆಗೆ ಯತ್ನಿಸಿದ ಆರೋಪಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here