ಕಲಬುರಗಿ: ಕೋಟನೂರ (ಡಿ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (ದಕ್ಷಿಣ ವಲಯದ) ಸಹ ಶಿಕ್ಷಕಿಯಾದ ಸುಮಾ ಜೆ. ರೆÀಡ್ಡಿ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರಿನ ಶ್ರೀ ಚೌಡಯ್ಯ ಮೆಮೋರಿಯಲ್ ಹಾಲ್‍ದಲ್ಲಿ ಅನುಪಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಜ್ಯದ ಉಪಮುಖ್ಯಮಂತ್ರಿ ಡಾ. ಅಶ್ವಥ ನಾರಾಯಣ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಿ, ಕಲಬುರಗಿ ಜಿಲ್ಲಾಧ್ಯಕ್ಷ ಮಲ್ಲಯ್ಯ ಗುತ್ತೇದಾರ್ ಹಾಗೂ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು ಮೌರ್ಯ ಅವರು ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ವೈದ್ಯನಿಗೆ ಚಾಕಿವಿನಿಂದ ಕೊಲೆಗೆ ಯತ್ನ
ಈ ಶಿಕ್ಷಕಿಯರ ಸೇವೆಯನ್ನು ಗುರುತಿಸಿ ಈ ಅನುಪಮ ಸೇವಾ ಪ್ರಶಸ್ತಿ ನೀಡಲಾಗುತ್ತಿದ್ದು, ಕಲಬುರಗಿ ವಿಭಾಗದ ಕಲಬುರಗಿ ಜಿಲ್ಲೆಗೆ ಶಿಕ್ಷಕಿ ಸುಮಾ ಜೆ. ರೆÀಡ್ಡಿ ಅವರಿಗೆ ಈ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿ ಪಡೆದಿದ್ದಕ್ಕಾಗಿ ಕೋಟನೂರ (ಡಿ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು, ಶಾಲೆಯ ಮುಖ್ಯ ಗುರುಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಕೋಟನೂರ (ಡಿ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಸೂರ್ಯಕಾಂತ ಹೊನ್ನಕಿರಣಗಿ ಅವರು ತಿಳಿಸಿದ್ದಾರೆ.