ಕಲಬುರಗಿಯನ್ನು ಮಾಲಿನ್ಯ ಮುಕ್ತ ಜಿಲ್ಲೆಯನ್ನಾಗಿಸಿ: ಅನಂತ ಹೆಗಡೆ ಆಶೀಸರ

0
105

ಕಲಬುರಗಿ: ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿμÉೀಧ ಹಾಗೂ ಹೋಟೆಲ್ಗಳಲ್ಲಿ ಜೈವಿಕ ಅನಿಲ ಬಳಸುವುದರ ಮೂಲಕ ಕಲಬುರಗಿಯನ್ನು ಮಾಲಿನ್ಯ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕರ್ನಾಟಕ ಜೀವ ವೈವಿದ್ಯ ಸಮಿತಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಕರೆ ನೀಡಿದರು.

ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದ್ದು, ಅದನ್ನು ನಿಯಂತ್ರಿಸುವ ಜವಾಬ್ದಾರಿ ಸಮಿತಿಯದ್ದಾಗಿದೆ. ಪ್ಲಾಸ್ಟಿಕ್ ಬಳಕೆ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ನಗರದ ಅನೇಕ ಕಾರ್ಖಾನೆ ಹಾಗೂ ಹೋಟೆಲ್ಗಳಲ್ಲಿ ರಸಾಯನಿಕ ಗ್ಯಾಸ್ ಅಧಿಕ ಪ್ರಮಾಣದಲ್ಲಿ ಬಳಸಲಾಗುತ್ತಿದೆ. ಜೈವಿಕ ಅನಿಲ ಬಳಸುವುದರ ಮೂಲಕ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೆಲಸಗಳು ಆಗಬೇಕಿದೆ ಎಂದು ಅವರು ಸೂಚಿಸಿದರು.

Contact Your\'s Advertisement; 9902492681

ಶಿಕ್ಷಕಿ ಸುಮಾ ರೆಡ್ಡಿ ಅವರಿಗೆ ಅನುಪಮ ಸೇವಾ ಪ್ರಶಸ್ತಿ ಪ್ರದಾನ

ಮೇ 22ರಂದು ಜಾಗತಿಕ ಜೀವ ವೈವಿಧ್ಯ ದಿನ ಆಚರಿಸುತ್ತಿದ್ದು, ಆ ದಿನ ಕೇವಲ ಆಚರಣೆ ಆಗದೆ ಪ್ರತಿಯೊಂದು ಗ್ರಾಮ ಪಂಚಾಯತಿಯಲ್ಲಿಯೂ ಸಹ ಗಿಡ ನೆಡುವುದು, ಕೆರೆ ಶುಚಿಗೊಳಿಸುವುದು, ನಗರದಲ್ಲಿ ಸ್ವಚ್ಛತಾ ಕಾರ್ಯಕೈಗೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.

ರಾಜ್ಯದಲ್ಲಿರುವ 6,010 ಗ್ರಾಮ ಪಂಚಾಯತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಗಳಿಗೆ ಇದೇ ತಿಂಗಳಿಂದ ಜೀವ ವೈವಿಧ್ಯ ಕಾಯ್ದೆ, ಸಮಿತಿ ಹಾಗೂ ಚಟುವಟಿಕೆಗಳ ಕುರಿತು ತರಬೇತಿ ನೀಡಲಾಗುವುದು, ಪ್ರತಿಯೊಂದು ಗ್ರಾಮ, ಪಟ್ಟಣ ಹಾಗೂ ತಾಲೂಕುಗಳಲ್ಲಿರುವ ನೈಸರ್ಗಿಕ ಸಂಪತ್ತು, ಅಪರೂಪದ ಸಸಿ, ಪ್ರಾಣಿ, ಬೆಟ್ಟ-ಗುಡ್ಡ ಹಾಗೂ ಜಾನುವಾರುಗಳ ದಾಖಲಾತಿ ಮಾಡಿ ಸಂರಕ್ಷಿಸುವ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ವಿವರಿಸಿದರು.

ಜಿಲ್ಲಾಧಿಕಾರಿ ಕಚೇರಿ‌ ಮುಂದೆ ವೈದ್ಯನಿಗೆ ಚಾಕಿವಿನಿಂದ ಕೊಲೆಗೆ ಯತ್ನ

ಜೀವ ವೈವಿಧ್ಯ ಸಮಿತಿಯೂ ಸಕ್ರಿಯವಾಗಿ ಕೆಲಸ ಮಾಡಲು ಯೋಜನೆ ಈಗಾಗಲೇ ರೂಪಿಸಲಾಗಿದೆ. ಕೆರೆ, ನದಿ ಹಾಗೂ ನಮ್ಮ ಸುತ್ತಮುತ್ತಲಿನ ನೈಸರ್ಗಿಕ ಸಂಪತ್ತು ರಕ್ಷಿಸುವುದರ ಕುರಿತು ಸಮಿತಿಯಲ್ಲಿ ಚರ್ಚಿಸಲಾಗುವುದು. ಕೃಷಿ, ತೋಟಗಾರಿಕೆ ಕುರಿತು ರೈತರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸುವ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಸುಮಾರು 8 ಸಾವಿರ ಹೆಕ್ಟೇರ್ ಡೀಮ್ಡ್ (ಪರಿಭಾವಿತ) ಅರಣ್ಯ ಪ್ರದೇಶವಿದ್ದು, ಅಲ್ಲಿ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಸಹಯೋಗದೊಂದಿಗೆ ಪರಿಸರ ಪ್ರೇಮಿಗಳು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಹಸಿರನ್ನು ಹೆಚ್ಚಾಗಿ ಬೆಳೆಸಬೇಕು. ಅಪರೂಪದ ಹಾಗೂ ಅವನತಿ ಅಂಚಿನಲ್ಲಿ ಇರುವ ಪ್ರಾಣಿ, ಪಕ್ಷಿ, ಗಿಡ, ಮರಗಳನ್ನು ಪತ್ತೆ ಹಚ್ಚಿ ಅವುಗಳ ಬಗ್ಗೆ ಅಧ್ಯಯನ ನಡೆಸಿ ಮುಂದಿನ ಪೀಳಿಗೆ ತಿಳಿಯುವಂತೆ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಔಷಧಿ ಗಿಡಮೂಲಿಕೆ ಮಂಡಳಿ ವರದಿ ಸಿದ್ದಪಡಿಸಬೇಕು ಎಂದರು.

ಪ್ರಬಲ ಜಾತಿಗಳನ್ನು 2(ಎ) ಸಮುದಾಯಕ್ಕೆ ಸೇರ್ಪಡೆಗೊಳಿಸಬಾರದೆಂದು ಸಿಎಂ ಬಳಿ ನಿಯೋಗ

ಈ ಪತ್ರಿಕಾಗೋಷ್ಠಿಯಲ್ಲಿ ಕಲಬುರಗಿ ವಿಭಾಗೀಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ ವಾನತಿ, ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here