ಸುರಪುರ: ಈ ಸಾಲಿನ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಇಟ್ಟಿದ್ದ ಯಾವುದೇ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸರಕಾರ ಯಾವುದೇ ಘೋಷಣೆಗಳನ್ನು ಕೈಗೊಳ್ಳದೇ ಇರುವುದು ರಾಜ್ಯದಾದ್ಯಂತ ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ನಿರಾಸೆಯನ್ನು ತಂದಿದ್ದು ಈ ಬಜೆಟ್ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ಸಂತಸವನ್ನು ತಂದಿಲ್ಲ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಸಿಐಟಿಯು ರಾಜ್ಯ ಉಪಾಧ್ಯಕ್ಷೆ ಸುರೇಖಾ ಕುಲಕರ್ಣಿ ಹೇಳಿದ್ದಾರೆ.
ಈ ಕುರಿತು ಅವರು ಪತ್ರಿಕೆಯೊಂದಿಗೆ ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಜೇಷ್ಠತೆ ಆಧಾರದ ಮೇಲೆ ಗೌರವ ಧನ ನೀಡುವುದು,ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿವಿಧ ಹಂತಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ನಡೆಸುತ್ತಾ ಬಂದಿದ್ದು ಇತ್ತೀಚೆಗೆ ಮಾರ್ಚ೪ ರಂದು ಕೂಡಾ ಬೆಂಗಳೂರನಲ್ಲಿ ಬೃಹತ್ ಹೋರಾಟ ಕೈಗೊಳ್ಳಲಾಯಿತು.
ಅಕ್ರಮ ಸ್ಪೋಟಕ ಸಂಗ್ರಹ ಸ್ಥಳಕ್ಕೆ ಜಿಲ್ಲಾ ಕಲ್ಲು ಗಣಿಗಾರಿಕೆ ನಿಯಂತ್ರಣ ಸಮಿತಿ ಭೇಟಿ
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರು ಆಗಮಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಕೂಡಾ ನೀಡಿದ್ದರು ಆದರೆ ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಂಧಪಟ್ಟ ಯಾವುದೇ ಬೇಡಿಕೆಯನ್ನು ಈಡೇರಿಸುವ ಯಾವುದೇ ಘೋಷಣೆಗಳು ಸರಕಾರ ಘೋಷಿಸಲಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು ಮುಂದಿನ ದಿನಗಳಲ್ಲಿ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.