ಬಿಸಿ ಬಿಸಿ ಸುದ್ದಿ

ಹಿಂಸೆ ಯಾವುದಕ್ಕೂ ಪರಿಹಾರವಲ್ಲ – ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳನ್ನು ಸಂಪರ್ಕಿಸಿ‌

ಬೆಂಗಳೂರು: ಹಿಂಸಾಚಾರದಂತಹ ಅನವಶ್ಯಕ ಘಟನೆಗಳಿಂದ ಸಾವಿರಾರು ಉದ್ಯೋಗಿಗಳ ಜೀವನ ಬೀದಿಪಾಲಾಗುವ ಸಮಸ್ಯೆ ಎದುರಾಗುತ್ತದೆ. ಇನ್ನು ಮುಂದೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಿ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್‌ ವಿಸ್ಟ್ರಾನ್‌ ಉದ್ಯೋಗಿಗಳಿಗೆ ಸಲಹೆ ನೀಡಿದರು.

ಇತ್ತೀಚಿನ ಘಟನೆಯ ನಂತರ ಉತ್ಪಾದನೆ ಆರಂಭಿಸಿರುವ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್‌ ಕಂಪನಿಗೆ ರಾಜ್ಯ ಸರಕಾರದ ಉನ್ನತ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಅವರು ಕಾರ್ಮಿಕರ ಈಗಿನ ಸ್ಥಿತಿಗತಿಯ ಬಗ್ಗೆ ವಿಚಾರಿಸಿದರು. ಕಾರ್ಮಿಕರು ಕೆಲವೇ ಜನರ ಮುಂಗೋಪದಿಂದಾಗಿ ಸಾವಿರಾರು ಕಾರ್ಮಿಕರು ಸಮಸ್ಯೆ ಅನುಭವಿಸಬೇಕಾಯಿತು ಎಂದು ಅಂದು ನಡೆದ ಪರಿಸ್ಥಿತಿಯನ್ನು ಸಚಿವರ ಮುಂದೆ ವಿವರಿಸಿದರು.

ಸಂಸದ ಜಾಧವ್ ಗೆ ಶಾಸಕ ಖರ್ಗೆ ತಿರುಗೇಟು

ನಂತರ ಸಚಿವ ಜಗದೀಶ್‌ ಶೆಟ್ಟರ್‌ ಅವರು ಮಾತನಾಡಿ, ಹಿಂಸಾಚಾರ ದಂತಹ ಅನವಶ್ಯಕ ಘಟನೆಗಳಿಂದ ಯಾವುದೇ ಸಮಸ್ಯೆಗೂ ಪರಿಹಾರ ದೊರಕುವುದಿಲ್ಲ. ಅಂದು ನಡೆದ ಘಟನೆಯಿಂದಾಗಿ ಕಾರ್ಖಾನೆ ಮುಚ್ಚಬೇಕಾಯಿತು. ಅಲ್ಲದೆ, ಸಾವಿರಾರು ಕಾರ್ಮಿಕರು ಹಲವಾರು ಅನವಶ್ಯಕ ಗೊಂದಲಕ್ಕೀಡಾಗಬೇಕಾಯಿತು.

ಆದ್ದರಿಂದ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉದ್ಭವವಾದಲ್ಲಿ ನಿಮ್ಮ ಮೇಲಾಧಿಕಾರಿಗಳೀಗೆ ಮೊದಲು ತಿಳಿಸಬೇಕು. ಅಲ್ಲಿಯೂ ಪರಿಹಾರ ದೊರಕದೇ ಇದ್ದ ಸಂಧರ್ಭದಲ್ಲಿ ಸರಕಾರಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸಲಹೆ ನೀಡಿದರು.

ವ್ಯಾಪಾರಿಗಳ ಮೇಲೆ GST ಪರಿಣಾಮ ಕುರಿತು ವೆಬಿನಾರ್

10 ವರ್ಷಗಳ ಹಿಂದೆ ಕೋಲಾರ ಜಿಲ್ಲೆಗೆ ಭೇಟಿ ನೀಡಿದ್ದ ಸಂಧರ್ಭದಲ್ಲಿ ಇಲ್ಲಿನ ಜನರು ಉದ್ಯೋಗಕ್ಕಾಗಿ ಬೆಂಗಳೂರ ನಗರಕ್ಕೆ ದಿನ ನಿತ್ಯ ಅಲೆದಾಡುತ್ತಿದ್ದ ಪರಿಸ್ಥಿತಿ ಇತ್ತು. ಈಗ ಜಿಲ್ಲೆಗೆ ಕೈಗಾರಿಕೆಗಳು ಹೆಚ್ಚಾಗಿ ಬರುತ್ತಿದ್ದು, ಸ್ಥಳೀಯವಾಗಿ ಉದ್ಯೋಗಾವಕಾಶಗಳು ಹೆಚ್ಚಾಗುತ್ತಿವೆ. ಇದನ್ನ ಅಭಿವೃದ್ದಿ ಪಡಿಸಬೇಕೇ ಹೊರತು ಇಂತಹ ಘಟನೆಗಳಿಂದ ಕೆಟ್ಟ ಅಭಿಪ್ರಾಯ ಮೂಡಿಸುವಂತಾಗಬಾರದು ಎಂದು ಹೇಳಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಗೌರವ್‌ ಗುಪ್ತಾ* ಮಾತನಾಡಿ, ಸಮಸ್ಯೆ ಉದ್ಭವವಾಗುವ ಸಮಯದಲ್ಲಿ ಅಧಿಕಾರಿಗಳು ಭೇಟಿ ನೀಡುವ ಪರಿಪಾಠವನ್ನು ಬಿಡಬೇಕು. ಆಗಾಗ್ಗೆ ಕೈಗಾರಿಕೆಗಳಿಗೆ ಭೇಟಿ ನೀಡಿ ಅಲ್ಲಿನ ಸೌಕರ್ಯಗಳು ಹಾಗೂ ಆಗಬೇಕಾದ ಕಾರ್ಯಗಳ ಬಗ್ಗೆ ಸಲಹೆ ನೀಡಬೇಕು ಮತ್ತು ಕಾರ್ಮಿಕರ ಸಂಕಷ್ಟಗಳನ್ನು ಆಲಿಸಬೇಕು ಎಂದು ಸೂಚನೆ ನೀಡಿದರು.

ಘತ್ತರಗಾ ಗ್ರಾಮದಲ್ಲಿ ಶಾಲೆ, ದೇವಸ್ಥಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಒತ್ತಾಯ

ಈ ಸಮಯದಲ್ಲಿ ಕೆಐಎಡಿಬಿ ಸಿಇಓ ಡಾ. ಶಿವಶಂಕರ್‌, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್‌ ಕೃಷ್ಣಾ, ವಿಸ್ಟ್ರಾನ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸುದಿಪ್ತೋ ಗುಪ್ತಾ, ಕೊಲಾರ ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿಗಳ, ಕೆಐಎಡಿಬಿ ಮುಖ್ಯ ಇಂಜಿನೀಯರ್‌ ಬಿ.ಕೆ ಪವಿತ್ರ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು* ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

22 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago