ಸುರಪುರ: ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಯಾದಗಿರಿ ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಮತ್ತು ತಾಲೂಕಿನ ಎಲ್ಲಾ ಬ್ಯಾಂಕ್‌ಗಳ ವ್ಯವಸ್ಥಾಪಕರ ಸಭೆಯನ್ನು ನಡೆಸಲಾಯಿತು.
ಇದಕ್ಕೂ ಮುನ್ನ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲು ಆಗಮಿಸಿದ್ದ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆಯವರು ಇದೇ ವಿಷಯದ ಕುರಿತು ಮನವಿ ಸಲ್ಲಿಸಲು ಆಗಮಿಸಿದ ಹೋರಾಟಗಾರರಿಗೆ ಸಭೆಯಲ್ಲಿ ಪಾಲ್ಗೊಳ್ಳಲು ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವಾಗ ಸಭೆಯಿಂದ ಹೊರ ಬಂದ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಮತ್ತು ವೆಂಕೋಬ ದೊರೆಯ ಮದ್ಯೆ ಕೆಲಕಾಲ ಮಾತಿನ ವಾಗ್ವಾದವು ನಡೆಯಿತು.
ಹಿಂಸೆ ಯಾವುದಕ್ಕೂ ಪರಿಹಾರವಲ್ಲ – ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳನ್ನು ಸಂಪರ್ಕಿಸಿ
ನಂತರ ನಡೆದ ಸಭೆಯಲ್ಲಿ ಭಾಗವಹಿಸಿದ್ದ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ ಅವರು,ತಾಲೂಕಿನ ಎಲ್ಲಾ ಬ್ಯಾಂಕ್‌ಗಳ ವ್ಯವಸ್ಥಾಪಕರಿಗೆ ಸೂಚನೆ ನೀಡಿ ನಿಮ್ಮ ನಿಮ್ಮ ಶಾಖೆಗಳಿಗೆ ಸರಕಾರದ ವಿವಿಧ ಯೋಜನೆಗಳಡಿಯಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ಪರಿಶೀಲಿಸಿ ನಿಯಮನುಸಾರವಾಗಿರುವ ಅರ್ಜಿದಾರರಿಗೆ ಸತಾಯಿಸದೆ ತ್ವರಿತವಾಗಿ ಸಾಲ ನೀಡುವಂತೆ ತಿಳಿಸಿದರು.ಇದಕ್ಕೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಧ್ವನಿಗೂಡಿಸಿ ಯಾವುದೇ ಸಾಲದ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೆ ತ್ವರಿತವಾಗಿ ಇತ್ಯರ್ಥಗೊಳಿಸಲು ಸೂಚಿಸಿದರು.
ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಪಾಡಲು ಬದ್ದ: ಸಿದ್ದರಾಮಯ್ಯ
ಸಭೆಯಲ್ಲಿ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಉಸ್ತುವಾರಿ ಜಿಲ್ಲಾ ಸಮಿತಿಯ ಸದಸ್ಯ ರಮೇಶ ದೊರೆ ಆಲ್ದಾಳ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ವೆಂಕಟೇಶ ಬೇಟೆಗಾರ ಸೇರಿದಂತೆ ಅನೇಕಜನರು ಹಾಗು ಬ್ಯಾಂಕ್‌ಗಳ ವ್ಯವಸ್ಥಾಪಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…