ಸುರಪುರ: ಹೊಟ್ಟೆ ನೋವು ತಾಳದೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ಸುಮಿತ್ರಾ ಸಣ್ಣೆಪ್ಪ ಎಂಬುವ ಯುವತಿಯೆ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ.ಯುವತಿಗೆ ಮುಂಚೆಯಿಂದಲೂ ಹೊಟ್ಟೆನೋವಿತ್ತು ಆದರೆ ಮಂಗಳವಾರ ವಿಪರಿತ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ನೋವು ತಾಳದೆ ಯುವತಿ ಮನೆಯಲ್ಲಿದ್ದ ಕ್ರಿಮಿನಾಶಕವನ್ನು ಸೇವಿಸಿದ್ದಾಳೆ,ನಂತರ ಮನೆಯವರು ಸುರಪುರದ ತಾಲೂಕು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ, ಆದರೆ ಚಿಕಿತ್ಸೆ ಫಲಿಸದೆ ಯುವತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.