ಶಹಾಬಾದ: ನಗರದ ಎಸ್.ಜಿ.ವರ್ಮಾ ಹಿಂದಿ ಪ್ರೌಢಶಾಲೆಯ ವಿದ್ಯಾರ್ಥಿಯೊಬ್ಬನಿಗೆ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾದರಿಂದ ತಹಸೀಲ್ದಾರ ಸುರೇಶ ವರ್ಮಾ, ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ತಾಲೂಕಾ ಆರೋಗ್ಯ ಅಧಿಕಾರಿ ದೀಪಕ್ ಪಾಟೀಲ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಬುಧವಾರದಂದು ಶಾಲೆಗೆ ಬೇಟಿ ನೀಡಿದರು.
ಇದೇ ಸಂದರ್ಭದಲ್ಲಿ ತಹಸೀಲ್ದಾರ ಸುರೇಶ ವರ್ಮಾ ಮಾತನಾಡಿ, ಶಾಲೆಯ ವಿದ್ಯಾರ್ಥಿಯೊಬ್ಬನಿಗೆ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾದರಿಂದ ಎಲ್ಲಾ ವಿದ್ಯಾರ್ಥಿಗಳ, ಶಿಕ್ಷಕರ ಹಾಗೂ ಸಿಬ್ಬಂದಿಗಳ ಕೋವಿಡ್ ಸ್ಯಾಂಪಲ್ ಸಂಗ್ರಹಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ತಿಳಿಸಿದರು.
ಸುರಪುರ:ಹೊಟ್ಟೆ ನೋವು ತಾಳದೆ ಯುವತಿ ಆತ್ಮಹತ್ಯೆ
ಅಲ್ಲದೇ ಕೋವಿಡ್ ಪರೀಕ್ಷೆಗೆ ಒಳಗಾದ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗಳು ವರದಿ ಬರುವವರೆಗೂ ಆದಷ್ಟು ಮನೆಯಿಂದ ಹೊರಗಡೆ ಬರಕೂಡದು.ಅಲ್ಲದೇ ಮನೆಯ ಕುಟುಂಬದವರೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ.ಯಾರಿಗಾದರೂ ಜ್ವರ, ನೆಗಡಿ, ಕೆಮ್ಮಿನ ಲPಣಗಳು ಕಾಣಿಸಿಕೊಂಡರೆ ಕೂಡಲೇ ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಗಾಗಿ ಎಂದರು.ಕೊರೊನಾ ಮಹಾಮಾರಿಯ ಎರಡನೇ ಹರಡುತ್ತಿರುವುದರಿಂದ ಬೇಜವಾಬ್ದಾರಿತನ ತೋರದೇ ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಎಂದು ಶಿಕ್ಷಕರಿಗೆ ಹಾಗೂ ಸಿಬ್ಬಂದಿಗಳಿಗೆ ತಿಳಿಸಿದರು.
ಅಲ್ಲದೇ ಶಾಲೆಯ ಎಲ್ಲಾ ಕೋಣೆಗಳನ್ನು ಹಾಗೂ ಶೌಚಾಲಯಗಳನ್ನು ಸಂಪೂರ್ಣ ಸ್ಯಾನಿಟೈಜ್ ಮಾಡಬೇಕು.ನಗರದಲ್ಲಿ ಕೊರೊನಾ ಎರಡನೇ ಅಲೆ ಹರಡುತ್ತಿರುವ್ಯದರಿಂದ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು.ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚಿಸಿ.ಮಾಸ್ಕ್ ಧರಿಸದವರಿಗೆ ದಂಡ ಹಾಕಿ ಎಚಿದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪನವರಿಗೆ ಸೂಚಿಸಿದರು.
ಸರಕಾರದ ಯೋಜನೆಗಳ ಅಡಿ ಅರ್ಜಿ ಸಲ್ಲಿಸಿದವರಿಗೆ ಸಾಲ ನೀಡಿ ಇಒ ಅಂಬ್ರೇಶ ಸೂಚನೆ
ಕಳೆದ ಐದಾರು ದಿನಗಳ ಹಿಂದಷ್ಟೆ ಎಸ್.ಜಿ.ವರ್ಮಾ ಹಿಂದಿ ಪ್ರೌಢಶಾಲೆಯ ವಿದ್ಯಾರ್ಥಿಯೊಬ್ಬ ನಗರದ ಸರಕಾರಿ ವಸತಿ ನಿಲಯದಲ್ಲಿ ದಾಖಲಾತಿ ಪಡೆಯಲು ಹೋದಾಗ, ಅಲ್ಲಿನ ಮೇಲ್ವಿಚಾರಕರು ದಾಖಲಾತಿ ಪಡೆಯಬೇಕಾದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.ಅದರಂತೆ ಆತ ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾನೆ. ಅಲ್ಲದೇ ಎರಡು ಮೂರು ದಿನಗಳಿಂದ ಶಾಲೆಗೂ ಹೋಗಿದ್ದಾನೆ.
ಅವನಲ್ಲಿ ಕೋವಿಡ್‌ನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ನಂತರ ನಾಲ್ಕು ದಿನಗಳ ನಂತರ ಪಾಸಿಟಿವ್ ವರದಿ ಬಂದಿದ್ದರಿಂದ ಅವನನ್ನು ಹೋಮ್ ಐಸೋಲೇಷನ್ ಮಾಡಿ, ನಿತ್ಯ ವ್ಶೆದ್ಯರಿಂದ ತಪಾಸಣೆ ಮಾಡಲಾಗುತ್ತಿದೆ. ನಿತ್ಯ ಶಾಲೆಗೆ ಬಂದಿದ್ದರಿಂದ ಅವನ ಸಂಪರ್ಕದಲ್ಲಿದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಸಿಬ್ಬಂದಿಗಳಿಗೆ ಸ್ಭೆರಿದಂತೆ ಒಟ್ಟು ೧೬೪ ಕೋವಿಡ್ ಸ್ಯಾಂಪಲ್ ಸಂಗ್ರಹಿಸಲಾಗಿದೆ.ಅಲ್ಲದೇ ಮನೆಯ ಸದಸ್ಯರಿಂದಲೂ ಕೋವಿಡ್ ಸ್ಯಾಂಪಲ್ ಸಂಗ್ರಹಿಸಲಾಗುತ್ತದೆ ಎಂದು ತಾಲೂಕಾ ಆರೋಗ್ಯ ಅಧಿಕಾರಿ ದೀಪಕ್ ಪಾಟೀಲ ತಿಳಿಸಿದ್ದಾರೆ.
ಸುರಪುರ:ಹೊಟ್ಟೆ ನೋವು ತಾಳದೆ ಯುವತಿ ಆತ್ಮಹತ್ಯೆ
ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಹ್ಮದ್ ಅಬ್ದುಲ್ ರಹೀಮ್, ಡಾ.ಶಂಕರ ರಾಠೋಡ, ಡಾ.ಮತೀನ್, ಡಾ.ಅಶ್ವಿನಿ, ನಗರಸಭೆಯ ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ಕಿರಿಯ ಪ್ರಯೋಗಾಲಯ ತಜ್ಞ ಬಸಯ್ಯ, ಶರಣಬಸಚಿi ,ಜಯಶ್ರೀ, ಯೂಸುಫ್ ನಾಕೇದಾರ, ವಿಜಯಲಕ್ಷ್ಮಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…