ಸುರಪುರ: ದೇಶದಲ್ಲಿ ಜಾರಿಗೆ ತರುತ್ತಿರುವ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯಿಂದ ನಡೆದ ಪಾದಯಾತ್ರೆ ಇಂದು ಸುರಪುರ ತಲುಪಿತು.
ನಗರದ ಹಸನಾಪುರ ಪೆಟ್ರೋಲ್ ಬಂಕ್ ಬಳಿಯಲ್ಲಿ ಹೊರಟ ಪಾದಯಾತ್ರೆಯನ್ನು ರೈತ ಸಂಘದ ಜಿಲ್ಲಾ ಸಂಚಾಲಕ ಶಿವರಾಜ ಕಲಕೇರಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪಾದಯಾತ್ರೆಯ ನೇತೃತ್ವ ವಹಿಸಿರುವ ಮುಖಂಡ ಮಲ್ಲಿಕಾರ್ಜುನರಡ್ಡಿ ವಕೀಲರು ಬಳ್ಳಾರಿಯವರು ಮಾತನಾಡಿ,ದೇಶದಲ್ಲಿ ಜಾರಿಗೆ ತರುತ್ತಿರುವ ಮೂರು ಕೃಷಿ ಮಸೂದೆಗಳನ್ನು ರದ್ದುಗೊಳಿಸಬೇಕು ಮತ್ತು ಸ್ವಾಮಿನಾಥನ ವರದಿ ಜಾರಿಗೊಳಿಸಬೇಕು ಎಂಬುದು ನಮ್ಮ ಮೂಲ ಬೇಡಿಕೆಯಾಗಿದೆ,ಇದಕ್ಕಾಗಿ ಇಂದು ಬೀದರಿನಿಂದ ಬಳ್ಳಾರಿ ವರೆಗೆ ಪಾದಯಾತ್ರೆಯ ಮೂಲಕ ರೈತರ ಜಾಗೃತಿಯನ್ನು ಮೂಡಿಸಲಾಗುತ್ತಿದೆ.ಮುಂಬರುವ ದಿನಗಳಲ್ಲಿ ದೇಶಾದ್ಯಂತ ಇಂತಹ ಹೋರಾಟಗಳನ್ನು ಹಮ್ಮಿಕೊಳ್ಳುವ ಮೂಲಕ ಕೃಷಿ ಮಸೂದೆಗಳನ್ನು ರದ್ದುಗೊಳಿಸಲು ಒತ್ತಾಯಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಶಿವರಾಜ ಕಲಕೇರಿ ಮುಖಂಡ ನಾಗಭೂಷಣ ಯಾಳಗಿ ಸೇರಿದಂತೆ ಅನೇಕ ಜನ ರೈತರು ಪಾದಯಾತ್ರೆಯಲ್ಲಿ ಪಾಲ್ಗೊಂಡರು.