ವಾಡಿ: ಶಾಲೆ ಮತ್ತು ಕಾಲೇಜುಗಳಿಗೆ ತೆರಳಲು ಹಾಗೂ ತಾಲೂಕು ಕೇಂದ್ರಕ್ಕೆ ಸಂಪರ್ಕ ಹೊಂದಲು ಸಮರ್ಪಕವಾದ ಬಸ್ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಇಂಗಳಗಿ ಗ್ರಾಮದ ನೂರಾರು ವಿದ್ಯಾರ್ಥಿಗಳು ಶನಿವಾರ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ನೇತೃತ್ವದಲ್ಲಿ ಸಂಘಟಿತರಾಗುವ ಮೂಲಕ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ಅಧ್ಯಕ್ಷ ಗೌತಮ ಪರತೂರಕರ, ವಾಡಿ ನಗರದಿಂದ ಐದು ಕಿ.ಮೀ. ಅಂತರದಲ್ಲಿರುವ ಇಂಗಳಗಿ ಗ್ರಾಮದಿಂದ ಪ್ರತಿದಿನ ನೂರಾರು ಜನರು ವಿವಿಧ ಕೆಲಸ ಕಾರ್ಯಗಳಿಗಾಗಿ ತಾಲೂಕು ಕೇಂದ್ರ ಸ್ಥಾನ ಚಿತ್ತಾಪುರಕ್ಕೆ ಹೋಗುತ್ತಾರೆ. ಗ್ರಾಮದ ವಿದ್ಯಾರ್ಥಿಗಳು ಚಿತ್ತಾಪುರ ಮತ್ತು ಕಲಬುರಗಿ ನಗರದ ಕಾಲೇಜುಗಳಿಗೆ ಹೋಗುತ್ತಾರೆ. ಗ್ರಾಮಕ್ಕೆ ಬಸ್ ಸೌಕರ್ಯ ಇಲ್ಲದ ಕಾರಣ ಪ್ರಯಾಣ ದುಸ್ಥರಗೊಂಡಿದೆ. ಸಾರಿಗೆ ಸೌಲಭ್ಯ ಒದಗಿಸಬೇಕಾದ ಈಶಾನ್ಯ ಸಾರಿಗೆ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ. ಖಾಸಗಿ ವಾಹನಗಳಿಗೆ ದುಬಾರಿ ಶುಲ್ಕ ಭರಿಸಿ ಆರ್ಥಿಕ ಹೊರೆ ಎದುರಿಸುತ್ತಿದ್ದಾರೆ.
ಚಿಂಚೋಳಿ: ರಸ್ತೆ ದುರಸ್ತಿಗೆ ಆಗ್ರಹ
ಅಲ್ಲದೆ ಗ್ರಾಮದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಎಂದು ಕಳವಳ ವ್ಯಕ್ತಪಡಿಸಿದ ಗೌತಮ, ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಎದ್ದುಕಾಣುತ್ತಿದೆ ಎಂದು ದೂರಿದರು. ಪ್ರತಿದಿನ ಬೆಳಗ್ಗೆ ೮:೩೦ಕ್ಕೆ ಇಂಗಳಗಿ ಗ್ರಾಮದಿಂದ ಚಿತ್ತಾಪುರಕ್ಕೆ ಬಸ್ ಹೊರಡಬೇಕು. ಮದ್ಯಾಹ್ನ ಹಾಗೂ ಸಾಯಂಕಾಲ ಬಸ್ ಗ್ರಾಮಕ್ಕೆ ತೆರಳುವಂತೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆದು ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನಾ ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಿ ಮಾತನಾಡಿದ ಚಿತ್ತಾಪುರ ತಾಲೂಕು ಸಾರಿಗೆ ಘಟಕದ ಸಹಾಯಕ ಟ್ರಾಫಿಕ್ ಇನ್ಸ್‌ಫೆಕ್ಟರ್ ಬೋಜಪ್ಪ ಛಲವಾದಿ, ಸೋಮವಾರ ಬೆಳಗ್ಗೆ ೮:೩೦ಕ್ಕೆ ಇಂಗಳಗಿ ಗ್ರಾಮದಿಂದ ಚಿತ್ತಾಪುರಕ್ಕೆ ಬಸ್ ಸೌಲಭ್ಯ ಒದಗಿಸಲಾಗುತ್ತದೆ. ಮದ್ಯಾಹ್ನ ಮತ್ತು ಸಾಯಂಕಾಲ ಬಸ್ ಓಡಿಸಲು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಕಲಬುರಗಿಯ ವಿದ್ವಾನ್ ಮಂಜುನಾಥ್ ಎನ್ ಪುತ್ತೂರು ಇವರಿಂದ ಭರತನಾಟ್ಯ
ಎಐಡಿಎಸ್‌ಒ ಕಾರ್ಯದರ್ಶಿ ವೆಂಕಟೇಶ ದೇವದುರ್ಗ, ಮುಖಂಡರಾದ ಅರುಣಕುಮಾರ ಹಿರೆಬಾನರ್, ಗೋವಿಂದ ಯಳವಾರ, ದತ್ತು ಹುಡೇಕರ, ಸಿದ್ದರಾಜ ಮದ್ರಿ, ವಿದ್ಯಾರ್ಥಿಗಳಾದ ಗೌಸ್ ಬಾಬು, ನಾಗರಾಜ, ಸಿದ್ದಾರ್ಥ, ಅನೀಲ, ಜೈಭೀಮ, ಶಾಂತಕುಮಾರ, ಶಶಿಕುಮಾರ, ಸಾಯಬಣ್ಣ ಗುಂಡಗುರ್ತಿ, ಸುಪ್ರೀತ್, ಐಶ್ವರ್ಯ, ರಾಹ, ಮುಸ್ತಫಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…