ಶಹಾಬಾದ: ಕೋವಿಡ್-೧೯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಉದ್ಯೋಗ ಖಾತ್ರಿ ಯೋಜನೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವುದು ಕೂಲಿ ಕಾರ್ಮಿಕರಿಗೆ ಎಲ್ಲಿಲ್ಲದ ಅನುಕೂಲವಾಗಿದೆ ಎಂದು ಹೊನಗುಂಟಾ ಗ್ರಾಪಂ ಕಾರ್ಯದರ್ಶಿ ಜಗನ್ನಾಥ ಹೇಳಿದರು.
ಅವರು ಹೊನಗುಂಟಾ ಗ್ರಾಮ ಪಂಚಾಯತಿ ವತಿಯಿಂದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಚಾಲನೆ ನೀಡಿ ಮಾತನಾಡಿದರು.
ನರೇಗಾ ಯೋಜನೆಯಡಿ ವಿವಿಧ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಕೋವಿಡ್-೧೯ ಹಿನ್ನೆಲೆಯಲ್ಲಿ ವಿಧಿಸಿದ್ದ ನಿಬಂಧವನ್ನು ಉದ್ಯೋಗ ಖಾತ್ರಿ ಯೋಜನೆಗೆ ವಿನಾಯಿತಿ ನೀಡಿದ್ದರಿಂದ ಕೆಲಸ ಪ್ರಾರಂಭಿಸಲಾಗಿದೆ. ನರೇಗಾ ಕಾಮಗಾರಿ ಕೈಗೊಳ್ಳಲು ರೈತರು, ಕೂಲಿ ಕಾರ್ಮಿಕರು ಮುಂದೆ ಬರುತ್ತಿದ್ದು ಬಹುತೇಕ ಪಂಚಾಯತ್‌ಗಳಲ್ಲಿ ಕೆಲಸ ಪುನರಾರಂಭವಾಗಿದೆ. ರೈತರು ತಮ್ಮ ಜಮೀನಿನಲ್ಲಿ ಕೃಷಿ ಕಾಮಗಾರಿ ಮಾಡಿಕೊಳ್ಳಲು ಅವಕಾಶವಿದೆ. ಜಮೀನಿನಲ್ಲಿ ಬದು ನಿರ್ಮಾಣ, ಕೃಷಿ ಹೊಂಡ, ಒಳಗಟ್ಟಿ, ಎರೆಹುಳು ತೊಟ್ಟಿ ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದೆ ಎಂದರು.
ಜ್ಯೋತಿ ಸಂಜೀವಿನಿ ಮಾರ್ಪಡಿಗೆ ಹರ್ಷ
ಜೆಇ ತಿಮ್ಮಪ್ಪ ಮಾತನಾಡಿ, ಸದ್ಯ ಕೋವಿಡ್-೧೯ ಎರಡನೇ ಅಲೆ ಪ್ರಾರಂಭವಾಗುವ ಲಕ್ಷಣಗಳು ಕಂಡು ಬರುತ್ತಿದ್ದು, ಕೂಲಿ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಬೇಕು. ಕಾಮಗಾರಿ ಸಂದರ್ಭದಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಿಕೊಂಡು ಬರುವುದು ಕಡ್ಡಾಯವಾಗಿ ಧರಿಸಬೇಕು. ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಯಶಸ್ವಿ ಅನು?ನಕ್ಕೆ ರೈತರು, ಕೂಲಿ ಕಾರ್ಮಿಕರ ಸಹಕಾರ ನೀಡಬೇಕೆಂದು ಹೇಳಿದರು.
ಪೂಜಪ್ಪ ಮೇತ್ರೆ, ಜೈಭೀಮ ರಸ್ತಾಪೂರ, ರಾಘವೇಂದ್ರ ಗುಡೂರ, ನಾಗಪ್ಪ ನ್ಯಾವನಿ ಸೇರಿದಂತೆ ಉದ್ಯೋಗ ಖಾತ್ರಿ ಫಲಾನುಭವಿಗಳು ಇದ್ದರು.