ಬಿಸಿ ಬಿಸಿ ಸುದ್ದಿ

ಅಂಗನವಾಡಿ ನೌಕರರ ಬೇಡಿಕೆ ಒತ್ತಾಯಿಸಿ ಪ್ರತಿಭಟನೆ

ಶಹಾಬಾದ: ಪ್ರಸಕ್ತ ೨೦೨೧-೨೨ರ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ಬೇಡಿಕೆಗಳನ್ನು ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ಪ್ರಧಾನ ಕಾರ್ಯದರ್ಶಿ ಶೇಕಮ್ಮ ಕುರಿ, ಅಂಗನವಾಡಿ ನೌಕರರು ಕರೊನಾ ಸಂದರ್ಭದಲ್ಲಿ ತಮ್ಮ ಜೀವನವನ್ನು ಮುಡುಪಾಗಿಟ್ಟು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್ಯದಲ್ಲಿ ೧೭೩ ಜನರಿಗೆ ಕರೋನಾ ಬಂದು ಆ ದಿನಗಳಲ್ಲಿ ಅಂಗನವಾಡಿ ನೌಕರರು ತಮ್ಮ ಕುಟುಂಬದ ಆದಾಯವನ್ನು ಕಳೆದುಕೊಂಡು ಸಂಕ?ದಲ್ಲಿ ಸಿಲುಕಿದ್ದರು.

ಡಾ. ಅಂಬೇಡ್ಕರ್ ಕನಸು ನನಸಾಗಿಸಲು ಕಾನ್ಸಿರಾಮ ಶ್ರಮ: ಶಿವಶಾಲಕುಮಾರ ಪಟ್ಟಣಕರ್

ಅಲ್ಲದೆ ಲಾಕಡೌನ್ ಸಂದರ್ಭದಲ್ಲಿ ಕೆಲಸ ನೀಡುತ್ತಿರುವಾಗ ೨೮ ಜನರು ಬಲಿಯಾಗಿದ್ದಾರೆ. ಅಲ್ಲದೆ ಸಾಂಕ್ರಾಮಿಕ ಅಲೆಯಲ್ಲಿ ಮಲೆನಾಡು. ಗುಡ್ಡಗಾಡು, ಕೊಳಚೆ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಕುಟುಂಬದ ವಾಹನಗಳನ್ನು ಬಳಸಿ ಆಹಾರ ಸಾಮಗ್ರಿಗಳನ್ನು ಮನೆಮನೆಗೆ ಹಂಚಿದ್ದಾರೆ. ಕ್ವಾರಂಟೈನ್ ಸ್ಥಳಗಳಿಗೆ ಮಾಸ್ಕ್ ಸ್ಯಾನಿಟೈಸರ್ ಮಾತ್ರೆಗಳನ್ನು ತಮ್ಮ ಕೈಯಿಂದ ಖರ್ಚುಮಾಡಿಕೊಂಡು ವಿತರಣೆ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ನಮ್ಮ ಇಲಾಖೆ ೩೩೯.೪೮ ಕೋಟಿ ಶಿಫಾರಸ್ಸು ಮಾಡಲಾಗಿತ್ತು .ಈ ಮೊತ್ತ ನೀಡಿದ್ದರೆ ೧,೩೦೦೦೦ ಕುಟುಂಬಗಳಿಗೆ ಸಹಾಯವಾಗುತ್ತಿತ್ತು. ಆದರೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಈ ಮೂರು ಶಿಫಾರಸುಗಳಲ್ಲಿ ಯಾವುದೇ ಅಂಶವನ್ನು ಪರಿಗಣನೆಗೆ ಮಾಡಿಲ್ಲ. ೨೦೧೬ರಿಂದ ೭೩೦೪ ಜನ ನಿವೃತ್ತಿಯಾಗಿದ್ದಾರೆ.

ಅವರಿಗೆ ಕೊಡಬೇಕಾದ ಇಡಗಂಟನ್ನು ಸರ್ಕಾರ ಪರಿಗಣನೆ ಮಾಡಿಲ್ಲ. ಹೆಸರಿಗೆ ಮಾತ್ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಬಜೆಟ್ ಮಂಡಿಸಿ, ಮಹಿಳಾ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಈ ಕೂಡಲೇ ನಮ್ಮ ಇಲಾಖೆಯ ಶಿಫಾರಸುಗಳನ್ನು ಮಾಡಬೇಕೆಂದು ಒತ್ತಾಯಿಸಿದರಲ್ಲದೇ,  ಇಲ್ಲದಿದ್ದರೆ ಹೆಚ್ಚುವರಿ ಕೆಲಸಗಳಾದ ಇ- ಸರ್ವೆ, ಆರ್‌ಡಿಪಿಆರ್ ನಿಂದ ಕೊಟ್ಟಿರುವ ಸರ್ವೆ, ಬಿಪಿಎಲ್ ಕಾರ್ಡ್ ಆರ್‌ಸಿಎಚ್ ಸರ್ವೆ, ಭಾಗ್ಯಲಕ್ಷ್ಮಿ, ಮಾತೃವಂದನಾ, ಸ್ತ್ರೀಶಕ್ತಿ, ಚುನಾವಣೆ ಮುಂತಾದ ಕೆಲಸಗಳನ್ನು ಬಹಿ?ರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಕೆಕೆ ಪ್ರದೇಶದ ಅಭಿವೃದ್ಧಿಯಲ್ಲಿ ಕೈಗಾರಿಕಾ, ವಾಣಿಜ್ಯ ಪಾತ್ರ ವಿಚಾರ ಸಂಕಿರಣ

ಮುಖಂಡರಾದ ಅಶೋಕ ಮ್ಯಾಗೇರಿ, ರಾಯಪ್ಪ ಹುಮುಂಜಿ, ಮಲ್ಲಿಕಾರ್ಜುನ ಕಾರೊಳ್ಳಿ, ರುದ್ರಮ್ಮ, ಸಾಬಮ್ಮ, ನಾಗವೇಣಿ, ಲಕ್ಷ್ಮಿ, ಮಲ್ಲಮ್ಮ, ಧನಲಕ್ಷ್ಮಿ ಸೇರಿದಂತೆ ಅನೇಕ ಮಹಿಳೆಯರು ಇದ್ದರು.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

4 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

15 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 day ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 day ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago