ಬಿಸಿ ಬಿಸಿ ಸುದ್ದಿ

ಮಾರ್ಚ್ ನಂತರ ಹತ್ತು ದಿನ ನೀರು ಬಿಡಿ: ಮಾಜಿ ಶಾಸಕ ಆರ್‌ವಿಎನ್ ವಿನಂತಿ

ಸುರಪುರ: ಮಾರ್ಚ ನಂತರವೂ ಹತ್ತು ದಿನಗಳ ಕಾಲ ಕೃಷ್ಣಾ ಕಾಲುವೆಗಳಿಗೆ ನೀರು ಹರಿಸುವಂತೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ವಿನಂತಿಸಿದ್ದಾರೆ.

ಈ ಕುರಿತು ಪತ್ರ ಬರೆದಿದ್ದು, ರೈತರ ಹಿಂಗಾರು ಹಂಗಾಮಿಗಾಗಿ ಮಾ.೩೧ ರ ವರೆಗೆ ಕಾಲುವೆಗೆ ನೀರುಹರಿಸುವಂತೆ ಈ ಹಿಂದೆ ಪತ್ರಬರೆದು ಒತ್ತಾಯಿಸಿದಂತೆ ತಾವುಗಳು ಕ್ರಮಕೈಗೊಂಡಿರುವುದಕ್ಕೆ ಸ್ವಾಗತಿಸುತ್ತೇನೆ. ಸಧ್ಯ ಜಲಾಶಯಗಳಲ್ಲಿ ಇನ್ನು ಸಾಕಷ್ಟು ಪ್ರಮಾಣದ ನೀರು ಇದೆ ಎಂದು ತಿಳಿದುಬಂದಿದೆ, ಹವಾಮಾನದ ವೈಪರಿತ್ಯದಿಂದಾಗಿ ಕ್ಷೇತ್ರದ ಕೆಲವು ಭಾಗದ ರೈತರು ಬೆಳೆ ನಾಟಿಮಾಡುವಲ್ಲಿ ವಿಳಂಬವಾಗಿದ್ದು ತಮ್ಮ ನಿರ್ಣಯದಂತೆ ಮಾ.೩೧ ರ ವರೆಗೆ ನೀರು ಹರಿಸಿದರೂ ಅವರ ಬೆಳೆಗಳು ಕಟಾವಿಗೆ ಬರುವುದಿಲ್ಲ. ಹೀಗಾಗಿ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ.

ಹೆದ್ದಾರಿ ತಡೆದು ಪ್ರತಿಭಟನೆ: ಬಸ್ ನಿಲ್ಲಿಸಿ ಕಾಲ್ನಡಿಗೆ ತಪ್ಪಿಸಿ: ವಿದ್ಯಾರ್ಥಿಗಳ ಆಗ್ರಹ

ಆದ್ದರಿಂದ ದಯಾಳುಗಳಾದ ತಾವುಗಳು ಇನ್ನು ಒಂದು ವಾರ-ಹತ್ತು ದಿನದ ವರೆಗೆ ಕಾಲುವೆಗೆ ನೀರುಹರಿಸಿದರೆ ರೈತರ ಸಂಪೂರ್ಣ ಬೆಳೆಗಳು ಕಟಾವಿಗೆ ಬಂದು ರೈತರು ನೆಮ್ಮದಿಯಿಂದ ನಿಟ್ಟುಸಿರು ಬಿಡುವಂತಾಗುತ್ತದೆ. ಕಾರಣ ತಾವುಗಳು ಈ ಮೇಲೆ ತಿಳಿಸಿದಂತೆ ವಾರ ಹತ್ತು ದಿನಗಳ ಕಾಲ ನೀರು ಹರಿಸಿದಲ್ಲಿ ರೈತರಿಗೆ ಮತ್ತು ಕಾಲುವೆಯ ಕೊನೆಯ ಭಾಗದ ರೈತರಿಗೆ ಅನೂಕೂಲ ಕಲ್ಪಿಸಿದಂತಾಗುತ್ತದೆ ಎಂದು ಈ ಮೂಲಕ ತಮ್ಮಲ್ಲಿ ಮತ್ತೋಮ್ಮೆ ವಿನಂತಿಸಿಕೊಳ್ಳುತ್ತೇನೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

10 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

21 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

21 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

23 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

23 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

23 hours ago