ಸುರಪುರ: ಪ್ರತಾಪ ಸಿಂಗ್ ಠಾಕೂರ್ ಅವರು ಒಬ್ಬ ಗೃಹರಕ್ಷಕರಾಗಿ ನಮ್ಮೊಂದಿಗೆ ಸೇವೆ ಸಲ್ಲಿಸಿದ ಸಮಯ ಅವಿಸ್ಮರಣಿಯವಾಗಿದೆ,ಇಂದು ಅವರು ನಮ್ಮನಗಲಿರುವುದು ದುಃಖದ ಸಂಗತಿಯಾಗಿದೆ ಎಂದು ಗೃಹರಕ್ಷಕ ದಳದ ಕಂಪನಿ ಕಮಾಂಡರ್ ಯಲ್ಲಪ್ಪ ಹುಲಿಕಲ್ ಮಾತನಾಡಿದರು.
ಇಂದು ನಿಧನರಾದ ಮಾಜಿ ಗೃಹ ರಕ್ಷಕ ದಳದ ಅಧಿಕಾರಿ ಪ್ರತಾಪ ಸಿಂಗ್ ಠಾಕೂರ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಗೃಹರಕ್ಷಕ ದಳದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂತಾಪ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಪ್ರತಾಪ ಸಿಂಗ್ ಅವರು ಕೇವಲ ಗೃಹ ರಕ್ಷಕ ಅಧಿಕಾರಿ ಮಾತ್ರವಲ್ಲದೆ ಶಿಕ್ಷಕರು ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿದವರು.
ನಂತರ ಗೃಹ ರಕ್ಷಕರಾಗಿ ಜನರ ಸೇವೆಗೆ ತೊಡಗಿ,ನಿಷ್ಕಾಮವಾದ ಅವರ ಸೇವೆಗೆ ಸಾರ್ಜೆಂಟ್,ಸಿ.ಎಸ್.ಎಮ್,ಪ್ಲಾಟೂನ್ ಕಮಾಂಡರ್ ಪ್ರಶಸ್ತಿಗಳು ಲಭಿಸಿದ್ದವು.ಇಂತಹ ಅಪರೂಪದ ಮಹಾನ್ ವ್ಯಕ್ತಿಗಳು ನಮಗೆಲ್ಲರಿಗೂ ಮಾದರಿಯಾಗಿದ್ದರು.ಇಂದು ಅವರು ನಮ್ಮನ್ನೆಲ್ಲ ಅಗಲಿರುವುದು ನೋವಿನ ಸಂಗತಿಯಾಗಿದೆ.ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರತಾಪ ಸಿಂಗ್ ಠಾಕೂರ್ ಅವರ ಆತ್ಮಕ್ಕೆ ಶಾಂತಿ ಕೋರಿ ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು. ಸಭೆಯಲ್ಲಿ ವೆಂಕಟೇಶ ಸುರಪುರ ರಮೇಶ ಅಂಬುರೆ ಭೀಮರಾಯ ಹುಲಿಕಲ್ ಕೊಟ್ರಯ್ಯ ಸ್ವಾಮಿ ಮಾನಯ್ಯ ನಾಯಕ ಇತರರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…