ಕಲಬುರಗಿ: ಬೆಂಗಳೂರು ಮೂಲದ ಎಂಎನ್‌ಸಿ ಕ್ವೆಸ್ ಕಾರ್ಪ್ ಲಿಮಿಟೆಡ್ ಈ ನೇಮಕಾತಿ ಚಾಲನೆಯನ್ನು ನಡೆಸಿದ್ದು, ಕೋಲಾರದಲ್ಲಿ ಮೊಬೈಲ್ ಹ್ಯಾಂಡ್‌ಸೆಟ್ ಉತ್ಪಾದನಾ ಘಟಕದ ಪರವಾಗಿ ಅಭ್ಯರ್ಥಿಗಳ ನೇಮಕಾತಿಯ ಪ್ರಕ್ರಿಯೆಯನ್ನು ನಡೆಸಲಾಯಿತು.
ನೇಮಕಾತಿಯಾದ ೧೫೩ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ಸ್ ಆಂಡ ಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಆಂಡ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಮತ್ತು ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇ?ನ್ಸ್ (ಬಿಸಿಎ) ವಿದ್ಯಾರ್ಥಿಗಳಾಗಿದ್ದಾರೆ.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಶರಣಬಸವ ವಿಶ್ವವಿದ್ಯಾಲಯವು ಈ ಪ್ರದೇಶದ ಎಲ್ಲಾ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಅತೀ ಹೆಚ್ಚಿನ ೧೯೭ ವಿದ್ಯಾರ್ಥಿಗಳ ನೇಮಕಾತಿಯಾಗಿತ್ತು.
ರಸ್ತೆ ದುರಸ್ಥಿ, ಪ್ಲಾಸ್ಟಿಕ್ ನಿಷೇದಿಕ್ಕೆ ಜೈ ಕರವೇ ಆಗ್ರಹ
ಕ್ಯಾಂಪಸ್ ನೇಮಕಾತಿಯಲ್ಲಿ ೧೫೩ ವಿದ್ಯಾರ್ಥಿಗಳನ್ನು ದಾಖಲೆಯ ನೇಮಕಾತಿಗಾಗಿ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿ ಶಿವಕುಮಾರ್ ಕಾಗಿ ಮತ್ತು ಅವರ ತಂಡವು ಕೈಗೊಂಡ ಈ ನೇಮಕಾತಿ ಪ್ರಕ್ರಿಯೆಗೆ ಅಭಿನಂದಿಸಿದ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲಕುಮಾರ ಬಿಡವೆ ಯಶಸ್ವಿಯಾಗಿ ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ ಅತೀ ಹೆಚ್ಚಿನವರು ಅಂತಿಮ ವ? ವಿದ್ಯಾರ್ಥಿಗಳಾಗಿದ್ದಾರೆ. ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಹಾಗೂ ಉದ್ಯೋಗಾವಕಾಶಗಳಿಗಾಗಿ ಕಾಯುತ್ತಿದ್ದ ಕೆಲವು ವಿದ್ಯಾರ್ಥಿಗಳನ್ನು ಈ ನೇಮಕಾತಿ ಚಾಲನೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಒಟ್ಟು ೧೫೩ ವಿದ್ಯಾರ್ಥಿಗಳಲ್ಲಿ ೧೨ ವಿದ್ಯಾರ್ಥಿಗಳು ಬಿಸಿಎ ವಿಭಾಗಕ್ಕೆ ಸೇರಿದವರು. ನೇಮಕಾತಿ ಚಾಲನೆಯ ಮತ್ತೊಂದು ವೈಶಿ?ವೆಂದರೆ ಆಯ್ದ ವಿದ್ಯಾರ್ಥಿಗಳಲ್ಲಿ ೭೦ ಪ್ರತಿಶತ ಯುವತಿಯರು ಮತ್ತು ಉಳಿದ ೩೦ ಪ್ರತಿಶತ ಯುವಕರಾಗಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕ್ ನೌಕರರ ಮನದ ಭೀತಿ ನಿವಾರಿಸಿರಿ: ಶಾಸಕ ಅಜಯ್ ಸಿಂಗ್
ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ ಮತ್ತು ಶರಣಬಸವೇಶ್ವರ ವಿದ್ಯಾವರ್ದಕ ಸಂಘದ ಚೇರಪರ್ಸನ್‌ರಾದ ಡಾ. ದಾಕ್ಷಾಯಿಣಿ ಅವ್ವಾಜಿ, ಮತ್ತು ಸಂಘದ ಕಾರ್ಯದರ್ಶಿ ಮತ್ತು ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಬಸವರಾಜ ದೇಶಮುಖ ವಿದ್ಯಾರ್ಥಿಗಳ ಯಶಸ್ವಿ ನೇಮಕಾತಿಗಾಗಿ ಶ್ಲಾಘಿಸಿ, ಉಪಕುಲಪತಿ ಡಾ. ನಿರಂಜನ ವಿ ನಿಷ್ಠಿ, ಸಮಕುಲಪತಿ ಡಾ. ವಿ.ಡಿ.ಮೈತ್ರಿ, ಕುಲಸಚಿವ ಡಾ. ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ.ಲಿಂಗರಾಜ ಶಾಸ್ತ್ರಿ, ಡೀನ ಡಾ.ಲಕ್ಷ್ಮಿ ಪಾಟೀಲ ಮಾಕಾ ಮತ್ತು ಡಾ.ಬಸವರಾಜ ಮಠಪತಿ ಹಾಗೂ ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇತೃತ್ವದಲ್ಲಿ ನಿರಂತರವಾಗಿ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ಸಂದರ್ಶನಗಳನ್ನು ಆಯೊಜಿಸಲಾಗುತ್ತದೆ ಎಂದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…