ವಿದ್ಯಾರ್ಥಿ ವೇತನ: 20ರವರೆಗೆ ಅರ್ಜಿ ಸಲ್ಲಿಕೆ ವಿಸ್ತರಣೆ

1
45

ಕಲಬುರಗಿ:  ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ-ಅಲೆಮಾರಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಮಾರ್ಚ್ 20ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಗಳ ಮನವಿ ಮೇರೆಗೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು www.ssp.postmatric.karnataka.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಮಾರ್ಚ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಹ ವಿದ್ಯಾರ್ಥಿಗಳು ಕಾರ್ಯಕ್ರಮದ ವಿವರ, ಅರ್ಹತೆ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಮಾಹಿತಿಗಾಗಿ www.bcwd.karnataka.gov.in ವೆಬ್‍ಸೈಟ್‍ನ್ನು ಸಂಪರ್ಕಿಸಬೇಕು.

Contact Your\'s Advertisement; 9902492681

153 ವಿದ್ಯಾರ್ಥಿಗಳಿಗೆ ಶರಣಬಸವ ವಿವಿಯ ಕ್ಯಾಂಪಸ್ ಸೆಲೆಕ್ಷನ್

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸÀಹಾಯವಾಣಿ ದೂರವಾಣಿ ಸಂಖ್ಯೆ 8050770005, 8050770004 ಅಥವಾ bcwd.scholarship@karnataka.gov.in ಗೆ, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmetrichelp@karnataka.gov.in ಹಾಗೂ ದೂರವಾಣಿ ಸಂಖ್ಯೆ 080-35254757 ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here