ಕಲಬುರಗಿ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ-ಅಲೆಮಾರಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಮಾರ್ಚ್ 20ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಗಳ ಮನವಿ ಮೇರೆಗೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು www.ssp.postmatric.karnataka.gov.in ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಮಾರ್ಚ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಹ ವಿದ್ಯಾರ್ಥಿಗಳು ಕಾರ್ಯಕ್ರಮದ ವಿವರ, ಅರ್ಹತೆ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಮಾಹಿತಿಗಾಗಿ www.bcwd.karnataka.gov.in ವೆಬ್ಸೈಟ್ನ್ನು ಸಂಪರ್ಕಿಸಬೇಕು.
153 ವಿದ್ಯಾರ್ಥಿಗಳಿಗೆ ಶರಣಬಸವ ವಿವಿಯ ಕ್ಯಾಂಪಸ್ ಸೆಲೆಕ್ಷನ್
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸÀಹಾಯವಾಣಿ ದೂರವಾಣಿ ಸಂಖ್ಯೆ 8050770005, 8050770004 ಅಥವಾ bcwd.scholarship@karnataka.gov.in ಗೆ, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmetrichelp@karnataka.gov.in ಹಾಗೂ ದೂರವಾಣಿ ಸಂಖ್ಯೆ 080-35254757 ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…