ವಿದ್ಯಾರ್ಥಿ ನಾಯಕರ ಮೇಲೆ ಮಾರಣಾಂತಿಕ ಹಲ್ಲೆ:  ಕ್ರಮ ಕೈಗೊಳ್ಳದಿದ್ದಲ್ಲಿ ಠಾಣೆಗೆ ಮುತ್ತಿಗೆ: ಮೇಘರಾಜ್

0
78

ಮಂಗಳೂರು: ಶಿಕ್ಷಣದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಿ ಹಿಂದಿರುತ್ತಿದ್ದ ವೇಳೆ ಗಾಂಜಾ, ಮದ್ಯ ವ್ಯಸನಿಗಳು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದು, ಮಾತ್ರವಲ್ಲದೆ ಸ್ಥಳಕ್ಕಾಗಮಿಸಿದ ಉಳ್ಳಾಲ ಪೋಲಿಸರು ಹಲ್ಲೆಗೊಳಗಾದವರನ್ನೇ ಬಂಧಿಸಿ, ಠಾಣೆಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಮಾರ್ಮಾಂಗಕ್ಕೆ ತಮ್ಮ ಬೂಟುಗಳಿಂದ ಒದ್ದು, ಧಾರ್ಮಿಕವಾಗಿ ನಿಂದಿಸಿ ತೀವ್ರ ಹಲ್ಲೆ ನಡೆಸಿದ್ದಾರೆ. ಇದನ್ನು ಸರ್ವ ವಿದ್ಯಾರ್ಥಿಗಳ ಒಕ್ಕೂಟ ದ.ಕ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತಿದೆ.

ಜಿಲ್ಲೆಯಲ್ಲಿ ಗಾಂಜಾ ಮಾಫಿಯಾ ಸಕ್ರಿಯವಾಗಿದೆ ಎಂಬುದಕ್ಕೆ ಈ ಘಟನೆಯು ಸ್ಪಷ್ಟ ಉದಾಹರಣೆಯಾಗಿದೆ. ಆದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಹಲ್ಲೆಗೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕಾದ ಪೊಲೀಸರು ಠಾಣೆಗೆ ಕರೆದೊಯ್ದು ವಿದ್ಯಾರ್ಥಿಗಳ ಮೇಲೆಯೇ ತೀವ್ರ ರೀತಿಯ ಚಿತ್ರಹಿಂಸೆ ನೀಡಿರುವುದು ಖಂಡನೀಯ.

Contact Your\'s Advertisement; 9902492681

ಬೆಂಗಳೂರಿನ ಫೈಟರ್‌ ಮೊಹಮ್ಮದ್‌ ಫರಾದ್‌ ಗೆ ಸನ್ಮಾನ

ಹಲ್ಲೆ ನಡೆಸಿದ್ದು ಮಾತ್ರವಲ್ಲದೆ ಅವಾಚ್ಯ ಶಬ್ದಗಳಿಂದ ಬೈದು “ನೀವು ಭಯೋತ್ಪಾದಕರು, ದೇಶ ದ್ರೋಹಿಗಳು, ಪಾಕಿಸ್ತಾನಿಗಳು ” ಎಂದು ಗದರಿಸಿ ಧರ್ಮ ನಿಂದನೆಗೈದಿದ್ದಾರೆ ಹಾಗೂ ಗಾಂಜಾ ವ್ಯಸನಿಗಳಿಂದ ಹಲ್ಲೆಗೊಳಗಾಗಿ ಗಾಯಗಳಾಗಿದ್ದರೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸದೆ ಅಮಾನವೀಯ ಕೃತ್ಯವನ್ನು ಉಳ್ಳಾಲ ಪೋಲಿಸರು ಎಸಗಿದ್ದಾರೆ. ಠಾಣೆಗೆ ಬಂದ ವಿದ್ಯಾರ್ಥಿ ಪೋಷಕರಿಗೂ ಭೇಟಿ ಮಾಡಲು ಅವಕಾಶ ನೀಡದೆ ಸುಮಾರು 24 ಗಂಟೆಗಳ ಕಾಲ ಕಸ್ಟಡಿಯಲ್ಲಿ ಇಟ್ಟು ಹಲ್ಲೆ ನಡೆಸಿರುತ್ತಾರೆ.

ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಿ ಮನೆಗೆ ಹಿಂದಿರುಗುವ ವೇಳೆ ಮೂವರು ವಿದ್ಯಾರ್ಥಿ ನಾಯಕರನ್ನು ಉಳ್ಳಾಲ ಠಾಣೆಗೆ ಕರೆದೊಯ್ದು ರಕ್ಷಣೆ ನೀಡಬೇಕಾದ ಆರಕ್ಷಕರು ಇವರ ಮೇಲೆಯೇ ಮರ್ಮಾಂಗಕ್ಕೆ ಒದ್ದು ತೀವ್ರ ರೀತಿಯ ಹಲ್ಲೆ ನಡೆಸಿದ ಉಳ್ಳಾಲ ಠಾಣೆಯ ಸಬ್ ಇನ್ಸ್ಪೆಕ್ಟರ್ ರೇವಣ್ಣ ಸಿದ್ದಪ್ಪಾ ,ಎಎಸೈ ಮಂಜಣ್ಣ , ಕಾನ್ಸ್‌ಟೇಬಲ್ ರಮೇಶ್ ಹಾಗೂ ಇನ್ನಿತರ ಕರ್ತವ್ಯ ನಿರತ ಸಿಬ್ಬಂದಿಗಳನ್ನು ತಕ್ಷಣ ಕರ್ತವ್ಯದಿಂದ ಅಮಾನತ್ತು ಮಾಡಬೇಕೆಂದು ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟ ದ.ಕ ಜಿಲ್ಲೆಯು ಆಗ್ರಹಿಸುತ್ತಿದೆ.

ನದಾಫ್ ಸಮುದಾಯಕ್ಕೆ ಸರ್ಕಾರ ಆದ್ಯತೆ ನೀಡಲಿ : ವಜೀರಗಾಂವ್

48 ಗಂಟೆಗಳೊಗಾಗಿ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ನಮಗೆ ನ್ಯಾಯ ದೊರಕಿಸಿಕೊಡದಿದ್ದರೆ ಉಳ್ಳಾಲ ಪೋಲೀಸ್ ಠಾಣೆಗೆ ದ.ಕ ಜಿಲ್ಲೆ ಸರ್ವ ವಿದ್ಯಾರ್ಥಿಗಳು ಮುತ್ತಿಗೆ ಹಾಕುವ ತೀರ್ಮಾನವನ್ನು ಕೈಗೊಂಡಿದ್ದೇವೆ ಎಂದು ಸರ್ವ ವಿದ್ಯಾರ್ಥಿಗಳ ಒಕ್ಕೂಟ ದ.ಕ ಜಿಲ್ಲಾಧ್ಯಕ್ಷ ಮೇಘರಾಜ್ ಪತ್ರಿಕಾಗೋಷ್ಠಿಯ ಮುಖಾಂತರ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ರಾಝಿನ್ ,ಜಿಲ್ಲಾ ಉಪಾಧ್ಯಕ್ಷ ಮುಸ್ತಫಾ, ಜಿಲ್ಲಾ ಜೊತೆ ಕಾರ್ಯದರ್ಶಿ ಅಲ್ಫಾಝ್ ಹಮೀದ್ , ಸದಸ್ಯರಾದ ಸಾಧಿಕ್ ಜಾರತ್ತಾರು , ಬಾಸಿತ್ ಆತೂರು, ಜಾಬಿರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here