ಬಿಸಿ ಬಿಸಿ ಸುದ್ದಿ

ನಗರ ಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಾನಂದ ಅಂಬಣ್ಣ ನಾಮಪತ್ರ ಸಲ್ಲಿಕೆ

ಶಹಾಬಾದ: ನಗರ ಸಭೆಯ ವಾರ್ಡ ನಂ. ೧೮ ರ ಉಪ ಚುನಾವಣೆಗೆ ಶಿವಾನಂದ ಅಂಬಣ್ಣ ಬೇಡರ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬುಧವಾರದಂದು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಮುಂಚೆ ನಗರದ ಲಕ್ಷ್ಮಿ ಗಂಜ್‌ನಿಂದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮೂಲಕ ಬಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಮಾತನಾಡಿ,ಶಹಾಬಾದ ನಗರಸಭೆಯಲ್ಲಿ ಅತಿಹೆಚ್ಚು ಸದಸ್ಯರು ಕಾಂಗ್ರೆಸ್ ಪಕ್ಷದವರಿದ್ದಾರೆ.ಅಲ್ಲದೇ ನಗರಸಭೆಯ ಆಡಳಿತವೂ ನಮ್ಮ ಪಕ್ಷದ ವಶದಲ್ಲಿದೆ.

ನದಾಫ್ ಸಮುದಾಯಕ್ಕೆ ಸರ್ಕಾರ ಆದ್ಯತೆ ನೀಡಲಿ : ವಜೀರಗಾಂವ್

ನಗರದಲ್ಲಿ ಕಾಂಗ್ರೆಸ್ ಪಕ್ಷವನ್ನು ನೆಚ್ಚಿಕೊಂಡು ಬಹಳಷ್ಟು ಮತದಾರರು ಇದ್ದಾರೆ.ಈ ಉಪಾಚುನಾವಣೆಯಲ್ಲಿ ಶಿವಾನಂದ ಅಂಬಣ್ಣ ಬೇಡರ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.ನಮ್ಮ ಪಕ್ಷದ ಮುಖಂಡರು ಪ್ರತಿ ಮತದಾರರ ಮನವೊಲಿಸಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವತ್ತ ಮುಂದಾಗಬೇಕು ಎಂದು ಹೇಳಿದರು.

ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ರಶೀದ್ ಮರ್ಚಂಟ, ಉಪಾಧ್ಯಕ್ಷ ವಿಜಯಕುಮಾರ ಮುತ್ತಟ್ಟಿ, ಕಾರ್ಯದರ್ಶಿ ಮೃತ್ಯುಂಜಯ ಹಿರೇಮಠ, ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ್ ಕಂಬಾನೂರ, ಉಪಾಧ್ಯಕ್ಷರಾದ ಸಲೀಮಾ ಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೀಕರ್,ಶರಣಗೌಡ ಪಾಟೀಲ ಗೋಳಾ,ವಿಶ್ವರಾಧ್ಯ ಬೀರಾಳ, ಗಿರೀಶ ಕಂಬಾನೂರ, ದೇವೆಂದ್ರಪ್ಪ ವಾಲಿ, ಸಾಹೇಬಗೌಡ ಬೋಗುಂಡಿ, ಶರಣು ಪಗಲಾಪೂರ,ನಗರಸಭೆಯ ಸದಸ್ಯರಾದ ಡಾ.ಅಹ್ಮದ್ ಪಟೇಲ್, ಅನ್ವರ್ ಪಾಶಾ, ಕುಮಾರ ಚವ್ಹಾಣ,ಸೂರ್ಯಕಾಂತ ಕೋಬಾಳ,ಮಲ್ಲಿಕಾರ್ಜುನ ವಾಲಿ,ಅವಿನಾಶ ಕಂಬಾನೂರ, ನಾಗರಾಜ ಕರಣಿಕ್,ನಾಗಣ್ಣ ರಾಂಪೂರೆ,ನಾಗೇಂದ್ರ ನಾಟೇಕಾರ,ಶಂಕರ ಕೋಟನೂರ,ಕಿರಣಕುಮಾರ ಚವ್ಹಾಣ, ದಿಲೀಪ ನಾಯಕ, ಮಸ್ತಾನ ಪಟೇಲ್, ಇಮ್ರಾನ್ ಸೇರಿದಂತೆ  ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

9 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

11 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

16 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

19 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

21 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

43 mins ago