ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜಾರಿಗೊಳಿಸಲು ಆಗ್ರಹ

0
25

ಕಲಬುರಗಿ: ಕಮಲಾಪುರ ತಾಲೂಕಿನ ವಿ ಕೆ ಸಲಗರ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಸೇರಿದಂತೆ ಮೂಲಭೂತ ಸೌಲಭ್ಯಗಳು ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಪಂಚಾಯತ್ ಕಚೇರಿ ಎದುರು ದರಣಿ ಸತ್ಯಾಗ್ರಹ ನಡೆಸಿದರು.

ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ೯೦೦ ರಿಂದ ೧೦೦೦ ಜನ ಕೆಲಸಕ್ಕೆ ಪಾರಂ ನಂಬರ್ ೬ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇಲ್ಲಿಯವರೆಗೆ ಕೇವಲ ಎರಡು ವಾರಗಳ ಕಾಲ ಮಾತ್ರ ಕೆಲಸ ನೀಡಿದ್ದಾರೆ. ಇದರಿಂದಾಗಿ ಕೂಲಿ ಕಾರ್ಮಿಕರಿಗೆ ಅನ್ಯಾಯ ವಾಗುತ್ತಿದೆ ಎಂದು ದೂರಿದರು.

Contact Your\'s Advertisement; 9902492681

ಸಾರ್ವಜನಿಕ ಶೌಚಾಲಯ ದುರಸ್ಥಿಗೆ ಆಗ್ರಹ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದರಿಂದ ಜನ ಸಾಮಾನ್ಯರಿಗೆ ಹಾಗೂ ಪಶು, ಪ್ರಾಣಿಗಳಿಗೂ ತೊಂದರೆಯಾಗುತ್ತಿದೆ. ಬುದುವಾರ ಸಂತೆ ಇರುವುದರಿಂದ ಸಾವಿರಾರು ಜನ ಸೇರುತ್ತಾರೆ. ಅವರಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೊಲ ಗದ್ದೆಗಳಲ್ಲಿ ಯಾವುದೇ ಕೆಲಸ ಇಲ್ಲದೆ ಇರುವದರಿಂದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಬೇಕು. ಕೃಷಿ ಹೊಂಡ ಹಾಗೂ ಧನದ ಕೊಟ್ಟಿಗೆ ನಿರ್ಮಾಣ ಮಾಡಲು ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.

ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ತೊಟ್ಟಿಗಳು ಹಾಗೂ ಗೋ ಶಾಲೆ ನಿರ್ಮಾಣ ಮಾಡಬೇಕು, ಅವಶ್ಯಕತೆ ಇರುವ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಮಹಿಳಾ ಶೌಚಾಲಯಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು, ವಯಕ್ತಿಕ ಶೌಚಾಲಯ ನಿರ್ಮಾಣ ಮಾಡುವ ಜನರಿಗೆ ಕೂಡಲೇ ಪರಿಹಾರ ನೀಡಬೇಕು ಎಂದರು.

ವಾಡಿಯಲ್ಲಿ ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಜಾರಿ: ವಿಠ್ಠಲ ಹಾದಿಮನಿ

ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡ ಸುನೀಲ ಮಾರುತಿ ಮಾನಪಡೆ, ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ಶಿವಕುಮಾರ ಹೇರೂರು ತಾಲೂಕ ಕಾರ್ಯದರ್ಶಿ ಪಾಂಡುರಂಗ ಮಾವಿನಕರ್, ತಾಲೂಕ ಮುಖಂಡರಾದ ಸೋಮಶೇಖರ್ ಸಿಂಗೆ, ಶಿವಶರಣಪ್ಪ ಧನ್ನೂರು, ವೀರಭದ್ರಪ್ಪ ಮುಗಳಿ, ಬಸವರಾಜ ಮಾಡ್ಯಾಳ, ನಾಗಪ್ಪ ಜೋಗಿ, ಅರ್ಜುನ್ ಭಾಸ್ಕರ ಸೇರಿದಂತೆ ನೂರಾರು ರೈತರು ಭಾಗವಹಿಸಿದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here