ಕಲಬುರಗಿ: ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡದೆ ಇರುವುದು ತೀವ್ರ ಬೇಸರ ತರಿಸಿದೆ ಎಂದು ಮಾಜಿ ಸಚಿವರಾದ,ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು ಈ ಹಿಂದೆ ಪ್ರಸ್ತಾಪಿಸಲಾದಂತೆ ಕಲಬುರಗಿ ಯಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಅಡಿಗಲ್ಲು ನೆರವೇರಿಸಲಾಗಿತ್ತು. ಈ ಕುರಿತು ಇಂದು ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ವಿಚಾರ ಪ್ರಸ್ತಾಪಿಸಿ ಸರ್ಕಾರದಿಂದ ಉತ್ತರ ಬಯಸಿ ಜವಳಿ ಪಾರ್ಕ್ ಸ್ಥಾಪನೆಗೆ ಅನುದಾನ ಕೂಡಾ ಬಿಡುಗಡೆಯಾಗಿದ್ದು, ಸದರಿ ಜವಳಿ ಪಾರ್ಕ್ ನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದಿಯೇ? ಹಾಗಿದ್ದರೆ, ಜವಳಿ ಪಾರ್ಕ್ ಉಳಿಸಿಕೊಳ್ಳಲು ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದ್ದೆ ಎಂದು ಶಾಸಕ ಹೇಳಿದ್ದಾರೆ.
” ನನ್ನ ಪ್ರಶ್ನೆಗೆ ಉತ್ತರಿಸಿದ ಕೈಮಗ್ಗ ಹಾಗೂ ಜವಳಿ ಸಚಿವರಾದ ಶ್ರೀಮಂತ ಬಾಳಾಸಾಹೇಬ ಪಾಟೀಲ್ ಜವಳಿ ಪಾರ್ಕ್ ಉಳಿಸಿಕೊಳ್ಳಲು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಇವರು ಕೇಂದ್ರ ಸರ್ಕಾರದ ಜವಳಿ ಮಂತ್ರಾಲಯಕ್ಕೆ ಈ ಯೋಜನೆಯನ್ನು ಮುಂದುವರೆಸುವಂತೆ ಕೋರಿ ದಿನಾಂಕ 10.02.2020 ರಂದು ಪತ್ರ ಬರೆಯಲಾಗಿತ್ತು. ಆದರೆ, ಕೇಂದ್ರ ಈ ಯೋಜನೆಗೆ ಒಪ್ಪಿಗೆ ನೀಡಿರುವುದಿಲ್ಲ ಹಾಗೂ ಜವಳಿ ಪಾರ್ಕ್ ನ ಮೂಲಭೂತ ಸೌಲಭ್ಯ ಅಭಿವೃದ್ದಿಗಾಗಿ ಈಗಾಗಲೇ ಕೇಂದ್ರದಿಂದ ಬಿಡುಗಡೆ ಮಾಡಿರುವ ರೂ 1.85 ಕೋಟಿಗಳನ್ನು ಹಿಂದಿರುಗಿಸಲು ಕೋರಿರುತ್ತಾರೆ” ಎಂದು ಉತ್ತರಿಸಿದ್ದಾರೆ.
ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಗ್ರಹಣ ಹಿಡಿದಿದೆ. ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಲಬುರಗಿ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಮಂಜೂರಾಗಿದ್ದ ಎಲ್ಲಾ ಯೋಜನೆಗಳನ್ನು ಒಂದೊದಾಗಿ ಕೈಬಿಡಲಾಗುತ್ತಿದೆ.
ಚಿಲಿಪಿಲಿ ಸಂಗೀತ ಪ್ರತಿಭಾನ್ವೇಷಣ ಪರೀಕ್ಷೆ: ನಾಲ್ಕು ಜನ ಅಂಧ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್
NIMZ, AIIMS, IIIT, ಕಲಬುರಗಿ ಪ್ರತ್ಯೇಕ ರೈಲ್ವೆ ವಿಭಾಗೀಯ ಕಚೇರಿಯ ನಂತರ ಈಗ ಜವಳಿ ಪಾರ್ಕ್ ಯೋಜನೆಯನ್ನೂ ಜಿಲ್ಲೆಯಿಂದ ಕೈಬಿಡಲಾಗಿದೆ.
ಈ ಯೋಜನೆಯಿಂದ ಜಿಲ್ಲೆಯಲ್ಲಿ 5 ರಿಂದ 6 ಸಾವಿರ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ, ಈಗ ಈ ಯೋಜನೆಯನ್ನು ಕಿತ್ತುಕೊಂಡು, ಬಿಜೆಪಿ ಸರ್ಕಾರವು ಜಿಲ್ಲೆಗೆ ದ್ರೋಹ ಬಗೆದಿದೆ.
ಈ ಯೋಜನೆಗೆ ನಿಗದಿಪಡಿಸಿದ್ದ ಇಕ್ವಿಟಿ ಭರ್ತಿಯಾಗದ ಕಾರಣದಿಂದ ಜವಳಿ ಪಾರ್ಕನ್ನು ಕಿತ್ತುಕೊಳ್ಳಲಾಗಿದೆ ಎಂಬ ಕೇಂದ್ರ ಸರ್ಕಾರದ ಕಾರಣ ಬಾಲಿಶವಾಗಿದೆ. ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿ, ಈ ಯೋಜನೆಗೆ ಬಂಡವಾಳ ಹರಿಸುವುದು ಸರ್ಕಾರದ ಕರ್ತವ್ಯ. ಇದರಲ್ಲಿ ವಿಫಲವಾದ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸದರು, ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಸಲುವಾಗಿ ಜನರ ಹಾದಿ ತಪ್ಪಿಸುತ್ತಿದ್ದಾರೆ.
ಸಾರ್ವಜನಿಕ ಶೌಚಾಲಯ ದುರಸ್ಥಿಗೆ ಆಗ್ರಹ
ಈಗಾಗಲೇ ಕೊರೋನಾ ನೆಪವೊಡ್ಡಿ 371(J) ಅಡಿಯಲ್ಲಿ ನೇರ ನೇಮಕಾತಿಗಳಿಗೂ ತಡೆಯೊಡ್ಡಿರುವ ರಾಜ್ಯ ಸರ್ಕಾರ, ಈಗ ಜವಳಿ ಪಾರ್ಕ್ ಯೋಜನೆಯನ್ನೂ ಕಿತ್ತುಕೊಂಡು ಇಲ್ಲಿನ ನಿರುದ್ಯೋಗಿ ಯುವಕ – ಯುವತಿಯರಿಗೆ ಮೋಸವೆಸಗಿದೆ. ಸರ್ಕಾರವು ಈ ಕೂಡಲೇ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಜವಳಿ ಪಾರ್ಕನ್ನು ಪುನಃ ಕಲಬುರಗಿಯಲ್ಲಿಯೇ ಸ್ಥಾಪಿಸುವ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಕೂಡಾ ಸದನದಲ್ಲಿ ಆಗ್ರಹಿಸಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.