ಬಿಸಿ ಬಿಸಿ ಸುದ್ದಿ

ಬರ ಪರಿಹಾರಕ್ಕೆ ಆಗ್ರಹಿಸಿ ಗ್ರಾಮ ವಾಸ್ತವ್ಯದಲ್ಲಿ ಮುಖ್ಯಮಂತ್ರಿಗಳಿಗೆ ಇಂದು ಮನವಿ ಸಲ್ಲಿಕೆ

ಕಲಬುರಗಿ: ರಾಜ್ಯ ಸರ್ಕಾರವು ಈಗಾಗಲೇ ೧೬೦ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಪ್ರತಿ ಎಕರೆಗೆ 20.000 ರೂ.ಗಳ ಪರಿಹಾರವನ್ನು ಕೊಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಜೂನ್ ೨೨ರಂದು ಹೇರೂರ್(ಬಿ)ಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾಧ್ಯಕ್ಷ ಮೌಲಾ ಮುಲ್ಲಾ ಅವರು ಇಲ್ಲಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯನ್ನು ಸಹ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಯಾವುದೇ ರೀತಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು.

ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಆಗಿದೆ. ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿಗಳು ಸರ್ವ ಪಕ್ಷಗಳ ಸಭೆಯನ್ನು ಕರೆಯಬೇಕು ಎಂದು ಅವರು ಒತ್ತಾಯಿಸಿದರು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಆಗಿರುವ ಕಾಮಗಾರಿಗಳನ್ನು ಅಂತರ್ ಜಲ ಹೆಚ್ಚಿಸುವುದಕ್ಕೆ ಸಹಾಯಕವಾಗಿರಬೇಕು ಹಾಗೂ ಸರ್ಕಾರ ನಿಗದಿಪಡಿಸಿರುವ ದಿನಗಳು ನಿರಂತರ ಕೆಲಸ ಕೊಡಬೇಕು ಹಾಗೂ ಕಾರ್ಮಿಕರಿಗೆ ಸಮಯದ ಮೇಲೆ ಕೂಲಿ ನೀಡಬೇಕು ಎಂದು ಅವರು ಆಗ್ರಹಿಸಿದರು.

ಈಗಾಗಲೇ ಈ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜಿಲ್ಲೆಯ 30 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಈಗ ಮುಖ್ಯಮಂತ್ರಿಗಳ ಗಮನ ಸೆಳೆಯಲು ಗ್ರಾಮ ವಾಸ್ತವ್ಯದ ಸ್ಥಳಕ್ಕೆ ಹೋಗಿ ಮನವಿ ಸಲ್ಲಿಸುತ್ತೇವೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಶರಣಬಸಪ್ಪ ಗಣಜಲಖೇಡ್, ಪದ್ಮಾಕರ್ ಜಾನಿಬ್, ರಾಜಶೇಖರ್ ಬಸಮೆ ಅವರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago