ವಾಡಿ: ಪಟ್ಟಣದ ವಿವಿಧ ಅಂಗಡಿಗಳ ನಾಮಫಲಕಗಳು ಇಂಗ್ಲೀಷ್ ಭಾಷೆಯ ಅಕ್ಷಗಳಿಂದ ರಾರಾಜಿಸುವ ಮೂಲಕ ಕನ್ನಡವನ್ನು ಅವಮಾನಿಸಿವೆ. ಕೂಡಲೇ ಅಂಗಡಿಗಳ ಆಂಗ್ಲ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ವಲಯ ಘಟಕದ ಅಧ್ಯಕ್ಷ ಖೇಮಲಿಂಗ ಎನ್.ಬೆಳಮಗಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕಸಾಪ ಅಧ್ಯಕ್ಷ ಬೆಳಮಗಿ, ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಕಲಬುರಗಿ ನಗರಕ್ಕಾಗಮಿಸಿ ಜಿಲ್ಲಾಡಳಿತದೊಂದಿಗೆ ಮಹತ್ವದ ಸಭೆ ನಡೆಸುವ ಮೂಲಕ ಕನ್ನಡಕ್ಕೆ ಹೆಚ್ಚಿನ ಆಧ್ಯತೆ ನೀಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಖಡಕ್ ಸಂದೇಶ ರವಾನಿಸಿದ್ದರು. ಈ ಕುರಿತು ಎಚ್ಚೆತ್ತುಕೊಂಡಿದ್ದ ಸ್ಥಳೀಯ ಪುರಸಭೆಯ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ ಅವರು ಅಂಗಡಿ ಮಾಲೀಕರಿಗೆ ಮತ್ತು ವಿವಿಧ ವ್ಯಾಪಾರಿಗಳಿಗೆ ಹತ್ತು ದಿನಗಳ ಗಡುವು ನೀಡಿದ್ದರು.
ಡಿ.ಕೆ.ಶಿವಕುಮಾರಗೆ ಯುವ ಮುಖಂಡ ಆರಿಫ್ ಮೋಮಿನ್ ಸನ್ಮಾನ
ಅಂಗಡಿ ನಾಮಫಲಕಗಳಲ್ಲಿ ಕನ್ನಡ ಅಕ್ಷರಗಳಿಗೆ ಮೊದಲ ಪ್ರಾತಿನಿಧ್ಯ ನೀಡಬೇಕು. ನಂತರ ಇತರ ಭಾಷೆಗಳಿಗೆ ಅವಕಾಶ ನೀಡಬೇಕು. ಕನ್ನಡವಲ್ಲದ ಭಾಷೆಗೆ ಮೊದಲ ಆಧ್ಯತೆ ನೀಡಿದವರ ವಿರುದ್ಧ ಕ್ರಮಗೈಗೊಂಡು ದಂಡ ವಿಧಿಸಲಾಗುವುದು ಎಂದು ಪ್ರಕಟಣೆ ಹೊರಡಿಸಿದ್ದರು. ನೀಡಿದ ಗಡುವು ಮುಗಿದರೂ ಪುರಸಭೆ ಆಡಳಿತ ಕ್ರಮಕ್ಕೆ ಮುಂದಾಗಿಲ್ಲ. ನಗರದಲ್ಲಿ ಕನ್ನಡ ಭಾಷೆಯ ನಾಮಫಲಕಗಳು ವಿರಳವಾಗಿವೆ. ಕೂಡಲೇ ಅಂತಹ ಅಂಗಡಿ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ನಿರ್ಲಕ್ಷ್ಯ ವಹಿಸಿದರೆ ಕಸಾಪ ಪದಾಧಿಕಾರಿಗಳು ಆಂಗ್ಲ ನಾಮಫಲಕಗಳಿಗೆ ಮಸಿ ಬಳಿಯುವ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಖೇಮಲಿಂಗ ಬೆಳಮಗಿ ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…