ಬಿಸಿ ಬಿಸಿ ಸುದ್ದಿ

ಬುಡಕಟ್ಟು ಜನಾಂಗಕ್ಕೆ ಸರ್ಕಾರದ ಯೋಜನೆಗಳ ಅರಿವು-ನೆರವು ಕಾರ್ಯಕ್ರಮ

ಶಹಾಬಾದ: ತೀವ್ರ ಅನಕ್ಷರತೆಯಿಂದ ಬಡತನ ರೇಖೆಗಿಂತ ಕೆಳಮಟ್ಟದಲ್ಲಿ ಜೀವಿಸುತ್ತಿರುವ ಬುಡಕಟ್ಟು ಜನಾಂಗದವರಿಗೆ ಸರ್ಕಾರದ ವಿವಿಧ ಸವಲತ್ತುಗಳ ಬಗ್ಗೆ ಅರಿವು ಮೂಡಿಸಬೇಕು.ಆ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಕರ್ತವ್ಯ ಎಂದು ನಗರದ ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲೇಶಿ.ಪಿ.ಮೋಹಿತೆ ಹೇಳಿದರು.

ಅವರು ನಗರದ ಹನುಮಾನ ತಾಂಡಾದಲ್ಲಿ ತಾಲೂಕಾ ಸೇವಾ ಸಮಿತಿ ಚಿತ್ತಾಪೂರ ಹಾಗೂ ವಕೀಲರ ಸಂಘ ಶಹಾಬಾದ ಸಹಯೋಗದಲ್ಲಿ ಆಯೋಜಿಸಲಾದ ಬುಡಕಟ್ಟು ಜನಾಂಗದವರಿಗೆ ಸರ್ಕಾರದಿಂದ ಸಿಗುವ ಯೋಜನೆ ಬಗ್ಗೆ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಗತ್ತಿನ ಎಲ್ಲಾ ಸಮಸ್ಯೆಗಳಿಗೆ ಕಾರ್ಲ ಮಾರ್ಕ್ಸ ವಿಚಾರಧಾರೆ ಉತ್ತರ

ಬುಡಕಟ್ಟು ಜನರನ್ನು ಅರಣ್ಯದಿಂದ ಒಕ್ಕಲೆಬ್ಬಿಸಿದರೂ, ಅದಕ್ಕೆ ತಕ್ಕ ರೀತಿ ಪರ್ನವಸತಿ ಕಲ್ಪಿಸುತ್ತಿಲ್ಲ. ಅನಕ್ಷರತೆಯಿಂದ ಹೆಚ್ಚು ಶೋಷಣೆಗೆ ಒಳಗಾಗುತ್ತಿರುವ ಬುಡಕಟ್ಟು ಜನರನ್ನು ಎಷ್ಟೋ ಬಾರಿ ಮಾವೋವಾದಿಗಳೆಂದು ಜೈಲಿಗೆ ದೂಡಿದ ಉದಾಹರಣೆಗಳಿವೆ.ಇದಕ್ಕೆ ಕಾರಣ ನಾವು ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆದುಕೊಂಡು ಬರುವ ಕೆಲಸ ಮಾಡಿಲ್ಲ.ಅವರ ಹಕ್ಕುಗಳನ್ನು ರಕ್ಷಿಸಿಲ್ಲ.ಆದ್ದರಿಂದ ಅಂತಹವರಿಗೆ ಶಿಕ್ಷಣದ ಅರಿವು ಮೂಡಿಸುವ ಕಾರ್ಯ ಮಾಡಬೇಕಿದೆ.

ಬುಡಕಟ್ಟು ಸಮುದಾಯಗಳಿಗೆ ಮೀಸಲಾದ ಸರಕಾರಿ ಯೋಜನೆಗಳು ತಲುಪಿದಾಗ ಮಾತ್ರ ಬುಡಕಟ್ಟು ಜನರ ಅಭಿವೃದ್ಧಿ ಸಾಧ್ಯ ಆದಿವಾಸಿ ಬುಡಕಟ್ಟು ಸಮುದಾಯಗಳು ಅರಣ್ಯದ ಅಂಚಿನಲ್ಲಿಮತ್ತು ಅರಣ್ಯದ ಹೊರಗೆ ವಾಸಿಸುತ್ತಿದ್ದು,ಎಲ್ಲರೀತಿಯ ಸೌಲಭ್ಯ ಒದಗಿಸಬೇಕು. ಸರಕಾರವು ಬುಡಕಟ್ಟು ಸಮುದಾಯಗಳಿಗೆ ಅನೇಕ ಯೋಜನೆ ಹಾಕಿಕೊಂಡಿದೆ. ಅವುಗಳನ್ನು ಅವರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.

ಕ್ಷಯ ಮುಕ್ತ ಮಾಡಲು ವಿದ್ಯಾರ್ಥಿಗಳಿಗೆ ಸಲಹೆ

ವಕೀಲರ ಸಂಘದ ಅಧ್ಯಕ್ಷ ಅತುಲ್ ಯಲಶೆಟ್ಟಿ, ವಕೀಲರಾದ ದೇವಪ್ಪ ಕುಲಕುಂದಿ,ರವೀಂದ್ರ.ಡಿ.ಕೆ, ಉಮೇಶ ಪೋಚ್ಚಟ್ಟಿ, ನಾಗೇಶ ಧನ್ನೇಕರ್,ತಿಮ್ಮಯ್ಯ ಮಾನೆ,ರಮೇಶ ರಾಠೋಡ,ರಘುವೀರಸಿಂಗ ಠಾಕೂರ ಇತರರು ಇದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

1 hour ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

12 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

12 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

14 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

14 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

15 hours ago