ಯಾದಗಿರಿ: ಕರ್ನಾಟಕದ ಮೂಲೆ ಮೂಲೆಯಲ್ಲಿರುವ ಪ್ರತಿಯೊಂದು ಹಳ್ಳಿಗಳಿಗೂ ಅಭಿವೃದ್ಧಿಯ ಪಥದತ್ತ ಕೊಂಡೊಯ್ದ ಅಲ್ಲಿಯ ಆರ್ಥಿಕತೆ, ಶಿಕ್ಷಣ, ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದೇ ನನ್ನ ಮುಖ್ಯ ಉದ್ದೇಶವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಎಚ್. ಡಿ. ಕುಮಾರಸ್ವಾಮಿ ಅವರು ಹೇಳಿದರು.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಲ್ಲಿ ಹಲವಾರು ಸಾರ್ವಜನಿಕರ ಕುಂದುಕೊರತೆ ಹಾಗೂ ಬಡ ಜನರ ಕಷ್ಟಗಳನ್ನು ಆಲಿಸಿ ಕೆಲವು ಒಂದಿಷ್ಟು ಜನರಿಗೆ ಸ್ಥಳದಲ್ಲಿ ಪರಿಹಾರ ಒದಗಿಸಿಕೊಟ್ಟರು. ನಂತರ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ ಕೆಲ ನಿಮಿಷಗಳ ಕಾಲ ಗೊಂದಲ ಉಂಟಾಯಿತು.
ಈ ಸಮಾರಂಭದ ವೇದಿಕೆಯ ಮೇಲೆ ಶಹಾಪುರ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ, ಗುರುಮಿಟ್ಕಲ್ ಶಾಸಕರಾದ ನಾಗನಗೌಡ ಕಂದಕೂರ, ಜಿಲ್ಲಾ ಉಸ್ತುವಾರಿ ಸಚಿವರಾದ ರಾಜಶೇಖರ್ ಪಾಟೀಲ್, ಬಂಡೆಪ್ಪ ಕಾಶಂಪುರ ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…