ಯೋಗಾಭ್ಯಾಸದಿಂದ ಆರೋಗ್ಯಕರ ಸಮಾಜ ನಿರ್ಮಾಣ: ಗೀತಾ ಚಿದ್ರಿ

0
41

ಬೀದರ್: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ, ಪತಾಂಜಲಿ ಯೋಗ ಸಮಿತಿ, ಆರ್ಟ್ ಆಫ್ ಲಿವಿಂಗ್ ಹಾಗೂ ರೋಟರಿ ಕ್ಲಬ್ ಸಂಯುಕ್ತಾಶ್ರಯದಲ್ಲಿ ಜೂ.21 ರಂದು ನಗರದ ಕರ್ನಾಟಕ ಫಾರ್ಮಸಿ ಕಾಲೇಜು ಆವರಣದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಗೀತಾ ಪಂಡಿತರಾವ್ ಚಿದ್ರಿ ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ ಅವರು ಯೋಗಾಭ್ಯಾಸ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ಯೋಗ ಶಿಕ್ಷಕರಾದ ಶಿವಲೀಲಾ ಚಿದ್ರಿ ಹಾಗೂ ಸತ್ಯಪ್ರಕಾಶ ಅವರಿಂದ ಯೋಗಾಭ್ಯಾಸ ಮತ್ತು ಯೋಗ ಪ್ರದರ್ಶನ ನಡೆಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷರು ಮಾತನಾಡಿ, ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದ್ದು, ಯೋಗಾಭ್ಯಾಸದಿಂದ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಾರದಾ ಸಾಂಬ್ರೆಕರ್ ಅವರು ಯೋಗ ಮಹತ್ವದ ಬಗ್ಗೆ ವಿವರಣೆ ನೀಡಿದರು. ಆರ್ಟ್ ಆಫ್ ಲಿವಿಂಗ್‌ನ ಜಯಲಕ್ಷ್ಮಿ ಮಾತನಾಡಿದರು.

ತೋಟಗಾರಿಕೆ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ರವೀಂದ್ರ ಮೂಲಗೆ, ಸಿದ್ರಾಮೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಡಾ.ರೂಪೇಶ ಏಕಲಾರಕರ, ಎನ್.ಕೆ.ಜಾಬಶೆಟ್ಟಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ನಾಗರಾಜ ಮೂಲಿಮನಿ, ಶಾಹೀನ್ ಶಿಕ್ಷಣ ಸಂಸ್ಥೆಯ ಡಾ.ಅಬ್ದುಲ್ ಖದೀರ್, ಪತಾಂಜಲಿ ಯೋಗ ಸಮಿತಿ, ಆರ್ಟ್ ಆಫ್ ಲಿವಿಂಗ್ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಜನರು ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here