ಕಲಬುರಗಿ: ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಶುಕ್ರವಾರ ಇಲ್ಲಿನ ಜಿಮ್ಸ್ ಲಸಿಕಾ ಕೇಂದ್ರದಲ್ಲಿ ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಪಡೆದರು.
ನಂತರ ಮಾತನಾಡಿದ ಅವರು ಈ ಹಿಂದೆ ಫೆಬ್ರವರಿ 8 ರಂದು ಮೊದಲ ಡೋಸ್ ಪಡೆದಿದ್ದು, ನಾಲ್ಕು ವಾರದ ನಂತರ ಇಂದು ಎರಡನೇ ಡೋಸ್ ಪಡೆದಿದ್ದೇನೆ ಎಂದರು.
60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ರಿಂದ 59 ವರ್ಷದೊಳಗಿನ ದೀರ್ಘಕಾಯಿಲೆಯಿಂದ ಬಳಲುತ್ತಿರುವವರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ಅದರಂತೆ ಇಂದು ನಾನು ನನ್ನ ತಂದೆಯವರಿಗೆ ಕೋವಿಡ್ ಲಸಿಕೆ ಕೊಡಿಸಿದ್ದು, ನನಗೆ ಸಂತಸ ತಂದಿದೆ. ನಾನು ಚಿಕ್ಕವಳಿದ್ದಾಗ ನನ್ನ ತಂದೆಯವರು ನನಗೆ ಬಿ.ಸಿ.ಜಿ. ಲಸಿಕೆ ಕೊಡಿಸಿದ್ದನ್ನು ಇದೇ ಸಂದರ್ಭದಲ್ಲಿ ಅವರು ಸ್ಮರಿಸಿದರು.
ಎಸ್.ಡಿ.ಪಿ.ಐಯೊಂದಿಗೆ ಸೇರಿ ಜನಸೇವೆ, ಶೋಷಿತರಿಗಾಗಿ ಹೋರಾಟಕ್ಕೆ ಸಿದ್ಧ: ಬಿ.ಆರ್ ಭಾಸ್ಕರ್ ಪ್ರಸಾದ್
ಕೋವಿಡ್ ಲಸಿಕೆ ಸುರಕ್ಷಿತವಾಗಿದ್ದು, ಯಾವುದೇ ಆತಂಕವಿಲ್ಲದೆ ಲಸಿಕೆ ಪಡೆಯಬಹುದಾಗಿದೆ. ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತವಾಗಿ ಪ್ರತಿಯೊಬ್ಬರು ತಮ್ಮ ತಂದೆ-ತಾಯಿ ಹಾಗೂ ಮನೆಯಲ್ಲಿರುವ ಹಿರಿಯರಿಗೆ ಕೋವಿಡ್ ಲಸಿಕೆ ಕೊಡಿಸಲು ಮುಂದಾಗುವ ಮೂಲಕ ಮಕ್ಕಳು ತಮ್ಮ ಜವಾಬ್ದಾರಿ ಪೂರೈಸಬೇಕು ಎಂದು ವಿ.ವಿ.ಜ್ಯೋತ್ಸ್ನಾ ಅವರು ಕರೆ ನೀಡಿದರು.
ಲಸಿಕೆ ಪಡೆದ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರ ತಂದೆ 72 ವರ್ಷದ ಜೋಷಿ ಅವರು ಮಾತನಾಡಿ ಲಸಿಕೆ ಸುರಕ್ಷಿತವಾಗಿದ್ದು 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಪಡೆಯುವ ಅವಶ್ಯತೆ ಇದೆ. ಯಾವುದೇ ಭಯವಿಲ್ಲದೆ ಲಸಿಕೆ ಪಡೆಯಿರಿ ಎಂದರು.
ಲಸಿಕೆ ಪಡೆದ ನಂತರ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ನಾ ಅವರು ತಮ್ಮ ತಂದೆ 72 ವರ್ಷದ ಜೋಷಿ ಅವರೊಂದಿಗೆ ಸಾರ್ವಜನಿಕರೊಂದಿಗೆ ಲಸಿಕಾ ಕೇಂದ್ರದಲ್ಲಿ ಅರ್ಧ ಗಂಟೆಗಳ ಕಾಲ ವೈದ್ಯರ ನಿಗಾದಲ್ಲಿ ಇದ್ದರು.
ಎಸ್.ಡಿ.ಪಿ.ಐಯೊಂದಿಗೆ ಸೇರಿ ಜನಸೇವೆ, ಶೋಷಿತರಿಗಾಗಿ ಹೋರಾಟಕ್ಕೆ ಸಿದ್ಧ: ಬಿ.ಆರ್ ಭಾಸ್ಕರ್ ಪ್ರಸಾದ್
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಶೇಖರ ಮಾಲಿ, ಜಿಮ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಉಮೇಶ ಸೇರಿದಂತೆ ನರ್ಸಿಂಗ್ ಸಿಬ್ಬಂದಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…