ಕಲಬುರಗಿ: ಭೂ ನಿವೇಶನಗಳ ಬಗ್ಗೆ ದಾಖಲೆನೀಡುವಂತೆಕೇಳಿ ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರಿಗೆ ಮಾಹಿತಿ ನೀಡದ ಕಾರಣ ಕರ್ನಾಟಕ ಮಾಹಿತಿ ಆಯೋಗದ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ವಹಿಸಿದ ಹಿನೆಲೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರಿಗೆ 20 ಸಾವಿರ ರೂ. ದಂಡ ವಿಧಿಸಲಾಗಿದೆ.
ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯ ಗಣಕತಂತ ವಿಭಾಗದ ಸಹಾಯಕರಾದ ಸಾರ್ವಜನಿಕ ಮಾಹಿತಿ ಅಧಿಕಾರಿ ನೀಲಕಂಠತರಾಯ ಎನ್ನುವವರಿಗೆ ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ಡಾ. ಕೆಇ. ಕುಮಾರಸ್ವಾಮಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
2021ರ ಏಪ್ರಿಲ್ ಮತ್ತು ಮೇತಿಂಗಳ ಸಂಬಳದಲ್ಲಿ ತಲಾ 10 ಸಾವಿರ ರೂಗಳನ್ನು ಸರ್ಕಾರದ ಲೆಕ್ಕಶೀರ್ಷಿಕೆ ಖಾತೆಗೆ ಜಮೆ ಮಾಡುವಂತೆ ಪಾಲಿಕೆ ಆಯುಕ್ತರಿಗೆ ಆದೇಶ ಪತ್ರದಲ್ಲಿ ನಿರ್ದೇಶನ ನೀಡಿದ್ದಾರೆ.