ನಿಯಮಿತ ವ್ಯಾಯಾಮವಿಲ್ಲದಿದ್ದಲ್ಲಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ: ಅಮರೇಶ ಇಟಗಿ

ಶಹಾಬಾದ: ಆಧುನಿಕ ವಿದ್ಯಾಮಾನದಲ್ಲಿ ಬದಲಾದ ಆಹಾರ ಕ್ರಮ ಹಾಗೂ ಜೀವನ ಶೈಲಿ ಮತ್ತು ದೇಹಕ್ಕೆ ನಿಯಮಿತ ವ್ಯಾಯಾಮವಿಲ್ಲದಿದ್ದಲ್ಲಿ ಹದಿಹರೆಯ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ ಎಂದು ಹದಿಹರೆಯದ ಆಪ್ತ ಸಮಾಲೋಚಕ ಅಮರೇಶ ಇಟಗಿ ಹೇಳಿದರು.

ಅವರು ನಗರದ ಮಿನಿರೋಸ್ ಶಾಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ,ಸಮುದಾಯ ಆರೋಗ್ಯ ಕೇಂದ್ರ ಶಹಾಬಾದ ಮತ್ತು ಮಿನಿರೋಸ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಹದಿಹರೆಯ ಆರೋಗ್ಯ ಮತ್ತು ಕ್ಷೇಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳಾ ದೌರ್ಜನ್ಯ ತಡೆಗಟ್ಟಲು ಪಿಎಸ್‌ಐ ಯಶೋಧಾ ಕರೆ

ತಾರುಣ್ಯ ಎಂಬುದು ವಿದ್ಯಾರ್ಥಿನಿಯರಲ್ಲಿ ಉಲ್ಲಾಸವೆನಿಸುವ ಘಳಿಗೆಯಾಗಿದೆ.ಈ ತಾರುಣ್ಯ ಹಂತದಲ್ಲಿ ದೇಹದಲ್ಲಿರುವ ಹಾರ್ಮೋನುಗಳಿಂದ ವಿದ್ಯಾರ್ಥಿನಿಯರ ಮೇಲೆ ಶಾರೀರಿಕ ಮತ್ತು ಮಾನಸಿಕ ಬದಲಾವಣೆ ನಡೆಯುತ್ತದೆ. ಈ ಸಮಯದಲ್ಲಿ ನಿಯಮಿತ ಆಹಾರ,ವ್ಯಾಯಾಮ ಹಾಗೂ ನಿದ್ರೆ ಇವುಗಳು ವ್ಯಕ್ತಿಯ ಜೀವನದ ಮೂರು ಸ್ತಂಭಗಳು.ಜಂಕ್ ಫುಡ್ ಸೇವಿಸುವುದನ್ನು ಕಡಿಮೆ ಮಾಡಿ ವಿಟಮಿನಯುಕ್ತ ಸೊಪ್ಪು ತರಕಾರಿಗಳನ್ನು ಹೆಚ್ಚೆಚ್ಚು ಸೇವಿಸುವಂತಾಗಬೇಕು ಹೇಳಿದರಲ್ಲದೇ ಹದಿಹರೆಯದ ಆರೋಗ್ಯ ಆಹಾರಶೈಲಿಯ ಬಗ್ಗೆ ಅವರು ವಿದ್ಯಾರ್ಥಿಗಳು ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದೆಂಬ ಮಾಹಿತಿಯನ್ನು ವಿವರಿಸಿದರು.

ಶ್ರೀಸಿದ್ಧರಾಮೇಶ್ವರ ಹಿರೇಮಠದ ಶಿಖರ ಕಟ್ಟಡದ ಪ್ರಾರಂಭೋತ್ಸವ

ಕಾರ್ಯಕ್ರಮವನ್ನು ಡಾ ಸಂದ್ಯಾ ಕಾನೇಕರ ಮುಖ್ಯ ದಂತ ಆರೋಗ್ಯ ಅಧಿಕಾರಿಗಳು ಉದ್ಘಾಟಿಸಿದರು. ಮೀನಿರೋಸ ಪ್ರೌಢಶಾಲೆಯ ಅಧ್ಯಕ್ಷ ಶಬ್ಬಿರ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು.  ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ ಶಂಕರ ರಾಠೋಡ,ಡಾ ದಶರಥ ಜಿಂಗಾಡೆ, ಕ್ಷಯರೋಗದ ಮೇಲ್ವಿಚಾರಕಿ ರಜನಿ ಟೀಲೆ ,ಶಂಕರ ವಾಲಿಕಾರ ಹಾಗೂ ಆರೋಗ್ಯ ಸಹಾಯಕಿ ಶರಣಮ್ಮ ಇದ್ದರು.  ಶಾಲೆಯ ಮುಖ್ಯ ಗುರುಗಳಾದ ಪರಶುರಾಮ ಬಿ.ಎಮ್, ಎಲ್ಲಾ ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

28 mins ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

38 mins ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

40 mins ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

46 mins ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

47 mins ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

52 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420