ಪೋಷಣ ಅಭಿಯಾನದಲ್ಲಿ ಪಾಲ್ಗೊಳ್ಳದಿರಲು ಅಂಗನವಾಡಿ ನೌಕರರ ನಿರ್ಧಾರ: ಸುರೇಖಾ ಕುಲಕರ್ಣಿ

1
48
ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಮುಂದೆ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿ ಪೋಷಣ ಅಭಿಯಾನದಲ್ಲಿ ಪಾಲ್ಗೊಳ್ಳುವುದಿಲ್ಲವೆಂದು ಮನವಿ ಸಲ್ಲಿಸಿದರು.

ಸುರಪುರ: ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೆ ಅಂಗನವಾಡಿ ನೌಕರರು ರಾಜ್ಯಾದ್ಯಂತ ಪೋಷಣ ಪಕ್ವಾಡ ಅಭಿಯಾನದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಸುರೇಖಾ ಕುಲಕರ್ಣಿ ಮಾತನಾಡಿದರು.

ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಸರಕಾರಕ್ಕೆ ಒತ್ತಾಯಿಸಲು ಶಾಸಕ ರಾಜುಗೌಡಗೆ ಮನವಿ

Contact Your\'s Advertisement; 9902492681

ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಮಾತನಾಡಿ,ಅಂಗನವಾಡಿ ನೌಕರರು ೨೦೧೮ ರಿಂದಲೂ ಅನೇಕ ಬೇಡಿಕೆಗಳ ಕುರಿತು ಸರಕಾರಕ್ಕೆ ಮನವಿ ಮಾಡುತ್ತಿದ್ದೇವೆ.ಆದರೆ ಸರಕಾರ ನಮ್ಮ ಬೇಡಿಕೆಗಳನ್ನು ಕಡೆಗಣಿಸುತ್ತಿದೆ,ಆದ್ದರಿಂದ ಬೇಸತ್ತು ಈಗ ಸರಕಾರದ ಯಾವುದೇ ಯೋಜನೆಯಲ್ಲಿ ಕೆಲಸ ಮಾಡದಿರಲು ನಿರ್ಧರಿಸಿರುವುದಾಗಿ ತಿಳಿಸಿದರು.

ಎಸ್ಸಿ ಎಸ್ಟಿ ನಿಮಗಳಿಗೆ ಅನುದಾನ ಹೆಚ್ಚಿಸಲು ಆಗ್ರಹಿಸಿ ಶಾಸಕ ರಾಜುಗೌಡ ಮನೆ ಮುಂದೆ ಪ್ರತಿಭಟನೆ

ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಬರೆದ ಮನವಿಯನ್ನು ಶಿಶು ಅಭಿವೃಧ್ಧಿ ಯೋಜನಾಧಿಕಾರಿ ಲಾಲಸಾಬ್ ಪೀರಾಪುರ ಅವರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷೆ ಬಸ್ಸಮ್ಮ ಆಲ್ಹಾಳ ರಾಧಾಬಾಯಿ ಲಕ್ಷ್ಮೀಪುರ ನಸೀಮಾ ಮುದನೂರು ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here