ಆರೋಗ್ಯ-ಅಮೃತ

ಕ್ಷಯರೋಗ ಮುಕ್ತ ರಾಜ್ಯವನ್ನಾಗಿ ಮಾಡಲು ಇಲಾಖೆ ಪಣತೊಟ್ಟಿದೆ: ಡಾ. ರಾಜಶೇಖರ ಮಾಲಿ

ಕಲಬುರಗಿ: ಕರ್ನಾಟಕವನ್ನು 2025 ರೊಳಗಾಗಿ ಕ್ಷಯರೋಗ ಮುಕ್ತ ರಾಜ್ಯವನ್ನಾಗಿ ಮಾಡಲು ಇಲಾಖೆಯು ಪಣ ತೊಟ್ಟಿದೆ ಎಂದು ಕಲಬುರಗಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ ಅವರು ತಿಳಿಸಿದರು.

ಸೋಮವಾರ ಇಲ್ಲಿನ ಜಿಲ್ಲಾ ಸಮೀಕ್ಷಣಾ ಘಟಕದಲ್ಲಿ ವಿಶ್ವ ಕ್ಷಯರೋಗ ದಿನದ ಅಂಗವಾಗಿ ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 24 ರಂದು “ಕ್ಷಯರೋಗ ನಿರ್ಮೂಲನೆಗೊಳಿಸಲು “ಕಾಲ ಘಟ್ಟಿಸುತ್ತಿದೆ”, ಟಿ. ಬಿ. ಸೋಲಿಸಿ ಕರ್ನಾಟಕ ಗೆಲ್ಲಿಸಿ” ಎಂಬ ಘೋಷ ವಾಕ್ಯದೊಂದಿಗೆ ಕ್ಷಯ ಮುಕ್ತ ರಾಜ್ಯವಾಗಲು ನಾವೆಲ್ಲರೂ ಜೊತೆಯಾಗೋಣ ಎಂದು ಅವರು ಕರೆ ನೀಡಿದರು.

ಮಾವಿನ ಹಣ್ಣಿನ ನೊಣದ ಹತೋಟಿಗೆ ಕೈಗೊಳ್ಳುವ ಕ್ರಮಗಳು

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಯಾವುದೇ ರೀತಿಯ ಜಾಥಾ, ರ್ಯಾಲಿಗಳು ಇರುವುದಿಲ್ಲ. ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕ್ಷಯರೋಗದ ಕುರಿತ ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಗುವುದು. ಗ್ರಾಮ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾಯಿತ ಪ್ರತಿನಿಧಿಗಳಿಗೂ ಕ್ಷಯರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ತಾಲೂಕಿನ ಬಸ್‍ಸ್ಟಾಂಡ್‍ಗಳಲ್ಲಿಯೂ ಶ್ರವ್ಯ ಮಾಧ್ಯಮದ ಮೂಲಕ ಕ್ಷಯರೋಗ ಕುರಿತ ಜಿಂಗಲ್ಸ್ ಪ್ರಸಾರ ಮಾಡಲಾಗುತ್ತಿದೆ ಎಂದರು.

2015ರಲ್ಲಿ ದೇಶದಲ್ಲಿ ಪ್ರತಿ ಲಕ್ಷಕ್ಕೆ 192 ಕ್ಷಯರೋಗಿಗಳು ಇದಿದ್ದನ್ನು, 2025ಕ್ಕೆ ಪ್ರತಿ ಲಕ್ಷಕ್ಕೆ 44 ಕ್ಕೆ ಇಳಿಸುವ ವಿಶ್ವಾಸ ಹೊಂದಲಾಗಿದೆ. ಅದೇ ರೀತಿ ಸಾವಿನ ಸಂಖ್ಯೆ ಪ್ರತಿ ಲಕ್ಷಕ್ಕೆ 15 ರಿಂದ 3ಕ್ಕೆ ಇಳಿಸಲು ಎಲ್ಲಾ ಅಗತ್ಯ ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ 2019 ರಲ್ಲಿ 4640 ಕ್ಷಯ ರೋಗಿಗಳಿದ್ದರು, 2020ರಲ್ಲಿ ಕೋವಿಡ್ ಸೋಂಕಿನ ಕಾರಣ ಹೆಚ್ಚಿನ ರೋಗಿಗಳು ಆಸ್ಪತ್ರೆಗೆ ಬರದಿರುವುದರಿಂದ ಕೇವಲ 2714 ಪ್ರಕರಣಗಳು ಮಾತ್ರ ದಾಖಲಾಗಿವೆ. ಇನ್ನೂ 2021ರ ಮಾರ್ಚ್ 19ರ ವರೆಗೆ 741 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅವರು ಅಂಕಿ ಸಂಖ್ಯೆ ವಿವರಿಸಿದರು.

ಗುರು ವ್ಯಕ್ತಿಯಲ್ಲ ಅದೊಂದು ತತ್ತ್ವ: ಜಯಶ್ರೀ ದಂಡೆ

ಕ್ಷಯರೋಗದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆಶಾ ಕಾರ್ಯಕರ್ತೆಯರು ಮನೆ-ಮನೆ ಭೇಟಿ ನೀಡುವರು. ತಲಾ 10 ಜನರ ಎನ್.ಎಸ್.ಎಸ್. ತಂಡ ಅಂಗಡಿ, ಮುಂಗಟ್ಟು ಸೇರಿದಂತೆ ವಿವಿಧ ಕಡೆ ಭೇಟಿ ನೀಡಿ ರೋಗದ ಕುರಿತು ಅರಿವು ಮೂಡಿಸಲಿದ್ದಾರೆ. ಸರ್ಕಾರವು ಕ್ಷಯರೋಗಿಗೆ ನಿಕ್ಷಯ ಪೋಷಣಾ ಯೋಜನೆಯಡಿ ಪ್ರತಿ ತಿಂಗಳು 500 ರೂ. ಗಳ ಧನಸಹಾಯ ಹಾಗೂ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಖಾಸಗಿ ಹಾಗೂ ಆಶಾ ಕಾರ್ಯಕರ್ತೆಯರಿಗೆ 1000 ರೂ. ಗಳ ಗೌರವ ಧನ ನೀಡಲಾಗುವುದು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ವಿವೇಕಾನಂದ ರೆಡ್ಡಿ, ಜಿಲ್ಲಾ ಕ್ಷಯರೋಗ ಆಪ್ತ ಸಮಾಲೋಚಕ ಮಂಜುನಾಥ ಕಂಬಳಿಮಠ, ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಅಬ್ದುಲ್ ಜಬ್ಬಾರ್, ಸಂಯೋಜಕ ಶಶಿಧರ ಕಮಲಾಪೂರ, ಜಿಲ್ಲಾ ಹಿರಿಯ ಮೇಲ್ವಿಚಾರಕ ಸಂತೋಷ ಕಾಳಗಿ ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago