ಕಲಬುರ್ಗಿ: ಗೆದ್ದರಷ್ಟೇ ಸಾಲದು ಅದರ ಜೋತೆಗೆ ಜವಾಬ್ದಾರಿ ಕೂಡ ನಿರ್ವಹಿಸುವುದು ಮುಖ್ಯ.ಅಭಿವೃದ್ಧಿ ಕೆಲಸದತ್ತ ಚಿತ್ತ ಹರಿಸಬೇಕು ಎಂದು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ತಿಳಿಸಿದರು.
ಗುರು ವ್ಯಕ್ತಿಯಲ್ಲ ಅದೊಂದು ತತ್ತ್ವ: ಜಯಶ್ರೀ ದಂಡೆ
ನಗರದ ಹಿಂದಿ ಪ್ರಚಾರ ಸಭಾಭವನದಲ್ಲಿ ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸುವುದು ಅಗತ್ಯ.ಇದ್ದ ಇಲಾಖೆಗಳು ಸ್ಥಳಾಂತರಗೊಳಿಸುವುದರಿಂದ ಈ ಭಾಗಕ್ಕೆ ಹಿನ್ನಡೆ ಉಂಟಾಗಿದೆ.ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಸರಕಾರದ ನಡೆ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು.ಯಾವುದೇ ಕಾರಣಕ್ಕೆನಮ್ಮ ಭಾಗಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದರು.
ಕರಲಗಿಕರ್‌ಗೆ “ವಿಕಾಸ ರತ್ನ” ಪ್ರಶಸ್ತಿ ಪ್ರದಾನ
ಹೋರಾಟಗಾರ ಲಿಂಗರಾಜ ಸಿರಗಾಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಎಚ್ಕೆಸಿಸಿಐ ಆಡಳಿತ ಮಂಡಳಿಯ ನೂತನ ಸದಸ್ಯರಾಗಿ ಆಯ್ಕೆಯಾದ ಮನೀಷ್ ಜಾಜು ಮತ್ತು ನಿಜಾಮುದ್ದೀನ್ ಚಿಸ್ತಿ ಅವರನ್ನು ಹಾಗೂ ಡಾ.ಬಿ.ಆರ್.ಅಂಬೇಡ್ಕರ ಫೆಲೋಶಿಪ್ ಪ್ರಶಸ್ತಿ ಪುರಸ್ಕೃತ ಹೋರಾಟಗಾರ ಎ.ಎಸ್.ಭದ್ರಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವರೇಶ ಪುರಾಣಿಕ, ಸಾಜೀದ ಅಲಿ ರಂಜೋಳ್ಳ್ವಿ , ಶಿವಲಿಂಗ ಬಂಡಕ, ವೇದಿಕೆ ಮೇಲಿದ್ದರು. ಮಹ್ಮದ್ ಮಿರಾಜುದ್ದಿನ್, ಅಣ್ಣಾರಾವ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…