ಕಲಬುರಗಿ: ಟೆಂಡರ್ ಪ್ರಕ್ರಿಯೆ ಮಾಡದೇ ಕಾಮಗಾರಿಯ ಕೋಟ್ಯಾಂತರ ರೂಪಾಯಿ ಕೊಳ್ಳೆ ಹೊಡೆಯಲು ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಕೂಡಲೇ ಕಾಮಗಾರಿಗಳಿಗೆ ಟೆಂಡರ್ ಕರೆದು ಪ್ರಕ್ರಿಯೆ ನಡೆಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಗಂವಾರ ಅವರು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗೆ ಒತ್ತಾಯಿಸಿದ್ದಾರೆ.
ನೀರಾವರಿ ಅಧಿಕಾರಿಗಳಿಗೆ ಹಾಗೂ ನೀರಾವರಿ ಸಚಿವ ಮಾಧುಸ್ವಾಮಿಯವರಿಗೆ ಬರೆದಿರುವ ಪತ್ರದಲ್ಲಿ ಈಗಾಗಲೇ ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಕಡಕೋಳ, ಜಂಬೆರಾಳ, ಹೆಗ್ಗಿನಾಳ, ಸೈದಾಪುರ, ಜೇವರ್ಗಿ, ನೆಲೋಗಿ, ಹಾಲಗಡ್ಲಾ ಗ್ರಾಮಗಳಲ್ಲಿನ ಕೆರೆ ಸೇರಿದಂತೆ ನಾನಾ ಕಾಮಗಾರಿಗೆ ಅಂದಾಜು ಒಂದು ಕೋಟಿ ಒಂಬತ್ತು ಲಕ್ಷದ ವರೆಗೆ ಎಂಐ ಪ್ಲಡ್ ಕಾಮಗಾರಿಗಳಿಗೆ ಹಣ ಮಂಜೂರು ಆಗಿದೆ. ಈ ಹಣವನ್ನು ಹೇಗೆ ಕಬಳಿಸಬೇಕೇಂದು ಗುತ್ತಿಗೆದಾರರು ಮತ್ತು ಅಧಿಕಾರಿಗಳು ಲೆಕ್ಕ ಹಾಕುತ್ತಿದ್ದಾರೆ. ಹೀಗಾಗಿ ಕೂಡಲೇ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಬೇಕು ಮುಖಂಡರಾದ ನಿಂಗಣ್ಣ ಆರ್. ದೇವಣ್ಣಗಾಂವ, ರಾಜು ಗಣಜಲಖೇಡ, ಮಲ್ಲು ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…