ರಾಯಚೂರು: ಭಾರತ ವಿದ್ಯಾರ್ಥಿ ಫೆಡರೇಷನ್ ( SFI ) ರಾಯಚೂರು ಜಿಲ್ಲಾ ಸಮಿತಿ ವತಿಯಿಂದ ಇಂದು ರಾಯಚೂರು ನಗರದ ಸಿಯಾತಲಾಬ್ ಬದಲಾವಣೆ ಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಭಗತ್ ಸಿಂಗ್, ರಾಜಗುರು, ಸುಖದೇವ ರವರ 91ನೆಯ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಕಲಬುರಗಿಯಲ್ಲಿ ಮಾ.26 ರಂದು ಕ್ಯಾಂಪಸ್ ಸಂದರ್ಶನ
ಪ್ರಾಸ್ತಾವಿಕ ವಾಗಿ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್ ಮಾತನಾಡಿದರು, ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ಎಫ್ಐ ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಭಗತ್ ಸಿಂಗ್, ರಾಜಗುರು, ಸುಖದೇವರವರ ಹೋರಾಟ, ಹಿನ್ನೆಲೆ ಇತಿಹಾಸ ಮತ್ತು ವಿಚಾರಧಾರೆಗಳನ್ನು ಕುರಿತು ಸುದೀರ್ಘವಾಗಿ ಮಾತನಾಡಿದರು.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜ್ಯ ಮಹಿಳಾ ನಿಲಯದ ನಿವಾಸಿ
ವೇದಿಕೆಯ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರು ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ ದೀನಸಮುದ್ರ, ಮೌನೇಶ ಬುಳ್ಳಾಪುರ, ಶಿಕ್ಷಕರಾದ ಶೋಭ ಸೇರಿ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.