ಕಲಬುರಗಿ: ಕಮಲಾಪೂರು ತಾಲೂಕಿನ ನಾಗೂರು ಗ್ರಾಮಪಂಚಾಯತ್‌ನಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ಜಲ ಜೀವನ ಮಿಷನ್ ಅಡಿಯಲ್ಲಿ ಸಮುದಾಯ ವಂತಿಕೆ ಸಂಗ್ರಹಣಾ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯಾಧ ಮಾನಪ್ಪ ಕಟ್ಟಿಮನಿ ರವರು ಮುಂದಿನ ದಿನದಲ್ಲಿ ನಾಗೂರು ಗ್ರಾಮದಲ್ಲಿ ಜಲ ಜೀವನ ಮಿಷನ್ ಅಡಿಯಲ್ಲಿ ಮನೆ ಮನೆಗೆ ನಳ ಸಂಪರ್ಕ ನೀಡಲಾಗುತ್ತಿದೆ ಇದರ ಸದುಪಯೋಗವನ್ನು ಎಲ್ಲರು ಪಡೆದುಕೊಳ್ಳಬೆಕೆಂದರು.
ಕಲಬುರಗಿಯಲ್ಲಿ ಮಾ.26 ರಂದು ಕ್ಯಾಂಪಸ್ ಸಂದರ್ಶನ
ಬೇಸಿಗೆ ಸಂದರ್ಭದಲ್ಲಿ ನೀರನ್ನು ಮಿತವಾಗಿ ಬಳಸುವಂತೆ ತಿಳಿಸಿದರು. ಜಿಲ್ಲಾ ಯೋಜನಾ ವವ್ಯಸ್ಥಾಪಕರಾದ ಡಾ.ರಾಜು ಕಂಬಾಳಿಮಠ ಮಾತನಾಡಿ ನೀರು ಅತ್ಯಮೂಲ್ಯವಾದ್ದದು ಜಾಗತಿಕ ತಾಪ ದಿನೆ ದಿನೆ ಏರುತ್ತಿರುವುದರಿಂದ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸುವಂತೆ ಹಾಗೂ ಇಂಗು ಗುಂಡಿಗಳನ್ನು ಅಳವಡಿಸಿಕೊಳ್ಳಬೆಕೆಂದರು. ಮತ್ತು ಯೋಜನೆಗೆ ಸಮುದಾಯ ವಂತಿಕೆ ನೀಡುವಂತೆ ತಿಳಿಸದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಜಗದೇವಿ ಪವಾರ ಮಾತನಾಡಿ ಗ್ರಾಮಸ್ಥರು ಸರಕಾರದ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದರು. ರೂಡಾ ಸಂಸ್ಥೆಯ ತಂಡದ ನಾಯಕರಾದ ಸಂತೋಷ ಮೂಲಗೆ ಯೋಜನೆಯ ತಾಂತ್ರಿಕ ವಿಷಯದ ಕುರಿತು ತಿಳಿಸಿದರು.
ರಟಕಲ್ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ: ಜಯಂತ್ಯೋತ್ಸವ, ರಥೋತ್ಸವ ರದ್ದು
ಬಿಲ್ ಕಲೆಕ್ಟರ್ ಶರಣಪ್ಪ ಸ್ವಾಗತಿಸಿದರು. ಶ್ರವಣಕುಮಾರ ಅಕ್ಕಿಮನಿ ಕಾರ್ಯಕ್ರಮದಲ್ಲಿ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಕರಬಸಪ್ಪ, ಸುನಿಲ್‌ಅಂತಪನಳ್, ಗಣೇಶ ಮುದಗೋಳ್ ,ಶ್ರೀಶೈಲ್ ರಮೇಶ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…