ಶಹಾಬಾದ: ತಾಲೂಕಿನ ಭಂಕೂರ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಲೂಕಿನಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಕಚೇರಿ ಸ್ಥಾಪನೆ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರಿಗೆ ಪರಿಶೀಲಿಸಿ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಈ ಕುರಿತು ವಿಧಾನ ಪರಿಷತ್ ಸದಸ್ಯ ಡಾ.ತಳವಾರ ಸಾಬಣ್ಣ ಅವರು ಕೋರಿರುವ ಪತ್ರಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪತ್ರದಲ್ಲಿ ತಿಳಿಸಿದ್ದಾರೆ.
ನಿರುಪಯುಕ್ತ ಹಿತ್ತಲಶಿರೂರ ಶಾಲೆ ಶೌಚಾಲಯ
ಶಹಾಬಾದ ತಾಲೂಕಿನ ಭಂಕೂರ ಗ್ರಾಮವು ಗ್ರಾಪಂ ಕೇಂದ್ರ ಸ್ಥಾನ ಹೊಂದಿದಲ್ಲದೇ, ೧೫ ಸಾವಿರ ಜನಸಂಖ್ಯೆ ಹೊಂದಿದೆ. ತಾಲೂಕಿನಲ್ಲೇ ದೊಡ್ಡ ಗ್ರಾಮವಾಗಿದೆ. ಸುಮಾರು ೫೦ ವರ್ಷಗಳ ಹಿಂದೆ ಆರೋಗ್ಯ ಉಪಕೇಂದ್ರ ಪ್ರಾರಂಭಿಸಲಾಗಿದ್ದು, ಇದರ ವ್ಯಾಪ್ತಿಯಲ್ಲಿ ಜನರ ಆರೋಗ್ಯಕ್ಕೆ ಸಂಬಂದಿಸಿದಂತೆ ಇದರಿಂದ ಭಂಕೂರ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮದ ಜನರಿಗೂ ಅನುಕೂಲಕರವಾಗಿಲ್ಲ.
ಕಲಬುರಗಿಯಲ್ಲಿ ಮಾ.26 ರಂದು ಕ್ಯಾಂಪಸ್ ಸಂದರ್ಶನ
ಭಂಕೂರ ಗ್ರಾಪಂಯ ಮುತ್ತಗಾ ಮೂರು ತಾಂಡಾಗಳ ಜನರಿಗೆ ವಿಶೇಷವಾಗಿ ವಯಸ್ಸಾದವರಿಗೆ,ಮಕ್ಕಳಿಗೆ, ಮಹಿಳೆಯರಿಗೆ ಉತ್ತಮವಾದ ಪ್ರಾಥಮಿಕ ಆರೋಗ್ಯ ಕೇಂದ್ರ ಅವಶ್ಯಕತೆಯಿದೆ.ಅಲ್ಲದೇ ನೂತನ ಶಹಾಬಾದ ತಾಲೂಕಿನಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಕಚೇರಿ ಸ್ಥಾಪನೆಯೂ ಆಗಿಲ್ಲ. ಆದ್ದರಿಂದ ಕೂಡಲೇ ಭಂಕೂರ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಲೂಕಿನಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಕಚೇರಿ ಸ್ಥಾಪನೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಡಾ.ತಳವಾರ ಸಾಬಣ್ಣ ಅವರು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಮನವಿ ಮಾಡಿದ್ದರು.