ಬಿಸಿ ಬಿಸಿ ಸುದ್ದಿ

ಬಲಿಜ ಸಮುದಾಯದ ಗುರುಪೀಠದ ಸ್ಥಾಪನೆಗೆ ಸ್ಥಳ ಮಂಜೂರು ಮಾಡಿ: ಶ್ರೀನಿವಾಸನ್ ಗುರೂಜಿ

ಕಲಬುರಗಿ: ಕರ್ನಾಟಕದ ಪ್ರಮುಖ ಸಮುದಾಯಗಳಲ್ಲಿ ಬಲಿಜ ಸಮುದಾಯವು ಸಹ ಒಂದಾಗಿದ್ದು, ಇಲ್ಲಿಯವರೆಗೆ ಈ ಸಮುದಾಯಕ್ಕೆ ತನ್ನದೇ ಆದ ಒಂದು ಗುರು ಪೀಠವು ಇರದೇ ಇದ್ದದ್ದು, ನೋವಿನ ಸಂಗತಿ. ಹೀಗಾಗಿ ಅಖಿಲ ಭಾರತ ಬಲಿಜ ಸಮುದಾಯದ ಗುರುಪೀಠದ ಸ್ಥಾಪನೆಗೆ ಸ್ಥಳ ಮಂಜೂರು ಮಾಡಬೇಕೆಂದು ಖ್ಯಾತ ಸಂಖ್ಯಾ ಶಾಸ್ತ್ರಜ್ಞರು ಹಾಗೂ ನಾಡಿ ಜ್ಯೋತಿಷ್ಯರು ಆದ ಶ್ರೀ ಜಯಶ್ರೀನಿವಾಸನ್ ಗುರೂಜೀ ಹೇಳಿದ್ದಾರೆ.

ಅವರು ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಲಿಜ ಸಮುದಾಯವು ಸಮಾಜದ ಏಳಿಗೆಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಮಧ್ಯ ಕರ್ನಾಟಕದ ಪ್ರಮುಖ ಕೇಂದ್ರವಾದ ದಾವಣಗೆರೆ ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ಬಲಿಜ ಸಮುದಾಯದ ಜನತೆ ವಾಸವಾಗಿದ್ದು, ಅವರ ಅಭಿವೃದ್ಧಿಯ ಧ್ಯೇಯೋದ್ದೇಶದೊಂದಿಗೆ ಅಖಿಲ ಭಾರತ ಬಲಿಜ ಮಹಾ ಸಂಸ್ಥಾನದ ಮಠ ಟ್ರಸ್ಟ್ ತನ್ನ ಪೀಠವನ್ನು ದಾವಣಗೆರೆ ಜಿಲ್ಲೆಯಲ್ಲಿ ಸ್ಥಾಫಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ದಿ.27 ರಂದು ಡಾ.ಪುಟ್ಟಮಣಿ ದೇವಿದಾಸ ರವರ ಕೃತಿ ಲೋಕಾರ್ಪಣೆ

ಹೀಗಾಗಿ ಗುರುಪೀಠಕ್ಕೆ ಸುಮಾರು 3 ಏಕರೆ ಜಮೀನಿನ ಅವಶ್ಯಕತೆ ಇದ್ದು, ತಾವುಗಳು ದಾವಣಗೆರೆ ಜಿಲ್ಲೆಯಲ್ಲಿ ಮಠ ಸ್ಥಾಪನಗೆ ಸೂಕ್ತ ಸ್ಥಳವನ್ನು ಸರ್ಕಾರ ಒದಗಿಸಿಕೊಡಬೇಕೆಂದು ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಬಲಿಜ ಸಮಾಜ ಶೇ 40% ಇದೆ, ಆದರೆ ಸರ್ಕಾರ 25 ಪ್ರತಿಶತ ಇದೆ ಎಂದು, 2ಎ ಗೆ ಇದ್ದಿದ್ದನ್ನು ತೆಗೆದು ಹಾಕಿದ್ದಾರೆ. 2ಎ ಮೀಸಲಾತಿಗಾಗಿ ಅನೇಕ ಹೋರಾಟಗಳು ನಡೆದಿವೆ. ಹೀಗಾಗಿ ಮೊದಲಿನಂತೆ ಬಲಿಜ ಸಮಾಜವನ್ನು 2ಎ ಗೆ ಸೇರಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ , ಕಲ್ಯಾಣ ಕರ್ನಾಟಕ ಅಧ್ಯಕ್ಷರಾದ ಶರಣು ಹೊಸಮನಿ ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

15 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago