ಬಿಸಿ ಬಿಸಿ ಸುದ್ದಿ

ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಅಧ್ಯಕ್ಷರಾಗಿ ಎಂ.ಎಸ್ ಸಾಜಿದ್ ಆಯ್ಕೆ

ಮಲಪ್ಪುರಂ : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರತಿನಿಧಿ ಸಭೆಯು ಕೇರಳದ ಮಲಪ್ಪುರಂ ನಲ್ಲಿ ನಡೆಯಿತು. ಎರಡು ದಿನಗಳ ಪ್ರತಿನಿಧಿ ಸಭೆಯ ಅಧ್ಯಕ್ಷತೆಯನ್ನು ರಾಷ್ಟ್ರೀಯ ಅಧ್ಯಕ್ಷರಾದ ಎಂ.ಎಸ್ ಸಾಜಿದ್ ವಹಿಸಿ ಮಾತನಾಡಿ “ದೇಶದಲ್ಲಿ ಅಸಮಾನತೆ ಮತ್ತು ಅಭದ್ರತೆ ಹೆಚ್ಚುತ್ತಿರುವಾಗ ವಿದ್ಯಾರ್ಥಿ ಸಮುದಾಯವು ಅತೀ ಕ್ರಿಯಾಶೀಲ ಪಾತ್ರವನ್ನು ವಹಿಸಬೇಕಾಗಿದೆ ಎಂದು ಅವರು ಹೇಳಿದರು”.

ಸಭೆಯಲ್ಲಿ ದೇಶದ ಶೈಕ್ಷಣಿಕ, ರಾಜಕೀಯ, ಸಾಮಾಜಿಕ ವಿಷಯಗಳ ಕುರಿತು ಚರ್ಚೆ ನಡೆಯಿತು. ರಾಷ್ಟ್ರೀಯ ಕಾರ್ಯದರ್ಶಿ ಇರ್ಶಾದ್ ಕಾವು ವಾರ್ಷಿಕ ವರದಿ ವಾಚಿಸಿದರು. ಸಭೆಯಲ್ಲಿ ವಿವಿಧ ರಾಜ್ಯದ ಪ್ರತಿನಿಧಿಗಳು ಭಾಗವಹಿಸಿದರು.

ನೂತನ ಕೃಷಿ ಕಾಯ್ದೆಗಳ ವಿರೋಧಿಸಿ ಕಲಬುರಗಿ ಬಂದ್

ನೂತನ ನಾಯಕರ ಆಯ್ಕೆ: 2021-22 ರ ಸಾಲಿನ ನೂತನ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಎಂ.ಎಸ್ ಸಾಜಿದ್ ಕೇರಳ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಾನ್ ಸಾದಿಕ್ ಮಂಗಳೂರು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಾದಿ ಕೇರಳ, ಹುಮಾ ಕೌಸರ್ ಬಿಹಾರ್, ಕಾರ್ಯದರ್ಶಿಯಾಗಿ ಸ್ವದಕತ್ ಶಾ ಬೆಂಗಳೂರು, ಅಬ್ದುಲ್ ನಾಝರ್ ಕೇರಳ, ಕೋಶಾಧಿಕಾರಿಯಾಗಿ ಜಾಹಿದುಲ್ ಇಸ್ಲಾಂ ಅಸ್ಸಾಂ, ಸಮಿತಿ ಸದಸ್ಯರಾಗಿ ಆತಿಕುರ್ರಹ್ಮಾನ್ , ರವೂಫ್ ಶರೀಫ್, ಸೈಫುರ್ರಹ್ಮಾನ್, ಇಮ್ರಾನ್ ಪಿ.ಜೆ, ಫಾತಿಮಾ ಶೆರಿನ್ , ಪಿ.ವಿ ಶುಹೈಬ್, ನಿಶಾ ತಮಿಳುನಾಡು, ಫರ್ಹಾನ್ ಕೋಟ ಆಯ್ಕೆಯಾದರು.

emedialine

Recent Posts

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

8 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

8 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

9 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

20 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

20 hours ago