ಬಿಸಿ ಬಿಸಿ ಸುದ್ದಿ

ಮಳೆಯಿಂದ ಗ್ರಾಮವಾಸ್ತವ್ಯ ಮುಂದೂಡಿದಕ್ಕೆ‌ ಸಚಿವ ಪ್ರಿಯಾಂಕ್ ಖರ್ಗೆ ಕ್ಷಮೆ

ಕಲಬುರಗಿ: ಹೇರೂರು ( ಬಿ) ಗ್ರಾಮದಲ್ಲಿ ನಡೆಯಬೇಕಿದ್ದ ಸಿಎಂ ಗ್ರಾಮ ವಾಸ್ತವ್ಯ ಮಳೆಯಿಂದ ಮೂಂದೂಡಿದ್ದು ಅನಾನುಕೂಲವಾಗಿರುವುದಕ್ಕೆ ಸಾರ್ವಜನಿಕರ ಕ್ಷಮೆಯಾಚಿಸುತ್ತೇನೆ ಮುಂದಿನ ಗ್ರಾಮವಾಸ್ತವ್ಯ ಎಲ್ಲಿ ಎನ್ನುವುದರ ಕುರಿತು ಜುಲೈ ತಿಂಗಳ ಮೊದಲ ವಾರದಲ್ಲಿ ನಿರ್ಧರಿಸಲಾಗುವುದು ಎಂದು ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡುತ್ತಿದ್ದರು.

ಗ್ರಾಮ ವಾಸ್ತವ್ಯದಲ್ಲಿ ಸಲ್ಲಿಸಬೇಕಾಗಿದ್ದ ಜಿಲ್ಲೆಯ 28 ಪ್ರಮುಖ ಬೇಡಿಕೆಗಳನ್ನು ಸರಕಾರದ ‌ಮುಂದಿಡಲಾಗಿತ್ತು. ಇಂದು ನಡೆಯಬೇಕಾಗಿದ್ದ ಸಿಎಂ ಅವರ ಜನತಾ ದರ್ಶನ ಹಾಗೂ ಗ್ರಾಮ ವಾಸ್ತವ್ಯದಲ್ಲಿ ಬಹುತೇಕ ಬೇಡಿಕೆಗಳು ಈಡೇರಿಸುವ ನಿರೀಕ್ಷೆ ಮಾಡಲಾಗಿತ್ತು. ಅದರೆ, ಭಾರೀ ಮಳೆ ಬಿದ್ದ ಪರಿಣಾಮ ಹೇರೂರು ( ಬಿ) ಗ್ರಾಮದಲ್ಲಿ ನಡೆಯಬೇಕಿದ್ದ ಗ್ರಾಮವಾಸ್ತವ್ಯ ಮುಂದೂಡಿದೆ. ಆದರೂ ಮಳೆ ಬಂದಿರುವುದು ಹರ್ಷ ತರುವ ವಿಚಾರವಾಗಿದ್ದು ರೈತರು ಮುಂಗಾರು ಸಾಲಿನ ಕೃಷಿ‌ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ಹೇಳಿದರು.

ಸಮಾಜಕಲ್ಯಾಣ ಇಲಾಖೆಯ ವತಿಯಿಂದ ಹೇರೂರು ( ಬಿ ) ಗ್ರಾಮದಲ್ಲಿ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲು ಈಗಾಗಲೇ ರೂ 1.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಜಿಲ್ಲೆಯ 28 ಪ್ರಮುಖ ಬೇಡಿಕೆಗಳ ಪಟ್ಟಿ ಸಿಎಂ ಗೆ ಸಲ್ಲಿಕೆ, ಬೇಡಿಕೆ ಈಡೇರಿಸಲು ಸಿಎಂ ಭರವಸೆ- ಪ್ರಿಯಾಂಕ್ ಖರ್ಗೆ.

ಗ್ರಾಮ ಪಂಚಾಯತ ಮಟ್ಟದಲ್ಲಿ ಮಾಡಬೇಕಾಗಿರುವ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸಿಎಂ ಬಂದು ಮಾಡಬೇಕಾಗಿದೆ ಇದು ಆಡಳಿದ ವೈಫಲ್ಯವಲ್ಲವೇ? ಎನ್ನುವ ಪ್ರಶ್ನೆ ಉತ್ತರಿಸಿದ ಸಚಿವರು, ಕೆಲವೊಂದು ಸಂದರ್ಭಗಳಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಜೊತೆಗೆ ಸಮಗ್ರ ಅಭಿವೃದ್ದಿಗೆ ಸಾರ್ವಜನಿಕರ ಸಹಕಾರ ಹಾಗೂ ಬೆಂಬಲವೂ ಕೂಡಾ ಬೇಕು ಎಂದು ಹೇಳಿದರು.

ಮೈತ್ರಿ‌ಸರಕಾರದಲ್ಲಿ ಒಮ್ಮತವಿಲ್ಲ ಅದು ನಿನ್ನೆ ನಡೆದ ಚಂಡ್ರಕಿ ಗ್ರಾಮದ ಸಿಎಂ ಅವರ ಸಭೆಯಲ್ಲಿ ಕಂಡುಬಂದಿತು‌ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು ಪ್ರೋಟೋಕಾಲ್ ಪ್ರಕಾರ ನಡೆಸಬೇಕಿದ್ದ ಸಭೆಯಲ್ಲಿ ಶಾಸಕರ ಪುತ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಇಚ್ಚಿಸುವುದಿಲ್ಲ ಎಂದರು.

371 ( ಜೆ ) ಅನುಷ್ಠಾನ ಸಮಿತಿ‌ ಉಪಸಮಿತಿ ಅಧ್ಯಕ್ಷನಾಗಿ ನಾನು ಜಿಲ್ಲೆಯಲ್ಲಿ ಈಗಾಗಲೇ ಖಾಲಿ ಇರುವ ಪ್ರಮುಖ 70 ಕ್ಕೂ ಅಧಿಕ ಹುದ್ದೆಗಳನ್ನು ಕೂಡಲೇ ತುಂಬಬೇಕು ಜೊತೆಗೆ ಹೈಕ ಭಾಗಕ್ಕೆ ವರ್ಗಾವಣೆಯಾದ ಅಧಿಕಾರಿಗಳು ಕಡ್ಡಾಯವಾಗಿ ಇಂತಿಷ್ಟು ವರ್ಷ ಕಾಲ ಕಾರ್ಯನಿರ್ವಹಿಸುವ ಕಾನೂನು ಜಾರಿಗೆ ತರುವಂತೆ ಸಿಎಂ ಅವರಿಗೆ ಪತ್ರ ಬರೆದಿದ್ದೇನೆ.

ಯಾವುದೇ ಕಾರಣಕ್ಕೆ 371 ( J) ಅಡಿಯಲ್ಲಿ ಒದಗಿಸಲಾಗಿರುವ ಸೌಲಭ್ಯದ ದುರುಪಯೋಗವಾಗಲು ಬಿಡುವುದಿಲ್ಲ ಎಂದ ಸಚಿವರು, ಕೆಲ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು. ಗೋಷ್ಠಿಯ ಮಧ್ಯೆ ಬಂದ ಸಿಎಂ ಅವರ ಕರೆಗೆ ಉತ್ತರಿಸಿದ ಬಂದ ಸಚಿವರು ಹೇರೂರು ( ಬಿ) ಗ್ರಾಮ ಸೇರಿದಂತೆ ಜಿಲ್ಲೆಯ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು ಎಂದು ಹೇಳಿದರು.

ಕಳೆದ ನಾಲ್ಕು ವರ್ಷದಲ್ಲಿ‌ ಸಮಾಜಕಲ್ಯಾಣ ಇಲಾಖೆಯಲ್ಲಿ ನಿಗದಿಪಡಿಸಿದ ಅನುದಾನದಲ್ಲಿ ಶೇ.‌90 ಅನುದಾನ ಬಳಕೆಯಾಗಿದೆ. ಸಿಎಂ ಅವರ ಗ್ರಾಮವಾಸ್ತವ್ಯ ಮಾಡಬೇಕಿದ್ದ ಹೇರೂರು ( ಬಿ ) ಗ್ರಾಮದ ಅಭಿವೃದ್ದಿಗಾಗಿ ಇಲಾಖೆಯ ವತಿಯಿಂದ ಈಗಾಗಲೇ ರೂ 1.50 ಕೋಟಿ ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದಿಂದ ನೀರು ಬಿಡುವ ಒಪ್ಪಂದವಾಗಿದ್ದರೂ ಕೂಡಾ ಅಲ್ಲಿನ ಸರಕಾರ‌ ನೀರು ಬಿಡಲು ನಕಾರ ತೋರಿಸಿದ್ದು, ಈಗಾಗಲೇ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಅವರು ಪತ್ರ ಬರೆದಿದ್ದು ಆ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಎಂ.ವೈ. ಪಾಟೀಲ್, ಅಜಯಸಿಂಗ್,ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸೇರಿದಂತೆ ಮತ್ತಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago