ಕಲಬುರಗಿ: ಪ್ರಶಾಂತ್ ಕಲ್ಲೂರ್ ನೇತೃತ್ವದ ವೀರಶೈವ ಲಿಂಗಾಯತ ಯುವ ವೇದಿಕೆಯ ಕಲಬುರ್ಗಿ ಜಿಲ್ಲಾ ಸಮಿತಿ ವತಿಯಿಂದ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತು.
ಬೆಂಗಳೂರಿನ ವಿಜಯನಗರದ ಸುಜ್ಞಾನ ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 5 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಮತ್ತು ಶ್ರೀ ರಂಭಾಪುರೀ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಬಾಳೆ ಹೊನ್ನುರು ಸ್ವಾಮೀಜಿಗಳ 30ನೇ ವಧರ್ಂತಿ ಮಹೋತ್ಸವ ಕಾರ್ಯಕ್ರಮವನ್ನು ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದೆ. ರಾಜ್ಯ ಸಮಿತಿಯ ಶ್ರೀಧರ್ ನಾಗನಹಳ್ಳಿ, ಕಲಬುರ್ಗಿ ಜಿಲ್ಲಾ ಅಧ್ಯಕ್ಷರಾದ ದಯಾನಂದ ಎಂ ಪಾಟೀಲ್, ಜಿಲ್ಲಾ ಸಂಚಾಲಕರಾದ ಸತೀಶ್ ಮಾಹೂರ್, ಶಿವಕುಮಾರ್ ಸಾವಳಗಿ,ಗುರುರಾಜ್ ಅಂಬಾಡಿ, ಗುರುರಾಜ್ ಸುಂಟನೂರ್ ಇದ್ದರು.