ಕೊರೊನಾ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಹಸೀಲ್ದಾರ ಸುರೇಶ ವರ್ಮಾ ಚಾಲನೆ

0
102

ಶಹಾಬಾದ: ಕೋವಿಡ್ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದಲ್ಲದೇ ಸರ್ಕಾರ ಹೊರಡಿಸುವ ಮಾರ್ಗಸೂಚಿ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.

ಅವರು ಶುಕ್ರವಾರ ಶಹಾಬಾದ ತಾಲೂಕಾಢಳಿತ ಹಾಗೂ ನಗರಸಭೆಯ ಕಾರ್ಯಾಲಯ ವತಿಯಿಂದ ನಗರದ ಮುಖ್ಯ ಬೀದಿಗಳಲ್ಲಿ ಆಯೋಜಿಸಲಾದ ಕೊರೊನಾ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

Contact Your\'s Advertisement; 9902492681

ಜಿಲ್ಲೆಯಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ ಹೆಚ್ಚತ್ತಲೇ ಇದೆ.ಹೀಗಾಗಿ ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕೆಂದು ಹೇಳಿದರಲ್ಲದೇ, ತಾಲೂಕಿನ ವ್ಯಾಪ್ತಿಯ ಹೋಟೆಲ್, ರೆಸ್ಟೋರೆಂಟ್, ಧಾಬಾ ಹಾಗೂ ಸಂತೆಗಳ ಸ್ಥಳಗಳಲ್ಲಿ ಸಾರ್ವಜನಿಕರು ಸಾರ್ವಜನಿಕ ಅಂತರ ಕಾಯ್ದುಕೊಳ್ಳದಿದ್ದಲ್ಲಿ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸದೇ ಇದ್ದಲ್ಲಿ ಅವರಿಗೆ ವಾಣಿಜ್ಯ ಅಂಗಡಿಗಳ ಮಾಲೀಕರು ಪ್ರವೇಶ ನೀಡಬಾರದು. ಒಂದು ವೇಳೆ ಮಾಸ್ಕ್ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಪ್ರವೇಶ ನೀಡಿದಲ್ಲಿ ಅಂತಹ ವಾಣಿಜ್ಯ ಅಂಗಡಿಗಳ ಮಾಲೀಕರಿಗೆ ದಂಡ ಹಾಕಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಜಾತ್ರೆ, ಸಭೆ, ಸಮಾರಂಭಗಳನ್ನು ಮಾಡಬೇಕಾದರೆ ತಾಲೂಕಾಡಳಿತದಿಂದ ಅನುಮತಿ ಪಡೆದುಕೊಳ್ಳಬೇಕು.

ಜನದಟ್ಟಣೆಯಿಂದ ಒಂದು ವರ್ಷದ ಅವಧಿಯಲ್ಲಿ ಜಗತ್ತು ನಲುಗಿ ಹೋಗಿದೆ. ಕೋವಿಡ್-19 ಸುರಕ್ಷತಾ ಕ್ರಮಗಳನ್ನು ತಪ್ಪದೇ ಎಲ್ಲರೂ ಪಾಲಿಸಿ, ವೈರಸ್ ಹರಡುವುದನ್ನು ನಿಲ್ಲಿಸಬೇಕು. 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳತಕ್ಕದ್ದು.ಇದಕ್ಕೆ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.

ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿ, ನಗರದ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.ಜನದಟ್ಟಣೆ ಸ್ಥಳಗಳಿಂದ ದೂರ ಇರಬೇಕು.ವ್ಯಕ್ತಿಗತ ಅಂತರ ಕಾಪಾಡಬೇಕು.ಸ್ಯಾನಿಟೈಜರ್ ಬಳಸಬೇಕು.ಕೈಗಳನ್ನು ಆಗಾಗ ಸಾಬೂನಿನಿಂದ ತೊಳೆದುಕೊಳ್ಳಬೇಕು.ನೆಗಡಿ,ಕೆಮ್ಮು,ಜ್ವರ ಕಂಡು ಬಂದರೆ ಕೂಡಲೇ ವೈದ್ಯರನ್ನು ಕಾಣಬೇಕು.ಅವರು ಸಲಹೆ ನೀಡದಲ್ಲಿ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು.

ಚಂದ್ರಶೇಖರ ಡೊಣೂರ ಜನುಮ ದಿನದ ಅಂಗವಾಗಿ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ

ಡಿವಾಯ್‍ಎಸ್‍ಪಿ ಉಮೇಶ ಚಿಕ್ಕಮಠ, ಪರಿಸರ ಅಭಿಯಂತರ ಮುಜಾಮಿಲ್ ಆಲಮ್, ಆರೋಗ್ಯ ನಿರೀಕ್ಷಕರಾದ ಶಿವರಾಜಕುಮಾರ, ರಾಜೇಶ, ಶರಣು, ಸಮುದಾಯ ಸಂಘಟನಾ ಅಧಿಕಾರಿ ರಘುನಾಥ ನರಸಾಳೆ, ಮುತ್ತಣ್ಣ ಭಂಡಾರಿ, ಹುಣೇಶ, ಅನೀಲ, ಹಣಮಂತ ಪವಾರ ಸೇರಿದಂತೆ ಅನೇಕರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here