ಕಲಬುರಗಿ: ಶವ ಸಂಸ್ಕಾರಕ್ಕೆಂದು ತೆರಳುತ್ತಿದ್ದ, ಟ್ರ್ಯಾಕ್ಟರ್ ನ ಪಲ್ಟಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, 15 ಜನರು ಗಾಯಗೊಂಡ ಘಟನೆ ಚಿಂಚೋಳಿ ತಾಲೂಕಿನ ಕಲ್ಲೂರು ರೋಡ್ ಗ್ರಾಮದ ಸಮೀಪ ಮಧ್ಯಾಹ್ನ ನಡೆದಿದ್ದು, ಗಾಯಳುಗಳಿಗೆ ತಾಲೂಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸೇಡಂ ತಾಲೂಕಿನ ಮಳಖೇಡ ಗ್ರಾಮದ ಯಲ್ಲಮ್ಮ ಭೀಮರಾವ್ (40) ಸ್ಥಳದಲ್ಲೇ ಮೃತಪಟ್ಟ ಮಹಿಳೆ. ಇದೇ ಗ್ರಾಮದ 15 ಜನರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಕಲ್ಲೂರು ರೋಡ್ ಗ್ರಾಮದಲ್ಲಿ ಪರಿಚಯಸ್ಥರೊಬ್ಬರು ಮೃತಪಟ್ಟಿದ್ದರು. ಶವ ಸಂಸ್ಕಾರಕ್ಕೆಂದು ಟ್ರ್ಯಾಕ್ಟರ್ ನಲ್ಲಿ 23 ಜನರು ತೆರಳುವ ವೇಳೆ ಕಲ್ಲೂರು ಗ್ರಾಮದ ಸಮೀಪ ಟ್ರ್ಯಾಕ್ಟರ್ ನ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ರಸ್ತೆ ಬದಿಗೆ ಪಲ್ಟಿಯಾಗಿದೆ.
ತೀವ್ರ ಬಿಸಿಲಿನ ಕಾರಣದಿಂದ ಟ್ರ್ಯಾಕ್ಟರ್‌ನ ಟೈರ್ ಸ್ಫೋಟಗೋಂಡು ಅಪಘಾತ ಸಂಭವಿಸಿದೆ ಎಂದು ಅನುಮಾನ ವ್ಯಕ್ತವಾಗುತ್ತಿದೆ. ಈ ಕುರಿತು ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…