ಯಾದಗಿರಿ: ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ.
ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಸೆ ಉಂಟು ಮಾಡಿದೆ. ಆದರೆ, ಇದೇ ಸಂದರ್ಭದಲ್ಲಿ ಉತ್ತಮ ಮಳೆಯಾಗಿರುವದರಿಂದ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ ಎಂಬ ಸಮಾಧಾನವಿದೆ ಎಂದು ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಗುರುಮಠಕಲ್ ತಾಲೂಕಿನ ಚಂಡ್ರಿಕಿಯಲ್ಲಿಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬರುವ ಜುಲೈ ತಿಂಗಳಲ್ಲಿ ವಿಧಾನಮಂಡಲದ ಅಧಿವೇಶನದ ದಿನಾಂಕಗಳನ್ನು ನೋಡಿಕೊಂಡು ಜುಲೈ ಮೊದಲನೇ ಅಥವಾ 2ನೇ ವಾರದಲ್ಲಿ ಗ್ರಾಮವಾಸ್ತವ್ಯ ಹಾಗೂ ಜನತಾದರ್ಶನ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಯಾದಗಿರಿ ಜಿಲ್ಲೆಯ ಚಂಡ್ರಕಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ ಎಂದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…