ಏ. 1ಕ್ಕೆ 114ನೇ ಗುರುವಂದನಾ ಕಾರ್ಯಕ್ರಮ

0
26

ಕಲಬುರಗಿ: ಜಿಲ್ಲಾ ವೀರಶೈವ ಸಮಾಜ ಹಾಗೂ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ, ಹಿತೈಷಿಗಳ ಸಂಘದ ವತಿಯಿಂದ ಏಪ್ರೀಲ್ ೧ ರಂದು ಮಧ್ಯಾಹ್ನ ೧೨ ಗಂಟೆಗೆ ನಗರದ ಪತ್ರಿಕಾಭವನದಲ್ಲಿ ತುಮಕೂರಿನ ಸಿದ್ದಗಂಗಾ ಮಠದ ಡಾ. ಶಿವಕುಮಾರ ಮಹಾಸ್ವಾಮೀಜಿಗಳ ೧೧೪ನೇ ಜನ್ಮ ದಿನದ ನಿಮಿತ್ಯ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಅರುಣಕುಮಾರ ಪಾಟೀಲ್ ಕೊಡಲಹಂಗರಗಾ ಹೇಳಿದರು.

ಶುಕ್ರವಾರ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗುರುವಂದನಾ ಸಮಾರಂಭದಲ್ಲಿ ಸುಲಫಲ ಮಠದ ಡಾ. ಸಾರಂಗಧರ ದೇಶಿಕೇಂದ್ರದ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಮಲ್ಲಿಕಾರ್ಜುನ ಅಳಗವಾಡಿ ಅವರು ಉದ್ಘಾಟಿಸಲಿದ್ದಾರೆಂದು ತಿಳಿಸಿದರು.

Contact Your\'s Advertisement; 9902492681

ಸಮಾರಂಭದಲ್ಲಿ ಈ ಬಾರಿ ಸಿದ್ದಗಂಗಾಶ್ರೀ ಪ್ರಶಸ್ತಿಯನ್ನು ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಭೀಮಾಶಂಕರ ಬಿಲಗುಂದಿ ಅವರನ್ನು ಹಾಗೂ ಶಿವಕುಮಾರ ಶ್ರೀ ಪ್ರಶಸ್ತಿಯನ್ನು ಕಲ್ಯಾಣಪ್ಪ ಪಾಟೀಲ್ ಅವರನ್ನು ನೀಡಿ ಗೌರವಿಸಲಾಗುವುದೆಂದು ಸುದ್ದಿಗೋಷ್ಠಿಯಲ್ಲಿ ಅರುಣಕುಮಾರ ಪಾಟೀಲ್ ಅವರು
ಹೇಳಿದರು.

ಸಮಾರಂಭವನ್ನು ಕೋವಿಡ್ ನಿಯಮಾವಳಿ ಪಾಲಿಸಿಕೊಂಡು ನಡೆಯಲಿದ್ದು, ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಹೆಚ್‌ಕೆಸಿಸಿಐಯ ಅಧ್ಯಕ್ಷ ಪ್ರಶಾಂತ ಮಾನಕರ್ ಹಾಗೂ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಂಘದ ಅಧ್ಯಕ್ಷರಾದ ನಾಗಪ್ಪ ಹೊನ್ನಳ್ಳಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದೆಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ನಂತರ ನಂದಗೋಕುಲ ಶಿಶು ವಿಹಾರ ಮಕ್ಕಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಸಿದ್ದಗಂಗಾಶ್ರೀಗಳ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದರು.

ಅಲ್ಲದೇ, ಲಿಂ. ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹಾಗೂ ಶಿಫಾರಸ್ಸು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸಂಘದಿಂದ ಒತ್ತಾಯಿಸಲಾಗುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ದೇವೇಂದ್ರಪ್ಪ ಅವಂಟಿ, ಚನ್ನಬಸಯ್ಯ ಗುರುವಿನ, ಶ್ರೀಶೈಲ್ ಘೂಳಿ, ಜಗದೇವಪ್ಪ ಹಲಕಟ್ಟಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here