ಬಿಸಿ ಬಿಸಿ ಸುದ್ದಿ

ಶಾಸಕ ಮತ್ತಿಮೂಡ ಪಕ್ಷದ ಅಭ್ಯರ್ಥಿ ಪರ ಮತಯಾಚನೆ

ಶಹಾಬಾದ:ನಗರಸಭೆಯ ವಾರ್ಡ ನಂ. 18ರ ಅಭ್ಯರ್ಥಿ ಜಗದೇವ ಸುಬೇದಾರ ಅವರಿಗೆ ಮತ ನೀಡುವ ಮೂಲಕ ಮತದಾರರು ಬಿಜೆಪಿಗೆ ಮತ್ತೆ ಅವಕಾಶ ಮಾಡಿಕೊಡಬೇಕೆಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಹೇಳಿದರು.

ಅವರು ಶುಕ್ರವಾರ ನಗರಸಭೆಯ ವಾರ್ಡ ನಂ.18ರ ಉಪಚುನಾವಣೆಯ ನಿಮಿತ್ತ ಬಿಜೆಪಿ ಅಭ್ಯರ್ಥಿ ಜಗದೇವ ಸುಬೇದಾರ ಪರವಾಗಿ ಮತದಾರರ ಮನೆಮನೆಗೆ ತೆರಳಿ ಮತದಾರರಲ್ಲಿ ಮತಯಾಚಿಸಿ ಮಾತನಾಡಿದರು.

ಈ ಹಿಂದೆ ಇದೇ ವಾರ್ಡನಲ್ಲಿ ಬಿಜೆಪಿಯಿಂದ ಭೀಮಣ್ಣ ಖಂಡ್ರೆಯವರನ್ನು ಗೆಲ್ಲಿಸಿ ನಗರಸಭೆಯ ಸದಸ್ಯರನ್ನಾಗಿ ಮಾಡಿದ್ದೀರಿ.ಅವರು ತಮ್ಮ ಅವಧಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡಿರುವುದು ನಾವು ಕಂಡಿದ್ದೆವೆ. ಅದೇ ರೀತಿ ಮತ್ತೆ ಈ ವಾರ್ಡಗೆ ಬಿಜೆಪಿ ಅಭ್ಯರ್ಥಿಯನ್ನೇ ಗೆಲ್ಲಿಸುವಂತೆ ಮನವಿ ಮಾಡಿದರು.ಅಲ್ಲದೇ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ ವಾರ್ಡ ಅಭಿವೃದ್ಧಿಗೆ ಸಹಕರಿಸಬೇಕೆಂದು ತಿಳಿಸಿದರು.

ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಮಾತನಾಡಿ, ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ.ಅಲ್ಲದೇ ಬಿಜೆಪಿಯ ಶಾಸಕರು ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ತಂದು ನಗರವನ್ನು ಅಭಿವೃದ್ಧಿಗೊಳಿಸುವಲ್ಲಿ ಕೆಲಸ ಮಾಡುತ್ತಿದ್ದಾರೆ.ಆದ್ದರಿಂದ ಬಿಜೆಪಿ ಅಭ್ಯರ್ಥಿಯನ್ನು ಮತದಾನ ಮಾಡುವ ಮೂಲಕ ವಾರ್ಡನ ಅಭಿವೃದ್ಧಿಗೊಳಿಸುವತ್ತ ಮುಂದಾಗಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಬಿಜೆಪಿ ಮುಖಂಡ ನರೇಂದ್ರ ವರ್ಮಾ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗಿರಥಿ ಗುನ್ನಾಪೂರ, ಮಹಿಳಾ ಜಿಲ್ಲಾ ಕಾರ್ಯದರ್ಶಿ ಜ್ಯೋತಿ ಶರ್ಮಾ, ಶಶಿಕಲಾ ಸಜ್ಜನ್,ಕನಕಪ್ಪ ದಂಡಗುಲಕರ್, ನಗರಸಭೆಯ ಸದಸ್ಯ ರವಿ ರಾಠೋಡ,ಅರುಣ ಪಟ್ಟಣಕರ್, ನಿಂಗಣ್ಣ ಹುಳಗೋಳಕರ್, ಸದಾನಂದ ಕುಂಬಾರ, ಬಸವರಾಜ ಮದ್ರಕಿ, ಶಂಕರ ಭಗಾಡೆ, ಮ,ಹೇಂದ್ರ ಕೋರಿ,ದತ್ತಾತ್ರೇಯ ಘಂಟಿ, ಬೀಮಯ್ಯ ಗುತ್ತೆದಾರ,ದತ್ತಾ ಫಂಡ್, ವಿರೇಶ ಬಂದಳ್ಳಿ ಇತರರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

7 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

16 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

17 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago