ಬಿಸಿ ಬಿಸಿ ಸುದ್ದಿ

ನಿರಾಸೆರಾಗಬೇಡಿ ಮುಂದಿನ ದಿನಗಳಲ್ಲಿ ಸಿಎಂ ಅವರನ್ನು ಕರೆತರಲಾಗಿವುದು: ಪ್ರಿಯಾಂಕ್ ಖರ್ಗೆ

ಕಲಬುರಗಿ: ಭಾರೀ ಮಳೆ ಬಿದ್ದ ಪರಿಣಾಮ ಸಾರ್ವಜನಿಕರ ಹಿತದೃಷ್ಠಿ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಹೇರೂರು ( ಬಿ) ಗ್ರಾಮದಲ್ಲಿ ನಿಗದಿಯಾಗಿದ್ದ ಸಿಎಂ ಗ್ರಾಮ ವಾಸ್ತವ್ಯ ಮುಂದೂಡಲಾಗಿದೆ. ಆದರೆ ಮುಂಬರುವ ದಿನಗಳಲ್ಲಿ ಸಿಎಂ ಅವರನ್ನು ನಿಮ್ಮ ಗ್ರಾಮಕ್ಕೆ ಕರೆಸಲಾಗುವುದು ಹಾಗಾಗಿ ನೀವು ಯಾರೂ ನಿರಾಸೆಗೊಳಗಾಗಬಾರದು ಎಂದು ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.

ಜಿಲ್ಲೆಯ ಅಫಜಲಪೂರ ಮತ ಕ್ಷೇತ್ರದ ಹೇರೂರು (ಬಿ) ಭೇಟಿ ನೀಡಿ ಮಾತನಾಡಿದ ಅವರು ಸಿಎಂ ಅವರ ಜನತಾ ದರ್ಶನ ಕಾರ್ಯಕ್ರಮ ನಡೆಯಬೇಕಿದ್ದ ಸ್ಥಳ ವೀಕ್ಷಿಸಿದ ನಂತರ ಗ್ರಾಮಸ್ಥರನ್ನು ಕುರಿತು ಇಲ್ಲಿನ ಗ್ರಾಮ ಪಂಚಾಯತ ಆವರಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು ಮಳೆ ಬಿದ್ದು ಕಾರ್ಯಕ್ರಮ ಮುಂದೂಡಿದ್ದು ನಿರಾಸೆ ತಂದಿರಬಹುದು. ಆದರೆ ಮಳೆಯಿಂದ ರೈತರಿಗೆ ತುಂಬಾ ಅನುಕೂಲವಾಗಲಿದೆ. ಮುಂದೊಂದು ದಿನ ಸಿಎಂ ಅವರನ್ನು ಇಲ್ಲಿಗೆ ಕರೆಸಲಾಗುವುದು ಎಂದು ಜನರ ಬೇಡಿಕೆಯ ಮಧ್ಯೆ ಭರವಸೆ ನೀಡಿದರು.

ಗ್ರಾಮದ ಅಭಿವೃದ್ದಿಗಾಗಿ‌ ಸಮಾಜಕಲ್ಯಾಣ ಇಲಾಖೆಯ ವತಿಯಿಂದ ರೂ 1.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಗ್ರಾಮದಲ್ಲಿ ಹಾಗೂ ಅಫಜಲಪುರ ಮತಕ್ಷೇತ್ರದ ಅಭಿವೃದ್ದಿಗಾಗಿ ಪಟ್ಟಿಯನ್ನು ಸಿದ್ದಪಡಿಸಿದ್ದು ಎಲ್ಲ ಬೇಡಿಕೆಗಳ ಈಡೇರಿಕೆಗಾಗಿ ಸನ್ಮಾನ್ಯ ಸಿಎಂ ಅವರಿಗೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಭಿಕರ ಕೈಯಲ್ಲಿ ಅರ್ಜಿಗಳನ್ನು ಗಮನಿಸಿದ ಸಚಿವರು ಇಂದಿನ ಸಿಎಂ ಗ್ರಾಮ ವಾಸ್ತವ್ಯ ಮುಂದೂಡಲಾಗಿದೆ ಆದರೂ ಸಾರ್ಬಜನಿಕರು ತಂದಿರುವ ಸಮಸ್ಯೆಗಳ ಕುರಿತ ಅರ್ಜಿಗಳನ್ನು ಸ್ವೀಕರಿಸುವಂತೆ ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ತಹಶೀಲ್ದಾರ ಹಾಗೂ ತಾಪಂ ಇಓ ಅವರಿಗೆ ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ಶಾಸಕರಾದ ಎಂ ವೈ ಪಾಟೀಲ್ ಹೇರೂರು ಗ್ರಾಮದ ಮೂಲಭೂತ ಸೌಲಭ್ಯ ಒದಗಿಸಲು ರೂ 50 ಲಕ್ಷ ಜೊತೆಗೆ ಸಮುದಾಯ ಭವನ ನಿರ್ಮಾಣಕ್ಕೆ ರೂ 2 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಸನ್ಮಾನ್ಯ ಸಚಿವರಿಗೆ ಮನವಿ ಮಾಡಿದರು.

ನಂತರ ಸಚಿವರು ಸಿಎಂ ತಂಗಬೇಕಿದ್ದ ಶಾಲೆಗೆ ಭೇಟಿ‌ ನೀಡಿ ಮಕ್ಕಳೊಂದಿಗೆ ಆಪ್ತ ಸಂಭಾಷಣೆಯಲ್ಲಿ ತೊಡಗಿದರು.

ಸಚಿವರ ಮಾತಿನಿಂದ ಸ್ಪೂರ್ತಿಪಡೆದ ಮಕ್ಕಳು ಸಿಎಂ ಬರದಿರಿವುದು ದುಃಖದ ವಿಚಾರ ಆದರೆ ನಮ್ಮ ರೈತರು ಅನುಕೂಲಪಡೆದುಕೊಳ್ಳಲಿದ್ದಾರೆ.ಒಂದನ್ನು ಕಳೆದುಕೊಂಡರೆ ಮತ್ತೊಂದನ್ನು ಪಡೆದುಕೊಂಡಂತಾಗಿವೆ. ನಾವೆಲ್ಲ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ತಯರಾಗಿದ್ದೇವು ಆದರೆ ಕಾರ್ಯಕ್ರಮ ಮುಂದೂಡಿದ್ದು ನಿರಾಸೆ ತಂದಿದೆ ಎಂದಿ ಆಲವತ್ತುಕಂಡರು.

ಈ ಸಂದರ್ಭದಲ್ಲಿ ಶಾಸಕರಾದ ಎಂ ವೈ ಪಾಟೀಲ್, ತಿಪ್ಪಣ್ಣಪ್ಪ ಕಮಲನೂರು,‌ಜಿಲ್ಲಾಧಿಕಾರಿ ವೆಂಟೇಶ್ವಕುಮಾರ ಮತ್ತತರಿರಿದ್ದರು.‍

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago