ಇದು ಭಯಾನಕ ಕೃತ್ಯ, ಅತಿರೇಕದ ಘಟನೆ. ನಾಗರಿಕರನ್ನು ಕೊಲೆ ಮಾಡುತ್ತಿರುವ ಮ್ಯಾನ್ಮಾರ್ ಸೇನೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ. ಹೀಗೆಯೇ ಕಡು ಕೋಪದಿಂದ ವಾರ್ನಿಂಗ್ ಕೊಟ್ಟವರು ಅಮೆರಿಕ ಅಧ್ಯಕ್ಷ ಜೋ ಬೈಡನ್. ವಾರ್ನಿಂಗ್ ಕೊಟ್ಟಿದ್ದು ಮ್ಯಾನ್ಮಾರ್ ನಲ್ಲಿ ರಕ್ತದ ಕೋಡಿ ಹರಿಸುತ್ತಿರುವ ಸರ್ವಾಧಿಕಾರಿಗಳಿಗೆ. 1 ತಿಂಗಳಿಂದಲೂ ಮ್ಯಾನ್ಮಾರ್ ಹೊತ್ತಿ ಉರಿಯುತ್ತಿದೆ. ಅಲ್ಲಿ ಜನರನ್ನು ಕೋಳಿಗಳಂತೆ ಕೊಂದು ಹಾಕುತ್ತಿದೆ ಅಲ್ಲಿನ ಸೇನೆ.
ಇದು ‘ಮಾನವತೆ’ ಮಿಡಿಯುವ ಜಗತ್ತನ್ನೇ ರೊಚ್ಚಿಗೇಳುವಂತೆ ಮಾಡಿದೆ. ಹೀಗಿರುವಾಗಲೇ ಅಮೆರಿಕ ಸುಮ್ಮನೆ ಕೂರಲು ಆಗುತ್ತಾ ನೀವೆ ಹೇಳಿ..? ನೋ ಚಾನ್ಸ್. ಯಾಕಂದ್ರೆ ವಿಶ್ವದ ಎದುರು ದೊಡ್ಡಣ್ಣ ಎಂದು ಬಿಲ್ಡಪ್ ಕೊಡುವ ಅಮೆರಿಕ ಮ್ಯಾನ್ಮಾರ್ ಸೇನೆ ವಿರುದ್ಧ ಗರಂ ಆಗಿದೆ.
ಭಯಾನಕ: ಮಕ್ಕಳು, ಮಹಿಳೆಯರು ಸೇರಿ ಸುಮಾರು 250 ಕ್ಕೂ ಹೆಚ್ಚು ಅಮಾಯಕರ ಭೀಕರ ಹತ್ಯೆ ನಡೆದಿದೆ.
ಅಮೆರಿಕ ಅಧ್ಯಕ್ಷ ಬೈಡನ್ ಮ್ಯಾನ್ಮಾರ್ ನ ಸೇನಾಧಿಕಾರಿಗಳಿಗೆ ಈ ಮೂಲಕ ಪರೋಕ್ಷ ಯುದ್ಧದ ಎಚ್ಚರಿಕೆ ನೀಡಿದ್ದಾರೆ. ಯಾಂಗೂನ್ ನ ಅಮೆರಿಕ ರಾಯಭಾರ ಕಚೇರಿ ಮೇಲೂ ಮ್ಯಾನ್ಮಾರ್ ಸೇನೆ ಗುಂಡಿನ ದಾಳಿ ನಡೆಸಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಧಗಧಗಿಸುತ್ತಿರುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.
3ನೇ ಮಹಾಯುದ್ಧಕ್ಕೆ ರಣಕಹಳೆ..?: ಜಗತ್ತಿನಲ್ಲಿ ಕಮ್ಯುನಿಸ್ಟ್ ರಾಷ್ಟ್ರಗಳಿಗೂ, ಅಮೆರಿಕದ ನಾಯಕರಿಗೂ ಜಿದ್ದು ಇದ್ದೇ ಇದೆ. ಅದರಲ್ಲೂ ಮಿಲಿಟರಿ ಆಡಳಿತ ಶುರುವಾಯಿತು ಅಂದರೆ ಸಾಕು, ಅಮೆರಿಕ ಏನಾದರೂ ಒಂದು ಕ್ಯಾತೆ ತೆಗೆದು ಅಲ್ಲಿಗೆ ನುಗ್ಗಿ ಬಿಡುತ್ತದೆ. ಹೀಗೆಯೇ ಮ್ಯಾನ್ಮಾರ್ ಮೇಲೂ ಅಮೆರಿಕ ಸೇನೆ ದಾಳಿ ನಡೆಸುವ ಮಾತುಗಳನ್ನು ತಳ್ಳಿ ಹಾಕಲು ಸಾಧ್ಯವಿಲ್ಲ. ಅಕಸ್ಮಾತ್ ಹೀಗೆಯೇ ದಾಳಿ ನಡೆದಿದ್ದೇ ಆದರೆ ಪರಿಸ್ಥಿತಿ ಭಯಾನಕವಾಗಲಿದೆ. ಮ್ಯಾನ್ಮಾರ್ ಪಕ್ಕದಲ್ಲೇ ಕೂತಿರುವ ಅಮೆರಿಕ ಪಾಲಿನ ಶತ್ರು ಚೀನಾ ತಿರುಗಿ ಬೀಳಬಹುದು. ಆಗ ಈ ಕೋಳಿ ಜಗಳ 3 ನೇ ಮಹಾಯುದ್ಧಕ್ಕೆ ಆಹ್ವಾನ ನೀಡಿದಂತೆ ಆಗುತ್ತದೆ. ಏಕೆಂದರೆ ಈ ಮೊದಲು ನಡೆದಿರುವ ಮಹಾಯುದ್ಧಗಳು ಕೂಡ ಕೋಳಿ ಜಗಳದ ರೀತಿಯೇ ಆರಂಭವಾಗಿದ್ದವು ಎನ್ನುವುದನ್ನು ನೆನಪಿಡಬೇಕು.
ಮಿಲಿಟರಿ ಆಡಳಿತ ಶುರು..!: ಮ್ಯಾನ್ಮಾರ್‌ನಲ್ಲಿ 2020 ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನು ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದೂ ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್‌ಗೆ ತೆಗೆದುಕೊಂಡಿದೆ ಆ ಸೇನೆವು. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಅತಿಸೂಕ್ಷ್ಮವಾಗಿದೆ. ಕಂಡ ಕಂಡಲ್ಲಿ ಗುಂಡಿಟ್ಟು ಜನರನ್ನು ಕೊಲೆ ಮಾಡುತ್ತಿದೆ ಮ್ಯಾನ್ಮಾರ್ ಸೇನೆ.
ಸದ್ಯಕ್ಕೆ 450 ಕ್ಕೂ ಹೆಚ್ಚು ಹೋರಾಟಗಾರರು ಬಲಿ..?: ಈಗಾಗಲೇ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 450 ಕ್ಕೂ ಹೆಚ್ಚು ಜನರನ್ನು ಮ್ಯಾನ್ಮಾರ್ ಸೇನೆ ಬಲಿಪಡೆದಿದೆ. ಹೀಗಾಗಿಯೇ ನಾಗರಿಕರನ್ನು ಕೊಂದು ಹಾಕಿರುವ ಮ್ಯಾನ್ಮಾರ್ ಸೇನೆ ವಿರುದ್ಧ ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಜಾಪ್ರಭುತ್ವವಾದಿ ರಾಷ್ಟ್ರಗಳು ಮ್ಯಾನ್ಮಾರ್ ಮಿಲಿಟರಿ ಕ್ರಮವನ್ನು ಟೀಕಿಸಿವೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಅಲ್ಲಿನ ಸೇನಾಧಿಕಾರಿಗಳು, ಪ್ರತಿಭಟನೆ ನಡೆಸುತ್ತಿರುವ ಜನರ ನಿಯಂತ್ರಣ ಹಾಗೂ ಹೋರಾಟಗಾರನ್ನು ಚದುರಿಸಲು ಬಲಪ್ರಯೋಗ ಮಾಡುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹಲವರು ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವೂ ಆವರಿಸಿದೆ.
ಗಲ್ಲಿಗೂ ನುಗ್ಗಿದೆ ಮ್ಯಾನ್ಮಾರ್ ಸೇನೆ..!: ಸೇನಾ ಕ್ರಾಂತಿ ಪರ ಹಾಗೂ ವಿರುದ್ಧವಾಗಿ ಹೋರಾಟಗಳು ಭುಗಿಲೆದ್ದಿರುವುದು ಮ್ಯಾನ್ಮಾರ್ ನ ತತ್ತರಿಸುವಂತೆ ಮಾಡಿದೆ. ಆದರೆ ಇದನ್ನು ನೋಡಿ ತಣ್ಣಗೆ ಕೂರೋಕೆ ಮ್ಯಾನ್ಮಾರ್ ಈಗ ಪ್ರಜಾಪ್ರಭುತ್ವದ ರಾಷ್ಟ್ರವಾಗಿಯೇ ಉಳಿದಿಲ್ಲ. ಮೇಲಾಗಿ ಅಲ್ಲೊಂದು ಸರ್ಕಾರವೇ ಇಲ್ಲ. ಎಲ್ಲವನ್ನೂ ಸೇನಾಧಿಕಾರಿಗಳು ಬಿಗಿ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ.
ಹೀಗಾಗಿ ಪ್ರತಿಭಟನೆ ಮತ್ತು ಹೋರಾಟ ಹತ್ತಿಕ್ಕಲು ಮ್ಯಾನ್ಮಾರ್‌ನ ಸೇನೆ ಗಲ್ಲಿ ಗಲ್ಲಿಗಳಿಗೂ ಎಂಟ್ರಿ ಕೊಟ್ಟಿದೆ. ಭಾರಿ ಪ್ರಮಾಣದ ಯುದ್ಧ ಪರಿಕರಗಳನ್ನು ತೋರಿಸಿ ಜನರನ್ನ ಬೆದರಿಸುವ ತಂತ್ರ ಅನುಸರಿಸುತ್ತಿದೆ. ಆದರೂ ಜನ ಭಯಪಡದೇ ಹೋರಾಟಕ್ಕೆ ಸಾಥ್ ನೀಡುತ್ತಿದ್ದಾರೆ.
ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?: ಮ್ಯಾನ್ಮಾರ್‌ನಲ್ಲಿ 2020 ರ ನವೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. 75 ವರ್ಷದ ಸೂಕಿ ನೇತೃತ್ವದಲ್ಲಿ ಅವರ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು. ಚುನಾವಣೆಯಲ್ಲಿ ಮ್ಯಾನ್ಮಾರ್ ಸಂಸತ್ತಿನ 642 ಸ್ಥಾನಗಳ ಪೈಕಿ ಸೂಕಿ ನೇತೃತ್ವದ ಎನ್.ಎಲ್.ಡಿ ಪಕ್ಷ 396 ಸ್ಥಾನ ಪಡೆದಿತ್ತು. ಅಂದಹಾಗೆ ಪ್ರಜಾಪ್ರಭುತ್ವದ ಪರ ಗಟ್ಟಿಯಾಗಿ ನಿಂತು ಹೋರಾಟ ನಡೆಸಿದ್ದವರು ಆಂಗ್ ಸಾನ್ ಸೂಕಿ. ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತ ವಿರುದ್ಧ ಸತತ ಹೋರಾಟ ನಡೆಸಿದ್ದ ಸೂಕಿಗೆ ಇದೀಗ ಹಿನ್ನಡೆಯಾಗಿದೆ. ಸೂಕಿ ಬಂಧನ ಹಲವು ಅನುಮಾನಗಳಿಗೂ ಕಾರಣವಾಗಿದೆ.
ಅಲ್ಲದೇ ಮುಖ್ಯವಾಗಿ ಮಯನ್ಮಾರ್ ಈ ಮಿಲಿಟರಿ ಹಿಂಸಾತ್ಮಕ ಘರ್ಷಣೆಗಳು ಮತ್ತೊಂದು ಯುದ್ಧ ಅಂದರೆ ಮೂರನೇ ಮಹಾಯುದ್ಧಕ್ಕೆ ಕಾರಣವಾದರೂ ಆಶ್ಚರ್ಯ ಪಡಬೇಕಿಲ್ಲ.
# ಕೆ.ಶಿವು.ಲಕ್ಕಣ್ಣವರ
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…